ಬೆಂಗಳೂರು: ರಾಜ್ಯದ 224 ಶಾಸಕರ ವೈಯಕ್ತಿಕ ಜೀವನದ ಬಗ್ಗೆ ತನಿಖೆಯಾಗಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ನೀಡಿರುವ ಹೇಳಿಕೆಯನ್ನು ವಿರೋಧಿಸಿ ವಿಧಾನಸಭೆಯಲ್ಲಿ ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದವು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸಚಿವ ಸುಧಾಕರ್ ಅವರ ರಾಜೀನಾಮೆಗೆ ಒತ್ತಾಯಿಸಿದರು.
ಭೋಜನ ವಿರಾಮದ ಬಳಿಕ ಕಲಾಪ ಸೇರಿದಾಗ ಸುಧಾಕರ್ ಹೇಳಿಕೆಯನ್ನು ವಿಪಕ್ಷ ಸದಸ್ಯರು ಕಟುವಾಗಿ ಟೀಕಿಸಿದರು. ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.
ಸಿದ್ದರಾಮಯ್ಯ ಮಾತನಾಡಿ, ‘ಸುಧಾಕರ್ ಅವರು ಬೇಜವಾಬ್ದಾರಿಯ ಹೇಳಿಕೆ ನೀಡಿದ್ದಾರೆ. ನನ್ನ, ಕೆ.ಆರ್.ರಮೇಶ್ಕುಮಾರ್, ಕುಮಾರಸ್ವಾಮಿ ಮತ್ತು ಡಿ.ಕೆ.ಶಿವಕುಮಾರ್ ಅವರ ಹೆಸರುಗಳನ್ನು ಪ್ರಸ್ತಾಪಿಸಿದ್ದಾರೆ. 224 ಶಾಸಕರು ಸತ್ಯ ಹರಿಶ್ಚಂದ್ರರಲ್ಲ ಎಂದಿದ್ದಾರೆ. ಇದು ಹಕ್ಕುಚ್ಯುತಿಯಾಗುತ್ತದೆ. ಎಲ್ಲಾ ಶಾಸಕರ ಬಗ್ಗೆಯೂ ತನಿಖೆ ಮಾಡಿಸಿ’ ಎಂದು ಗುಡುಗಿದರು.
‘ಮುಖ್ಯಮಂತ್ರಿ ಸೇರಿ ಎಲ್ಲ ಶಾಸಕರ ಬಗ್ಗೆಯೂ ತನಿಖೆ ನಡೆಯಲಿ. ಈ ರೀತಿ ಹೇಳಿಕೆ ನೀಡಿದ ಸುಧಾಕರ್ ಅವರು ರಾಜೀನಾಮೆ ನೀಡಬೇಕು. ಇವರ ಪ್ರಕಾರ 224 ಶಾಸಕರೂ ವ್ಯಭಿಚಾರಿಗಳಾ? ಮಂತ್ರಿಗಳನ್ನು ನೀವೇಕೆ ಸಮರ್ಥಿಸಿಕೊಳ್ಳುತ್ತೀರಿ’ ಎಂದು ಕಾನೂನು ಸಚಿವ ಬಸವರಾಜ್ ಬೊಮ್ಮಾಯಿ ವಿರುದ್ಧ ಗರಂ ಆದ ಸಿದ್ದರಾಮಯ್ಯ, ’ಇದು ವ್ಯಭಿಚಾರಿಗಳ ಸರ್ಕಾರ’ ಎಂದು ಕಿಡಿಕಾರಿದರು.
ಸಚಿವ ಸುಧಾಕರ್ ಅವರು ಸದಸ್ಯರ ಕ್ಷಮೆಯನ್ನು ಕೇಳಬೇಕು ಎಂದು ಜೆಡಿಎಸ್ನ ಬಂಡೆಪ್ಪ ಕಾಶೆಂಪುರ್ ಆಗ್ರಹಿಸಿದರು.
ಸಚಿವ ಸುಧಾಕರ್ ಅವರನ್ನು ಸಮರ್ಥಿಸಿ ಮಾತನಾಡಿದ ಬೊಮ್ಮಾಯಿ, ‘ಸಚಿವರು ಸದನದಿಂದ ಹೊರಗೆ ಮಾಧ್ಯಮದ ಬಳಿ ಮಾತನಾಡಿದ್ದಾರೆ. ಅವರು ಯಾವ ಅರ್ಥದಲ್ಲಿ ಏನು ಮತ್ತು ಯಾವ ಸಂದರ್ಭದಲ್ಲಿ ಮಾತನಾಡಿದ್ದಾರೆ ಎಂಬುದನ್ನು ಪರಿಶೀಲಿಸಬೇಕು. ಸದನದಲ್ಲಿ ಸಚಿವರ ಚಾರಿತ್ರ್ಯಕ್ಕೆ ಧಕ್ಕೆ ಬರುವಂತೆ ನೀವು ಮಾತನಾಡಲಿಲ್ಲವೇ’ ಎಂದು ಪ್ರಶ್ನಿಸಿದರು.
ಕಲಾಪ ಅನಿರ್ಧಿಷ್ಟ ಮುಂದಕ್ಕೆ
ವಿಧಾನಸಭೆ ಕಲಾಪವನ್ನು ಸಭಾಧ್ಯಕ್ಷ ಕಾಗೇರಿ ಅನಿರ್ಧಿಷ್ಟ ಕಾಲ ಮುಂದೂಡಿದರು. ‘ಬಜೆಟ್ ಅಧಿವೇಶನ ಒಟ್ಟು 13 ದಿನಗಳು ನಡೆದಿದ್ದು, 44 ಗಂಟೆ 30 ನಿಮಿಷ ಕಲಾಪ ನಡೆದಿದೆ. 11 ಮಸೂದೆಗಳ ಪೈಕಿ 9 ಮಸೂದೆಗಳು ಅಂಗೀಕಾರ ಪಡೆದಿವೆ’ ಎಂದು ಕಾಗೇರಿ ತಿಳಿಸಿದರು
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…