ಬೆಂಗಳೂರು: ದೈವಾರಾಧನೆ ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದರು, ಇದು ನಿಜವಲ್ಲ ಎಂದು ಚೇತನ್ ಹೇಳಿದ್ದರು. ಈ ವಿಚಾರದ ಬಗ್ಗೆ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಹೀಗಿರುವಾಗಲೇ ರಿಷಬ್ ಶೆಟ್ಟಿ ಅವರು ಪರೋಕ್ಷವಾಗಿ ಚೇತನ್ಗೆ ತಿರುಗೇಟು ನೀಡಿದ್ದಾರೆ. ‘ಈ ವಿಚಾರದಲ್ಲಿ ನಾನು ಯಾರಿಗೂ ಉತ್ತರ ಕೊಡಬೇಕಾಗಿಲ್ಲ’ ಎಂಬ ಮಾತನ್ನು ರಿಷಬ್ ಹೇಳಿದ್ದಾರೆ.
‘ನಾನು ಈ ಸಿನಿಮಾ ಮಾಡಬೇಕಾದ್ರೆ ಮೂಲ ನಿವಾಸಿಗಳು ನನ್ನ ಜೊತೆಯಲ್ಲಿದ್ದರು. ಚಿಕ್ಕಂದಿನಿಂದಲೇ ನಾವು ದೈವ ನಂಬಿದ್ದೇವೆ. ಇಂಥದ್ದೊಂದು ಕತೆ ಹೇಳೋಕೆ ಹೋಗ್ತಿದ್ದೀನಿ ಎಂದಾಗ ಇಲ್ಲಿನ ಮೂಲ ಜನರಿಗೆ ನೋವಾಗಬಾರದು ಎಂದು ನಾನು ಬಯಸಿದ್ದೆ. ಎಲ್ಲೂ ದೈವ ದೇವಾದಿಗಳಿಗೆ, ಇದನ್ನು ಆರಾಧಿಸುವ ಜನರಿಗೆ ನೋವಾಗಬಾರದು, ಎಲ್ಲೂ ಕೂಡ ತಪ್ಪಾಗಬಾರದು ಎಂಬುದು ನನ್ನ ಉದ್ದೇಶ ಆಗಿತ್ತು’ ಎಂದಿದ್ದಾರೆ ರಿಷಬ್.
‘ಇದಕ್ಕೆ ಬೇಕಾದ ಎಲ್ಲಾ ಮುಂಜಾಗ್ರತೆಗಳನ್ನು ನಾನು ತೆಗೆದುಕೊಂಡಿದ್ದೆ. ನನ್ನ ಜೊತೆಯಲ್ಲೇ ಅವರನ್ನು ಇರಿಸಿಕೊಂಡು ಪ್ರತಿಯೊಂದು ಶಾಟ್ ತೆಗೆದಿದ್ದೇವೆ. ದೈವಾರಾಧನೆಗೆ ಸಂಬಂಧಿಸಿದ ಪ್ರತಿ ದೃಶ್ಯಗಳನ್ನು ಅಲ್ಲಿನ ಜನರಿಗೆ ತೋರಿಸುತ್ತಿದ್ದೆವು. ಈ ವಿಚಾರದಲ್ಲಿ ನಾನು ಯಾರಿಗೂ ಉತ್ತರ ಕೊಡಬೇಕಾಗಿಲ್ಲ. ಆ ಬಗ್ಗೆ ನೋ ಕಾಮೆಂಟ್ಸ್. ಅದಕ್ಕೆ ಸಂಬಂಧ ಪಟ್ಟವರು ಮಾತನಾಡುತ್ತಾರೆ. ಅದಕ್ಕೆಲ್ಲಾ ನಾವೇಕೆ ತಲೆ ಕೆಡಿಸಿಕೊಳ್ಳಬೇಕು’ ಎಂದಿದ್ದಾರೆ ರಿಷಬ್.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…