Featured

ಸಕಾಲಕ್ಕೆ ಚಿಕಿತ್ಸೆ ಸಿಗದೇ ಮಗು, ಗರ್ಭಿಣಿ ಸಾವು: ಮನನೊಂದು ಪತಿ ಆತ್ಮಹತ್ಯೆಗೆ ಯತ್ನ – vishwanews24

ಸಕಾಲಕ್ಕೆ ಚಿಕಿತ್ಸೆ ಸಿಗದೇ ಮಗು, ಗರ್ಭಿಣಿ ಸಾವು: ಮನನೊಂದು ಪತಿ ಆತ್ಮಹತ್ಯೆಗೆ ಯತ್ನ

ಹುಬ್ಬಳ್ಳಿ: ಸಕಾಲಕ್ಕೆ ಸೂಕ್ತ ಚಿಕಿತ್ಸೆ ಸಿಗದೆ ಹೊಟ್ಟೆಯಲ್ಲೇ ಮಗು ಮತ್ತು ಚಿಕಿತ್ಸೆ ಫಲಿಸದೆ ಗರ್ಭಿಣಿ ರಾಧಿಕಾ ಮಲ್ಲೇಶ್ ಗಡ್ಡಿಹೊಳಿ (19) ಸಾವು  ಪ್ರಕರಣ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ಪತ್ನಿ ಸಾವಿನ ಸುದ್ದಿ ತಿಳಿದು ವಿಷ ಸೇವಿಸಿ ಪತಿಯೂ ಆತ್ಮಹತ್ಯೆಗೆ ಯತ್ನಸಿರುವ ಘಟನೆ ನಡೆದಿದೆ. ಮಲ್ಲೇಶ್​(25) ಆತ್ಮಹತ್ಯೆಗೆ ಯತ್ನಿಸಿದ ರಾಧಿಕಾ ಪತಿ. ಸದ್ಯ ಮಲ್ಲೇಶ್​ಗೆ ಕಿಮ್ಸ್​ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕಳೆದ 2 ದಿನಗಳಿಂದ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಬೆಳಗಾವಿ ಮೂಲದ ರಾಧಿಕಾ ಗಡ್ಡಿಹೊಳಿ ಸಾವಿನ ಮನೆ ಸೇರಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ರಾಧಿಕಾ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಇಷ್ಟಕ್ಕೂ ರಾಧಿಕಾ ವಯಸ್ಸು ಕೇವಲ 19 ವರ್ಷ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲಮಟ್ಟಿ ಗ್ರಾಮದವರು. ಎಂಟೂವರೆ ತಿಂಗಳ ಗರ್ಭಿಣಿ ಆಗಿದ್ದ ರಾಧಿಕಾಗೆ 6 ಬಾರಿ ಫಿಟ್ಸ್ ಬಂದಿತ್ತು. ಮೊನ್ನೆ ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಫಿಟ್ಸ್ ಬಂದು ಸೀರಿಯಸ್ ಆಗಿದ್ದರು. 2 ಆಸ್ಪತ್ರೆಗೆ ಅಲೆದರೂ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿರಲಿಲ್ಲ. ಕೊನೆಗೆ ಬೆಳಗಾವಿಯ ಬಿಮ್ಸ್​ಗೆ ಕರೆದುಕೊಂಡು ಬರುವಷ್ಟರಲ್ಲಿ ಶಿಶು ಗರ್ಭಿಣಿಯ ಹೊಟ್ಟೆಯಲ್ಲೇ ಮೃತಪಟ್ಟಿತ್ತು. ರಾಧಿಕಾ ಸ್ಥಿತಿಯೂ ಗಂಭೀರವಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ನಿನ್ನೆ ಬಿಮ್ಸ್ ಆಸ್ಪತ್ರೆಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ ರಾಧಿಕಾ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

2 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

3 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

3 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

6 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

6 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

6 hours ago