ಬೆಂಗಳೂರು: ಬೀದರ್ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣದಲ್ಲಿ ರಾಜಕೀಯ ಜಟಾಪಟಿ ದಿನದಿಂದ ದಿನಕ್ಕೆ ಮತ್ತಷ್ಟು ಜೋರಾಗುತ್ತಿದೆ. ಸಚಿನ್ ಪಾಂಚಾಳ್ ಸಾವಿಗೂ ನನಗೂ ಯಾವುದೇ ಸಂಬಂಧ ಇಲ್ಲವೆಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಇದೀಗ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಅವರದ್ದು ಎನ್ನಲಾದ ಆಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ನಿನ್ನೆ ನನ್ನ ಹಳೆಯ ಸ್ಪೀಚ್ ಅಪ್ಲೋಡ್ ಮಾಡಿದ್ದಾರೆ. ಕಲಬುರಗಿ ರಿಪಬ್ಲಿಕ್ ಮಾಡಿದವರು ಯಾರು? ನಿಮ್ಮ ಅಭ್ಯರ್ಥಿ ನಮ್ಮ ಕುಟುಂಬದ ವಿರುದ್ಧ ಸಂಚು ಮಾಡುತ್ತಾನೆ. ನಮ್ಮ ತಂದೆ, ತಾಯಿ, ಕುಟುಂಬ ಕೊಲ್ತೀನಿ ಅಂತಾ ಆತ ಹೇಳುತ್ತಾನೆ. ಅದರ ಬಗ್ಗೆ ನಾವು ದೂರು ಕೊಟ್ಟಾಗ ನಿಮ್ಮದೇ ಸರ್ಕಾರ ಇತ್ತು. ಅಂಥವನಿಗೆ ನೀವು ಅಧಿಕೃತ ಅಭ್ಯರ್ಥಿ ಮಾಡಿ ಟಿಕೆಟ್ ಕೊಟ್ಟಿದ್ದೀರಿ ಎಂದು ವಾಗ್ದಾಳಿ ಮಾಡಿದ್ದಾರೆ.
ನನ್ನ ರಾಜೀನಾಮೆ ಕೊಡಿಸಲು ಖರ್ಗೆಗೆ ಕಪ್ಪು ಚುಕ್ಕೆ ತರಲು ಯತ್ನಿಸುತ್ತಿದ್ದಾರೆ. ಬಿಜೆಪಿಗರು ಬಹಳ ಬಾಲಿಶವಾಗಿ ಮಕ್ಕಳ ರೀತಿ ಹೇಳಿಕೆ ನೀಡುತ್ತಿದ್ದಾರೆ. ಕಳೆದ 4-5 ದಿನಗಳಿಂದ ಬಿಜೆಪಿ ಬಹಳಷ್ಟು ಪ್ರಯತ್ನ ಮಾಡಿದ್ದಾರೆ. ವಿಜಯೇಂದ್ರ, ನಾರಾಯಣಸ್ವಾಮಿ ಯಾಕೋ ಹೋಂ ವರ್ಕ್ ಸರಿಯಾಗಿ ಮಾಡುತ್ತಿಲ್ಲ. ನಾರಾಯಣಸ್ವಾಮಿಗೆ ವೈಯಕ್ತಿಕ ಟೀಕೆ ಮಾಡಲು ಸ್ಥಾನ ಕೊಟ್ಟಂತಿದೆ. ಕಲಬುರಗಿ ರಿಪಬ್ಲಿಕ್ ಅಂತಾ ನಾರಾಯಣಸ್ವಾಮಿ ಆರೋಪ ಮಾಡಿದ್ದಾರೆ ಎಂದರು.
ಸಂತೋಷ್ ಬರೆದ ಡೆತ್ನೋಟ್ನಲ್ಲಿ ಈಶ್ವರಪ್ಪ ಹೆಸರು ಸ್ಪಷ್ಟವಾಗಿತ್ತು. ನನ್ನ ಸಾವಿಗೆ ನೇರ ಕಾರಣ ಈಶ್ವರಪ್ಪ ಅಂತಾ ಡೆತ್ನೋಟ್ ಬರೆದಿದ್ದರು. ಆದರೆ ಸಚಿನ್ ಪ್ರಕರಣದಲ್ಲಿ ನನ್ನ ಹೆಸರೇ ಬರೆದಿಲ್ಲ. ಸಂತೋಷ್ ಮನೆಗೆ ಒಮ್ಮೆಯಾದರೂ ವಿಜಯೇಂದ್ರ ಹೋಗಿದ್ದಾರಾ? ಸಚಿನ್ ಮನೆಗೆ ವಿಜಯೇಂದ್ರ 5 ಲಕ್ಷ ರೂ. ತೆಗೆದುಕೊಂಡು ಹೋಗಿದ್ದರು. ಗುತ್ತಿಗೆದಾರ ಸಂತೋಷ್ ಪಾಟೀಲ್ ಮನೆಗೆ ಯಾಕೆ ಹೋಗಲಿಲ್ಲ? ಯಾರೋ ಬರೆದಿದ್ದನ್ನು ತಿರುಚಿ ಮಗುಚಿ ಹಾಕಿದ್ರಲ್ಲ ನಾಚಿಕೆ ಆಗಲ್ವಾ ಎಂದು ಪ್ರಶ್ನಿಸಿದ್ದಾರೆ. ರಾಜೀವ್ ವಿರುದ್ಧ ಮಾನನಷ್ಟ ಕೇಸ್ ಹಾಕಿದ್ದೆ, ಈವರೆಗೂ ಉತ್ತರ ಬಂದಿಲ್ಲ. ಬಿಜೆಪಿಯವರು ಸುಳ್ಳಿನ ಮಹಾಶೂರರು ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ಮಾಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…