ಇಸ್ಲಾಮಬಾದ್ : ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಸಂಸತ್ತಿನಲ್ಲಿ ಬಹುಮತ ಕಳೆದುಕೊಂಡಿದ್ದಾರೆ. ಪಾಕಿಸ್ತಾನ್ ತೆಹರಿಕ್ ಇ ಇನ್ಸಾಫ್ ಮೈತ್ರಿಕೂಟಕ್ಕೆ ನೀಡಿದ್ದ ಬೆಂಬಲವನ್ನು ಮುತಾಹಿದಾ ಖುವಾಮಿ ಮೂವ್‌ಮೆಂಟ್ ಪಾಕಿಸ್ತಾನ್ ವಾಪಸ್ ಪಡೆದು ಪಾಕಿಸ್ತಾನ್ ಪೀಪಲ್ ಪಾರ್ಟಿ ಜತೆ ಕೈಜೋಡಿಸಿದೆ.
ವಿಶ್ವಾಸಮತ ಯಾಚನೆಗೆ ಮೊದಲೇ ಮುತಾಹಿದಾ ಕ್ವಾಮಿ ಮೂವ್‌ಮೆಂಟ್ ಪಾಕಿಸ್ತಾನ್ (ಎಂಕ್ಯುಎಂ-ಪಿ) ಪಕ್ಷವು ಪಾಕಿಸ್ತಾನದ ತೆಹ್ರೀಕ್-ಇ-ಇನ್ಸಾಫ್‌ನ (ಪಿಟಿಐ) ಮೈತ್ರಿಯನ್ನು ತೊರೆದು ವಿರೋಧ ಪಕ್ಷಗಳೊಂದಿಗೆ ಕೈಜೋಡಿಸಿದೆ ಆ ಹಿನ್ನೆಲೆಯಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರ ಪಿಟಿಐ ಪಕ್ಷವು ಬಹುಮತ ಕಳೆದುಕೊಂಡಿದೆ.ಈ ಕುರಿತು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ(ಪಿಪಿಪಿ) ಅಧ್ಯಕ್ಷ ಬಿಲಾವಲ್ ಭುಟ್ಟೋ ಬುಧವಾರ ಮುಂಜಾನೆ ಟ್ವೀಟ್ ಮಾಡಿದ್ದು, ಪಿಪಿಪಿ ಮತ್ತು ಎಂಕ್ಯೂಎಂ-ಪಿ ಪಕ್ಷಗಳು ಮೈತ್ರಿ ಒಪ್ಪಂದ ಮಾಡಿಕೊಂಡಿವೆ ಎಂದು ತಿಳಿಸಿದ್ದಾರೆ.
ಈ ಬೆಳವಣಿಗೆಗಳ ಬೆನ್ನಲ್ಲೇ ಇಮ್ರಾನ್ ಖಾನ್ ರಾಜೀನಾಮೆ ಬಹುತೇಕ ಖಚಿತ ಎನ್ನಲಾಗುತ್ತಿದೆ. ಮಾರ್ಚ್ 31 ಅಥವಾ ಏಪ್ರಿಲ್ 2ರ ನಂತರ ಇಮ್ರಾನ್ ಖಾನ್ ವಿಶ್ವಾಸಮತ ಪರೀಕ್ಷೆ ಎದುರಿಸಬೇಕಿದೆ.ಪ್ರಧಾನಿ ಇಮ್ರಾನ್ ಖಾನ್ ಅಧಿಕಾರ ಉಳಿಸಿಕೊಳ್ಳಲು 342 ಸದಸ್ಯ ಬಲದ ಸಂಸತ್ತಿನಲ್ಲಿ 172 ಮತಗಳನ್ನು ಪಡೆಯುವುದು ಅನಿವಾರ್ಯವಾಗಿದೆ. ಆಡಳಿತಾರೂಢ ಪಕ್ಷದೊಂದಿಗೆ ಮೈತ್ರಿಯಲ್ಲಿದ್ದ 23 ಸದಸ್ಯರು ಇಮ್ರಾನ್ ಅವರಿಗೆ ನೀಡಿದ್ದ ಬೆಂಬಲವನ್ನು ವಾಪಸ್ಸು ಪಡೆದಿದ್ದಾರೆ.ಆಡಳಿತ ಪಕ್ಷ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್‌ನ ಸುಮಾರು 24 ಸಂಸದರೂ ಬಂಡಾಯ ಘೋಷಿಸಿದ್ದಾರೆ.
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…