ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ ಅಖಿಲೇಶ್ ಯಾದವ್ – Vishwanews24

Featured, ರಾಷ್ಟ್ರ ನ್ಯೂಸ್

ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ ಅಖಿಲೇಶ್ ಯಾದವ್ – Vishwanews24

ಲಕ್ನೋ: ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಅಖಿಲೇಶ್ ಯಾದವ್ ಅವರ ಈ ನಡೆ ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತು ಯೋಗಿ ಆದಿತ್ಯನಾಥ್ ವಿರುದ್ಧ ಅವರು ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳುವ ಸಿದ್ಧತೆಯಲ್ಲಿದ್ದಾರೆ ಎಂಬುದಕ್ಕೆ ಸಾಕ್ಷಿಯಾಗಿದೆ.

ಈ ಮುನ್ನ 2019ರ ರಾಷ್ಟ್ರೀಯ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಐದು ಲೋಕಸಭಾ ಸ್ಥಾನಗಳನ್ನು ಗೆದ್ದಿತ್ತು. ಅಖಿಲೇಶ್ ಯಾದವ್ ಅವರು ಪೂರ್ವ ಉತ್ತರ ಪ್ರದೇಶದ ಅಜಂಗಢದಿಂದ ಸಂಸದರಾಗಿದ್ದರು. ಆದರೆ ಇತ್ತೀಚೆಗೆ ಮಾರ್ಚ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಅಖಿಲೇಶ್ ಯಾದವ್ ಅವರು ತಮ್ಮ ಕುಟುಂಬದ ಭದ್ರಕೋಟೆಯಾದ ಕರ್ಹಾಲ್‍ನಿಂದ ಸ್ಪರ್ಧಿಸಿದರು. 2027ರ ಯುಪಿ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಯುಪಿ ವಿಧಾನಸಭೆಯಲ್ಲಿ ಬಿಜೆಪಿಯನ್ನು ಎದುರಿಸಲು ಯೋಜಿಸುತ್ತಿದ್ದಾರೆ ಎಂದು ಸೂಚಿಸುತ್ತದೆ.

ದೇವಸ್ಥಾನಗಳ ಜಾತ್ರೋತ್ಸವಗಳಲ್ಲಿ ಹಿಂದೂ ವ್ಯಾಪಾರಸ್ಥರಿಗೆ ಮಾತ್ರ ಪ್ರವೇಶ ; ದಯವಿಟ್ಟು ನಮಗೆ ವ್ಯಾಪಾರ ಮಾಡಲು ಅವಕಾಶ ಕೊಡಿ :ಮುಸ್ಲಿಂ ವ್ಯಾಪಾರಸ್ಥರ ಅಳಲು  – Vishwanews24

Leave a Reply