ಕರಾವಳಿಯ ಜೀವನಾಡಿಯಾದ ಕಾರವಾರ-ಬೆಂಗಳೂರು ವಯಾ ಪಡೀಲ್ ಬೈಪಾಸ್ ಸೂಪರ್ ಪಾಸ್ಟ್ ರೈಲಿಗೆ , ಉಡುಪಿ ಜಿಲ್ಲೆಯ ಐದು ಪ್ರಮುಖ ಪುಣ್ಯ ನದಿಗಳು ಸಂಗಮಿಸಿ ಸೃಷ್ಟಿಯಾಗುವ ಪ್ರಾಕೃತಿಕ ಅಚ್ಚರಿ ಪಂಚಗಂಗಾವಳಿ ನದಿಯ ಹೆಸರಿನಿಂದ ಆಯ್ದ”ಪಂಚಗಂಗಾ ಎಕ್ಸ್‌ಪ್ರೆಸ್” ಎಂಬ ಹೆಸರನ್ನು ಕೆಂದ್ರ ರೈಲ್ವೆ ಸಚಿವಾಲಯ ನಾಮಕರಣ ಮಾಡಿ ಆದೇಶಿಸಿದೆ.
ಕ್ಷೇತ್ರದ ಜನರ ಅಪೇಕ್ಷೆಯಂತೆ ಹಿಂದಿನ ರೈಲ್ವೆ ರಾಜ್ಯ ಸಚಿವರಾದ ಶ್ರೀ ಸುರೇಶ್ ಅಂಗಡಿಯವರನ್ನು ಭೇಟಿಯಾಗಿ ಕರಾವಳಿಯ ಬಹುಮುಖ್ಯ ಪುಣ್ಯ ಕ್ಷೇತ್ರಗಳ ಮೂಲಕ ಹರಿಯುವ ಪಂಚಗಂಗಾ, ಜಿಲ್ಲೆಯ ತೀರ್ಥ ಕ್ಷೇತ್ರ, ಪ್ರವಾಸೊದ್ಯಮ, ಮೀನುಗಾರಿಕೆ, ಕೃಷಿ ಹಾಗು ಜನಜೀವನಕ್ಕೆ ಅದಾರವಾಗಿದ್ದು, ಈ ಕಾರಣದಿಂದ ನೂತನ ಬೆಂಗಳೂರು-ಕಾರವಾರ ರೈಲಿಗೆ “ಪಂಚಗಂಗಾ” ಎನ್ನುವ ಹೆಸರಿಡಬೇಕು ಎಂದು ಕೇಳಿಕೊಳ್ಳಲಾಗಿತ್ತು.
ಜನರ ಅಪೇಕ್ಷೆಯನ್ನು ಗೌರವಿಸಿ, ಜಿಲ್ಲೆಯ ಸಂಸ್ಕೃತಿಯನ್ನು ಬಿಂಬಿಸುವ “ಪಂಚ ಗಂಗಾ ಎಕ್ಸ್‌ಪ್ರೆಸ್” ಎಂಬ ಹೆಸರನ್ನು ಕರಾವಳಿಯ ಜೀವನಾಡಿಯದ ಬೆಂಗಳೂರು-ಕಾರವಾರ ರೈಲಿಗೆ ನಾಮಕರಣ ಮಾಡಿದ ಕೇಂದ್ರ ಸರಕಾರಕ್ಕೆ ಹಾಗು ರೈಲ್ವೆ ಸಚಿವಾಲಯಕ್ಕೆ ಸಂಸದೆ ಶೋಭಾ ಕರಂದ್ಲಾಜೆಯವರು ತುಂಬು ಧನ್ಯವಾದಗಳು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…