Featured

ಸಂಸದ ಅನಂತ್‌ ಕುಮಾರ್‌ ಹೆಗಡೆ ವಿರುದ್ಧ ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸಿದ ನ್ಯಾಯಾಲಯ -Vishwanews24

ಸಂಸದ ಅನಂತ್‌ ಕುಮಾರ್‌ ಹೆಗಡೆ ವಿರುದ್ಧ ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸಿದ ನ್ಯಾಯಾಲಯ -Vishwanews24

ಬೆಂಗಳೂರುಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಹೇಳಿಕೆ ನೀಡಿದ್ದ ಆರೋಪದಡಿ ಸಂಸದ ಅನಂತ್ ಕುಮಾರ್ ಹೆಗಡೆ ಅವರ ವಿರುದ್ಧ ದಾಖಲಿಸಿದ್ದ ಪ್ರಕರಣವನ್ನು ನ್ಯಾಯಾಲಯ ರದ್ದುಪಡಿಸಿ ಆದೇಶಿಸಿದೆ.

ಈ ಪ್ರಕರಣ ರದ್ದು ಕೋರಿ ಸಂಸದ ಅನಂತ್ ಕುಮಾರ್ ಹೆಗಡೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣಾ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ತ್ಯಾಗರಾಜ ಎನ್.ಇನವಳ್ಳಿ, ಆರೋಪಕ್ಕೆ ಸೂಕ್ತ ಸಾಕ್ಷ್ಯಾಧಾರ ಲಭ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಪ್ರಕರಣ ರದ್ದುಪಡಿಸಿ ಆದೇಶಿಸಿದ್ದಾರೆ.

ಪ್ರಕರಣದ ಹಿನ್ನೆಲೆ

2016ರ ಫೆಬ್ರವರಿ 28 ರಂದು ಶಿರಸಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗೋಷ್ಠಿ ನಡೆಸಿದ್ದ ಸಂಸದ ಅನಂತ್ ಕುಮಾರ್ ಹೆಗಡೆ, ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಇಡೀ ದೇಶದ ಭಯೋತ್ಪಾದಕ ಕೇಂದ್ರವಾಗಿದೆ ಎಂಬ ವಿವಾದಿತ ಹೇಳಿಕೆ ನೀಡಿದ್ದರು. ಈ ಸಂಬಂಧ ಹೆಗಡೆ ವಿರುದ್ಧ ಸ್ಥಳೀಯ ಮುರಾದ್ ಹುಸೇನ್ ಎಂಬುವರು ಶಿರಸಿಯ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

1 day ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

1 day ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

1 day ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

1 day ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

1 day ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

1 day ago