ಮಂಗಳೂರು:ವಿಶ್ವಾಸ ಮತಯಾಚನೆಯಲ್ಲಿ ನಮಗೆ ಸೋಲಾಗಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದನ್ನು ಸಕಾರಾತ್ಮಕವಾಗಿ ಸ್ವೀಕರಿಸುತ್ತೇವೆ ಎಂದು ಮಾಜಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವನಾಗಿ ಉತ್ತಮ ಕಾರ್ಯ ಮಾಡಿದ್ದೇನೆ.ವಿಶೇಷ ಅನುದಾನವನ್ನು ಜಿಲ್ಲೆಗೆ ತಂದಿದ್ದೇನೆ. ಪ್ರಕೃತಿ ವಿಕೋಪ ಸಂದರ್ಭದಲ್ಲಿ ಒಂದೊಂದು ಕ್ಷೇತ್ರಕ್ಕೆ 6 ಕೋಟಿ ಅನುದಾನ ಬಿಡುಗಡೆಯಾಗಿದೆ. ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡಿ, ಲೈವ್ ಬ್ಯಾಂಡ್, ಇಸ್ವಿಟ್ ಇವುಗಳನ್ನು ಬಂದ್ ಮಾಡಿಸಿದ್ದೇನೆ. ಅಲ್ಲದೆ, ಕಳೆದ ಒಂದು ವರ್ಷದಿಂದ ಮರಳು ಮಾಫಿಯಾದ ವಿರುದ್ಧ ಕ್ರಮಕೈಗೊಂಡಿದ್ದೇನೆ.ಸ್ಯಾಂಡ್ ಬಜಾರ್ ಆ್ಯಫ್ ಮೂಲಕ ಮರಳಿಗೆ ಸಂಬಂಧಿಸಿದಂತೆ ಸಮಸ್ಯೆ ಇಲ್ಲದಾಗಿದೆ ಎಂದು ಅವರು ಹೇಳಿದರು.
ಸಂಮಿಶ್ರ ಸರಕಾರ ಅಂದ ಮೇಲೆ ಸಣ್ಣ ಪುಟ್ಟ ಸಮಸ್ಯೆಗಳಾಗುತ್ತವೆ. ಅವುಗಳನ್ನು ಸರಿದೂಗಿಸಿಕೊಂಡು ಹೋಗುತ್ತಿದ್ದೆವು.ನಾವು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ಹೋಗಿಲ್ಲ.ಕಳೆದ ಚುನಾವಣೆಯಲ್ಲಿ ಸಂಮಿಶ್ರ ಸರಕಾರ ಆಡಳಿಕ್ಕೆ ಬರಬೇಕು ಎಂದು ಜನರು ಬಯಸಿದ್ದರು ಎಂದು ಮಾಜಿ ಸಚಿವ ಯು. ಟಿ. ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…