Featured

ಸಂಸ್ಕರಿಸಿದ ಆಹಾರ ಸೇವನೆಯಿಂದಾಗುವ ಅಪಾಯ, ರೈತರ ಸಮಸ್ಯೆಗಳ ಬಗ್ಗೆ ದನಿ ಎತ್ತಿದ ರಾಜ್ಯ ಬಿಜೆಪಿ ಸಂಸದರು – vishwanews24

ಅಡಿಕೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಬಿ.ವೈ ರಾಘವೇಂದ್ರ ಮನವಿ

ರೈತರಿಗೆ ಪರಿಹಾರ ನೀಡುವಂತೆ ಡಾ.ಮಂಜುನಾಥ್‌ ಆಗ್ರಹ

ಲೋಕಸಭೆ ಶೂನ್ಯವೇಳೆಯಲ್ಲಿ ರಾಜ್ಯ ಬಿಜೆಪಿ ಸಂಸದರ ದನಿ

ನವದೆಹಲಿ: ಸಂಸ್ಕರಿಸಿದ ಆಹಾರಗಳ  ಸೇವನೆಯಿಂದಾಗುವ ಅಪಾಯಗಳು, ರೈತರ ಸಮಸ್ಯೆಗಳು ಹಾಗೂ ರಿಂಗ್‌ ರಸ್ತೆಗೆ ಭೂಮಿ ನೀಡಿದ ರೈತರ ಸಮಸ್ಯೆಗಳ ಬಗ್ಗೆ ಇಂದು ಲೋಕಸಭೆಯ ಶೂನ್ಯ ವೇಳೆಯಲ್ಲಿ ರಾಜ್ಯ ಬಿಜೆಪಿ ಸಂಸದರು ದನಿ ಎತ್ತಿದರು. ಸಂಸದರಾದ ತೇಜಸ್ವಿ ಸೂರ್ಯ , ಬಿ.ವೈ ರಾಘವೇಂದ್ರ ಮತ್ತು ಡಾ.ಸಿ.ಎನ್‌ ಮಂಜುನಾಥ್‌ ಅವರು ವಿವಿಧ ವಿಷಯಗಳ ಕುರಿತು ಮಾತನಾಡಿ, ಸರ್ಕಾರದ ಗಮನ ಸೆಳೆದರು. ಮಕ್ಕಳ ಆರೋಗ್ಯ, ರೈತರ ಪರಿಸ್ಥಿತಿ ಮತ್ತು ಅಭಿವೃದ್ಧಿ ಯೋಜನೆಗಳ ಪರಿಹಾರದಂತಹ ಮಹತ್ವದ ಸಮಸ್ಯೆಗಳನ್ನ ಅವರು ಪ್ರಸ್ತಾಪಿಸಿದರು.

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಸಂಸ್ಕರಿಸಿದ ಆಹಾರ ಉತ್ಪನ್ನಗಳಿಂದಾಗುವ ಅಪಾಯಗಳ ಬಗ್ಗೆ ಮಾತನಾಡಿ, ಇದರಿಂದ ಮಕ್ಕಳಲ್ಲಿ ಒಬೆಸಿಟಿ ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದರು. ನೂಡಲ್ಸ್, ಕೂಲ್ ಡ್ರಿಂಕ್ಸ್ ಸೇರಿದಂತೆ ಹತ್ತಾರು ಉತ್ಪನ್ನಗಳನ್ನು ಮಕ್ಕಳು ಹೆಚ್ಚು ಸೇವಿಸುತ್ತಿರುವುದು ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಸಂಸ್ಕರಿಸಿದ ಆಹಾರ ಉತ್ಪನ್ನಗಳಿಗೆ ಸರಿಯಾದ ವ್ಯಾಖ್ಯಾನ ಮಾಡಬೇಕು ಮತ್ತು ಪ್ಯಾಕೇಜಿಂಗ್ ಮೇಲೆ ಅದನ್ನು ಸ್ಪಷ್ಟವಾಗಿ ನಮೋದಿಸಬೇಕು ಎಂದು ಆಗ್ರಹಿಸಿದರು. ಮಕ್ಕಳಿಗೆ ಇಂತಹ ಉತ್ಪನ್ನಗಳ ಸೇವನೆ ನಿರ್ಬಂಧಿಸುವ ನಿಟ್ಟಿನಲ್ಲಿ ಸರ್ಕಾರ ಜಾಹೀರಾತು ಪ್ರಕಟಿಸಬೇಕು ಎಂದು ಮನವಿ ಮಾಡಿದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago