ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

Featured, ರಾಷ್ಟ್ರ ನ್ಯೂಸ್

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ

ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು ದೇಶದೊಳಗೆ ಸಾಕಷ್ಟು ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಸಕ್ಕರೆ ರಫ್ತಿನ ಮೇಲೆ ತಕ್ಷಣ ಜಾರಿಗೆ ಬರುವಂತೆ ಸೆಪ್ಟೆಂಬರ್ 30ರವರೆಗೆ ಸಂಪೂರ್ಣ ನಿಷೇಧ ಹೇರಿದೆ.

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಅಡಿಯಲ್ಲಿ ಬರುವ ಡೈರೆಕ್ಟರೇಟ್ ಜನರಲ್ ಆಫ್ ಫಾರಿನ್ ಟ್ರೇಡ್ ಈ ಆದೇಶ ಹೊರಡಿಸಿದೆ. ಈ ನಿಷೇಧವು ಕಚ್ಚಾ ಸಕ್ಕರೆ, ಬಿಳಿ ಸಕ್ಕರೆ, ಮತ್ತು ಸಂಸ್ಕರಿಸಿದ ಸಕ್ಕರೆ ಸೇರಿದಂತೆ ಎಲ್ಲಾ ರೀತಿಯ ಸಕ್ಕರೆ ರಫ್ತುಗಳಿಗೂ ಅನ್ವಯವಾಗುತ್ತದೆ.

ಇದನ್ನೂ ಓದಿ: 

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಸಕ್ಕರೆ ರಫ್ತು ನೀತಿಯನ್ನು ಈ ಹಿಂದೆ ಇದ್ದ ನಿರ್ಬಂಧಿತ ವರ್ಗದಿಂದ ನಿಷೇಧಿತ ವರ್ಗಕ್ಕೆ ಬದಲಾವಣೆ ಮಾಡಲಾಗಿದೆ. ಇನ್ನು ನಿಗದಿತ ಕೋಟಾದಡಿ ಯುರೋಪಿಯನ್ ಯೂನಿಯನ್ ಮತ್ತು ಅಮೆರಿಕ ದೇಶಗಳಿಗೆ ಮಾಡುವ ಸಕ್ಕರೆ ರಫ್ತುಗಳಿಗೆ ಈ ನಿಷೇಧ ಅನ್ವಯಿಸುವುದಿಲ್ಲ. ಭಾರತ ಸರ್ಕಾರದಿಂದ ವಿಶೇಷವಾಗಿ ಅನುಮೋದಿಸಲ್ಪಟ್ಟ ರಫ್ತು ಸರಕುಗಳು ಮತ್ತು ಈಗಾಗಲೇ ಸಾಗಣೆಯಲ್ಲಿರುವ ಆರ್ಡರ್‌ಗಳಿಗೆ ವಿನಾಯಿತಿ ನೀಡಲಾಗಿದೆ.

Leave a Reply