Featured

ಸಂಸದ ಬಿ. ವೈ ರಾಘವೇಂದ್ರ ಅವರ ಫೋಟೋಗ್ರಾಫರ್ ಕೆರೆಯಲ್ಲಿ ಮುಳುಗಿ ಸಾವು – Vishwanews24

ಸಂಸದ ಬಿ. ವೈ ರಾಘವೇಂದ್ರ ಅವರ ಫೋಟೋಗ್ರಾಫರ್ ಕೆರೆಯಲ್ಲಿ ಮುಳುಗಿ ಸಾವು

ರಾಮನಗರ: ಸಂಸದ ಬಿ. ವೈ ರಾಘವೇಂದ್ರ ಅವರ ಫೋಟೋಗ್ರಾಫರ್ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದ್ದು, ಸಂಸದರು ಸಂತಾಪ ಸೂಚಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸಂಸದರು, ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರೀಯರಾಗಿ ಪಾಲ್ಗೊಳ್ಳುತ್ತಿದ್ದ ಸ್ನೇಹಜೀವಿ ಹಾಗೂ ನನ್ನ ಫೋಟೋಗ್ರಾಫರ್ ಆಗಿದ್ದ ಪ್ರಸನ್ನ ಭಟ್  ಅವರ ಅಕಾಲಿಕ ನಿಧನದ ಸುದ್ದಿಯಿಂದ ದುಃಖಿತನಾಗಿದ್ದೇನೆ. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಲಿ ಹಾಗೂ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.

ಇವರು ಶಿವಮೊಗ್ಗ ಜಿಲ್ಲೆ ಹೊಸನಗರ ನಿವಾಸಿಯಾಗಿರುವ ಪ್ರಸನ್ನ ಭಟ್ (25) ಕನಕಪುರ ತಾಲೂಕಿನ ಮಾವತ್ತೂರು ಕೆರೆಯಲ್ಲಿ ಸಂಜೆ ಈಜಲು ಹೋಗಿದ್ದ ಸಂದರ್ಭದಲ್ಲಿ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಪ್ರಸನ್ನ ಭಟ್ ಆರು ಜನರ ತಂಡ ಕನಕಪುರದ ಸ್ನೇಹಿತನ ಮನೆಗೆ ಬಂದಿದ್ದರು. ಅಂತೆಯೇ ಸಂಜೆ ಈಜಾಡಲು ಎಂದು ಮಾವತ್ತೂರು ಕೆರೆ ತೆರಳಿದ್ದರು. ಈಜಾಡುವ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಇನ್ ಸ್ಟಾಗ್ರಾಂನಲ್ಲಿ ಮಾವತ್ತೂರು ಕೆರೆಯ ವಿಡಿಯೋ ನೋಡಿದ್ದರು. ಹಾಗಾಗಿ ಅಲ್ಲಿಗೆ ತೆರಳಿದ್ದರು ಎಂದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ. ಪ್ರಸನ್ನ ಭಟ್ ಅವರಿಗಾಗಿ ಕೆರೆಯಲ್ಲಿ ಶೋಧ ಕಾರ್ಯ ನಡೆಸಲಾಗಿತ್ತು. ರಾತ್ರಿ ಮೃತದೇಹ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಗಾಗಿ ದಯಾನಂದ ಸಾಗರ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ.

ಫೋಟೋಗ್ರಫಿ, ವಿಡಿಯೋಗ್ರಫಿಯಲ್ಲಿ ನಿಪುಣರಾಗಿದ್ದರು. ಕೆಲ ವರ್ಷದಿಂದ ಸಂಸದ ಬಿ.ವೈ.ರಾಘವೇಂದ್ರ ಅವರ ಫೋಟೊ ಗ್ರಾಫರ್  ಆಗಿ ಕಾರ್ಯ ನಿರ್ಹಿಸುತ್ತಿದ್ದರು. ಸಂಸದ ರಾಘವೇಂದ್ರ ಅವರ ಸಾಮಾಜಿಕ ಜಾಲತಾಣಗಳು, ಮೀಡಿಯಾ ವಿಭಾಗವನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡುತ್ತಿದ್ದರು. ಇದೆ ಕಾರಣಕ್ಕೆ ಅವರು ಸಂಸದ ರಾಘವೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಕುಟುಂಬದವರಿಗೆ ಆಪ್ತರಾಗಿದ್ದರು.

ಕೂಡಲೇ ವಿಷಯ ತಿಳಿದು ಕನಕಪುರ ಗಾಮಾಂತರ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ದಯಾನಂದ ಸಾಗರ್ ಆಸ್ಪತ್ರೆಗೆ ರವಾನಿಸಲಗಿತ್ತು. ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

9 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago