ನವದೆಹಲಿ: ಸಂಸ್ಕರಿಸಿದ ಆಹಾರಗಳ ಸೇವನೆಯಿಂದಾಗುವ ಅಪಾಯಗಳು, ರೈತರ ಸಮಸ್ಯೆಗಳು ಹಾಗೂ ರಿಂಗ್ ರಸ್ತೆಗೆ ಭೂಮಿ ನೀಡಿದ ರೈತರ ಸಮಸ್ಯೆಗಳ ಬಗ್ಗೆ ಇಂದು ಲೋಕಸಭೆಯ ಶೂನ್ಯ ವೇಳೆಯಲ್ಲಿ ರಾಜ್ಯ ಬಿಜೆಪಿ ಸಂಸದರು ದನಿ ಎತ್ತಿದರು. ಸಂಸದರಾದ ತೇಜಸ್ವಿ ಸೂರ್ಯ , ಬಿ.ವೈ ರಾಘವೇಂದ್ರ ಮತ್ತು ಡಾ.ಸಿ.ಎನ್ ಮಂಜುನಾಥ್ ಅವರು ವಿವಿಧ ವಿಷಯಗಳ ಕುರಿತು ಮಾತನಾಡಿ, ಸರ್ಕಾರದ ಗಮನ ಸೆಳೆದರು. ಮಕ್ಕಳ ಆರೋಗ್ಯ, ರೈತರ ಪರಿಸ್ಥಿತಿ ಮತ್ತು ಅಭಿವೃದ್ಧಿ ಯೋಜನೆಗಳ ಪರಿಹಾರದಂತಹ ಮಹತ್ವದ ಸಮಸ್ಯೆಗಳನ್ನ ಅವರು ಪ್ರಸ್ತಾಪಿಸಿದರು.
ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಸಂಸ್ಕರಿಸಿದ ಆಹಾರ ಉತ್ಪನ್ನಗಳಿಂದಾಗುವ ಅಪಾಯಗಳ ಬಗ್ಗೆ ಮಾತನಾಡಿ, ಇದರಿಂದ ಮಕ್ಕಳಲ್ಲಿ ಒಬೆಸಿಟಿ ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದರು. ನೂಡಲ್ಸ್, ಕೂಲ್ ಡ್ರಿಂಕ್ಸ್ ಸೇರಿದಂತೆ ಹತ್ತಾರು ಉತ್ಪನ್ನಗಳನ್ನು ಮಕ್ಕಳು ಹೆಚ್ಚು ಸೇವಿಸುತ್ತಿರುವುದು ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಸಂಸ್ಕರಿಸಿದ ಆಹಾರ ಉತ್ಪನ್ನಗಳಿಗೆ ಸರಿಯಾದ ವ್ಯಾಖ್ಯಾನ ಮಾಡಬೇಕು ಮತ್ತು ಪ್ಯಾಕೇಜಿಂಗ್ ಮೇಲೆ ಅದನ್ನು ಸ್ಪಷ್ಟವಾಗಿ ನಮೋದಿಸಬೇಕು ಎಂದು ಆಗ್ರಹಿಸಿದರು. ಮಕ್ಕಳಿಗೆ ಇಂತಹ ಉತ್ಪನ್ನಗಳ ಸೇವನೆ ನಿರ್ಬಂಧಿಸುವ ನಿಟ್ಟಿನಲ್ಲಿ ಸರ್ಕಾರ ಜಾಹೀರಾತು ಪ್ರಕಟಿಸಬೇಕು ಎಂದು ಮನವಿ ಮಾಡಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…