ಬೆಂಗಳೂರು: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಹೇಳಿಕೆ ನೀಡಿದ್ದ ಆರೋಪದಡಿ ಸಂಸದ ಅನಂತ್ ಕುಮಾರ್ ಹೆಗಡೆ ಅವರ ವಿರುದ್ಧ ದಾಖಲಿಸಿದ್ದ ಪ್ರಕರಣವನ್ನು ನ್ಯಾಯಾಲಯ ರದ್ದುಪಡಿಸಿ ಆದೇಶಿಸಿದೆ.
ಈ ಪ್ರಕರಣ ರದ್ದು ಕೋರಿ ಸಂಸದ ಅನಂತ್ ಕುಮಾರ್ ಹೆಗಡೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣಾ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ತ್ಯಾಗರಾಜ ಎನ್.ಇನವಳ್ಳಿ, ಆರೋಪಕ್ಕೆ ಸೂಕ್ತ ಸಾಕ್ಷ್ಯಾಧಾರ ಲಭ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಪ್ರಕರಣ ರದ್ದುಪಡಿಸಿ ಆದೇಶಿಸಿದ್ದಾರೆ.
ಪ್ರಕರಣದ ಹಿನ್ನೆಲೆ
2016ರ ಫೆಬ್ರವರಿ 28 ರಂದು ಶಿರಸಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗೋಷ್ಠಿ ನಡೆಸಿದ್ದ ಸಂಸದ ಅನಂತ್ ಕುಮಾರ್ ಹೆಗಡೆ, ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಇಡೀ ದೇಶದ ಭಯೋತ್ಪಾದಕ ಕೇಂದ್ರವಾಗಿದೆ ಎಂಬ ವಿವಾದಿತ ಹೇಳಿಕೆ ನೀಡಿದ್ದರು. ಈ ಸಂಬಂಧ ಹೆಗಡೆ ವಿರುದ್ಧ ಸ್ಥಳೀಯ ಮುರಾದ್ ಹುಸೇನ್ ಎಂಬುವರು ಶಿರಸಿಯ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…