ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು ದೇಶದೊಳಗೆ ಸಾಕಷ್ಟು ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಸಕ್ಕರೆ ರಫ್ತಿನ ಮೇಲೆ ತಕ್ಷಣ ಜಾರಿಗೆ ಬರುವಂತೆ ಸೆಪ್ಟೆಂಬರ್ 30ರವರೆಗೆ ಸಂಪೂರ್ಣ ನಿಷೇಧ ಹೇರಿದೆ.
ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಅಡಿಯಲ್ಲಿ ಬರುವ ಡೈರೆಕ್ಟರೇಟ್ ಜನರಲ್ ಆಫ್ ಫಾರಿನ್ ಟ್ರೇಡ್ ಈ ಆದೇಶ ಹೊರಡಿಸಿದೆ. ಈ ನಿಷೇಧವು ಕಚ್ಚಾ ಸಕ್ಕರೆ, ಬಿಳಿ ಸಕ್ಕರೆ, ಮತ್ತು ಸಂಸ್ಕರಿಸಿದ ಸಕ್ಕರೆ ಸೇರಿದಂತೆ ಎಲ್ಲಾ ರೀತಿಯ ಸಕ್ಕರೆ ರಫ್ತುಗಳಿಗೂ ಅನ್ವಯವಾಗುತ್ತದೆ.
ಇದನ್ನೂ ಓದಿ:
ಸಕ್ಕರೆ ರಫ್ತು ನೀತಿಯನ್ನು ಈ ಹಿಂದೆ ಇದ್ದ ನಿರ್ಬಂಧಿತ ವರ್ಗದಿಂದ ನಿಷೇಧಿತ ವರ್ಗಕ್ಕೆ ಬದಲಾವಣೆ ಮಾಡಲಾಗಿದೆ. ಇನ್ನು ನಿಗದಿತ ಕೋಟಾದಡಿ ಯುರೋಪಿಯನ್ ಯೂನಿಯನ್ ಮತ್ತು ಅಮೆರಿಕ ದೇಶಗಳಿಗೆ ಮಾಡುವ ಸಕ್ಕರೆ ರಫ್ತುಗಳಿಗೆ ಈ ನಿಷೇಧ ಅನ್ವಯಿಸುವುದಿಲ್ಲ. ಭಾರತ ಸರ್ಕಾರದಿಂದ ವಿಶೇಷವಾಗಿ ಅನುಮೋದಿಸಲ್ಪಟ್ಟ ರಫ್ತು ಸರಕುಗಳು ಮತ್ತು ಈಗಾಗಲೇ ಸಾಗಣೆಯಲ್ಲಿರುವ ಆರ್ಡರ್‌ಗಳಿಗೆ ವಿನಾಯಿತಿ ನೀಡಲಾಗಿದೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…