Featured

ಸಂಸದೆ ಪಿ ಟಿ ಉಷಾ ಪತಿ ಶ್ರೀನಿವಾಸನ್ ನಿಧನ: ಪ್ರಧಾನಿ ಮೋದಿ ಸಂತಾಪ – vishwanews24

ಸಂಸದೆ ಪಿ ಟಿ ಉಷಾ ಪತಿ ಶ್ರೀನಿವಾಸನ್ ನಿಧನ: ಪ್ರಧಾನಿ ಮೋದಿ ಸಂತಾಪ

ಕೋಝಿಕ್ಕೋಡ್: ರಾಜ್ಯಸಭಾ ಸಂಸದೆ ಮತ್ತು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ​​ಅಧ್ಯಕ್ಷೆ ಡಾ. ಪಿ.ಟಿ. ಉಷಾ ಅವರ ಪತಿ ವಿ. ಶ್ರೀನಿವಾಸನ್ (64ವ) ಇಂದು ಶುಕ್ರವಾರ ನಸುಕಿನ ಜಾವ ನಿಧನರಾದರು. ಅವರು ತಿಕ್ಕೋಡಿ ಪೆರುಮಾಳ್‌ಪುರಂನಲ್ಲಿರುವ ಅವರ ನಿವಾಸದಲ್ಲಿ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಕುಸಿದು ಬಿದ್ದರು. ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಘಟನೆಯ ಸಮಯದಲ್ಲಿ ಉಷಾ ಮನೆಯಲ್ಲಿ ಇರಲಿಲ್ಲ. ಸಂಸತ್ತಿನ ಅಧಿವೇಶನದಲ್ಲಿ ಭಾಗವಹಿಸಲು ದೆಹಲಿಯಲ್ಲಿದ್ದ ಅವರು ಸುದ್ದಿ ತಿಳಿದ ತಕ್ಷಣ ಊರಿಗೆ ತೆರಳಿದ್ದಾರೆ. ಶ್ರೀನಿವಾಸನ್ ಪೊನ್ನಾನಿಯ ಕುಟ್ಟಿಕ್ಕಾಡ್‌ನಲ್ಲಿರುವ ವೆಂಗಲಿ ಥರಾವದ್‌ನ ನಾರಾಯಣನ್ ಮತ್ತು ಸರೋಜಿನಿ ದಂಪತಿಯ ಪುತ್ರರಾಗಿದ್ದು, ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ನಿವೃತ್ತ ಡೆಪ್ಯೂಟಿ ಎಸ್‌ಪಿಯಾಗಿದ್ದರು.

1991 ರಲ್ಲಿ ತಮ್ಮ ದೂರದ ಸಂಬಂಧಿ ಪಿ.ಟಿ. ಉಷಾ ಅವರನ್ನು ವಿವಾಹವಾದರು. ದಂಪತಿಗೆ ಡಾ. ಉಜ್ವಲ್ ವಿಘ್ನೇಶ್ ಎಂಬ ಪುತ್ರನಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಪಿ.ಟಿ. ಉಷಾ ಅವರಿಗೆ ದೂರವಾಣಿ ಕರೆ ಮಾಡಿ ಸಂತಾಪ ಸೂಚಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago