ತುಮಕೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಸಂಸದ ಜಿ.ಎಸ್.ಬಸವರಾಜು ಹೊಸ ಹೆಸರು ತೇಲಿ ಬಿಟ್ಟಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಗೆ ಟಿಕೆಟ್ ನೀಡಿದರೆ ಫಲಿತಾಂಶದ ಬಗ್ಗೆ ಈಗಲೇ ಏನೂ ಹೇಳಲು ಆಗುವುದಿಲ್ಲ’ ಎಂದು ಹೇಳಿದ್ದಾರೆ.
‘ವಿಧಾನಸಭಾ ಚುನಾವಣೆಯಲ್ಲಿ ಮಾಧುಸ್ವಾಮಿ ಸೋತಿದ್ದಾರೆ. ದುರಹಂಕಾರದವರಿಗೆ ಜನ ಮತ ಹಾಕುವುದಿಲ್ಲ. ಹೈಕಮಾಂಡ್ ನಾಯಕರು ಜನಾಭಿಪ್ರಾಯ ನೋಡಿಕೊಂಡು ಅಭ್ಯರ್ಥಿಯನ್ನು ಘೋಷಿಸುತ್ತಾರೆ. ಪಕ್ಷದಿಂದ ಯಾರಿಗೆ ಟಿಕೆಟ್ ಕೊಟ್ಟರೂ ಅವರ ಪರ ಕೆಲಸ ಮಾಡುತ್ತೇವೆ’ ಎಂದರು.
ಮಾಜಿ ಸಚಿವ ವಿ.ಸೋಮಣ್ಣ ತುಮಕೂರಿನಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಇಲ್ಲಿಂದ ಯಾರೇ ಸ್ಪರ್ಧಿಸಿದರೂ ಗೆಲ್ಲಬಹುದು ಎಂದು ಸೋಮಣ್ಣ ಅವರಿಗೆ ಹೇಳಿದ್ದೇನೆ. ಮುಂದಿನ ಅಧಿವೇಶನ ಸಮಯದಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಬಗ್ಗೆ ಚರ್ಚಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮಯ ನೀಡಿದ್ದಾರೆ. ಆಗ ಎಲ್ಲ ವಿಷಯಗಳನ್ನು ಅವರ ಗಮನಕ್ಕೆ ತರುತ್ತೇನೆ. ವಾಸ್ತವ ಸ್ಥಿತಿಯನ್ನು ಅವರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ತಿಳಿಸಿದರು.
ಲೋಕಸಭಾ ಸ್ಪರ್ಧೆಗೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ರವಿಶಂಕರ್, ಮುಖಂಡ ಎಸ್.ಪಿ. ಚಿದಾನಂದ್ ಸೇರಿದಂತೆ ಹತ್ತಕ್ಕೂ ಹೆಚ್ಚು ಜನ ಆಕಾಂಕ್ಷಿಗಳಿದ್ದಾರೆ. ಜಿಲ್ಲೆಯಲ್ಲಿ ಈ ಬಾರಿ ಕತ್ತೆ ನಿಲ್ಲಿಸಿದರೂ ಪ್ರಧಾನಿ ಮೋದಿ ಮುಖ ನೋಡಿಕೊಂಡು ಜನ ಬಿಜೆಪಿಗೆ ಮತ ನೀಡುತ್ತಾರೆ ಎಂದು ಬಸವರಾಜು ಹೇಳಿದರು.
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರಿಗೆ ಅವರದ್ದೇ ಆದ ಶಕ್ತಿಯಿದೆ. ಅವರು ಚಾಣಾಕ್ಷರಿದ್ದಾರೆ. ಕಳೆದ ಲೋಕಸಭಾ ಚುನಾವಣೆಯ ಸಮಯದಲ್ಲೂ ದೇವೇಗೌಡರ ವಿರುದ್ಧ ನಾನು ವೈಯಕ್ತಿಕವಾಗಿ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…