Featured

ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿಶ್ವಕರ್ಮ ಸಮಾಜವನ್ನು ಒಡೆದು ಇಬ್ಭಾಗ ಮಾಡಲು ಮುಂದಾಗಿದ್ದಾರೆ ಎಂಬ ಆರೋಪದಲ್ಲಿ ಯಾವುದೇ ಹುರುಳಿಲ್ಲ : ಬಿಜೆಪಿ ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ನೆ.ಲ. ನರೇಂದ್ರಬಾಬು ಸ್ಪಷ್ಟನೆ – Vishwanews24

ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿಶ್ವಕರ್ಮ ಸಮಾಜವನ್ನು ಒಡೆದು ಇಬ್ಭಾಗ ಮಾಡಲು ಮುಂದಾಗಿದ್ದಾರೆ ಎಂಬ ಆರೋಪದಲ್ಲಿ ಯಾವುದೇ ಹುರುಳಿಲ್ಲ : ಬಿಜೆಪಿ ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ನೆ.ಲ. ನರೇಂದ್ರಬಾಬು ಸ್ಪಷ್ಟನೆ

ಬೆಂಗಳೂರು: ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ವಿಶ್ವಕರ್ಮ ಸಮಾಜವನ್ನು ಒಡೆದು ಇಬ್ಭಾಗ ಮಾಡಲು ಮುಂದಾಗಿದ್ದಾರೆ ಎಂಬ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಛಾದ ರಾಜ್ಯಾಧ್ಯಕ್ಷ ನೆ.ಲ. ನರೇಂದ್ರಬಾಬು ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ನರೇಂದ್ರ ಬಾಬು, ಬಿಜೆಪಿ ಮತ್ತು ರಾಜ್ಯದ ಸಚಿವರು ಯಾರನ್ನೂ ಕಡೆಗಣಿಸುವುದಿಲ್ಲ. ಸಮಾಜವನ್ನು ಒಡೆಯುವ ಕಾರ್ಯ ಮಾಡುವುದಿಲ್ಲ. ಎಲ್ಲ ಸಮಾಜಗಳನ್ನು ಒಗ್ಗೂಡಿಸಿ ಸಮಾಜದ ಸರ್ವತೋಮುಖ ಅಭಿವೃದ್ಧಿ ಮಾಡಲು ಬಿಜೆಪಿ ಶ್ರಮಿಸುತ್ತದೆ ಎಂದು ತಿಳಿಸಿದ್ದಾರೆ.

ನಂಜುಂಡಿ ಅವರನ್ನು ಪಕ್ಷವು ಕಡೆಗಣಿಸಿಲ್ಲ. ವಿಶ್ವಕರ್ಮ ಸಮಾಜದ ಸ್ವಾಮೀಜಿ ಮತ್ತು ಪ್ರಮುಖರು ಬಂದು ಮನವಿ ನೀಡಿದ್ದು, ಅದನ್ನು ಸ್ವೀಕರಿಸುವುದು ಅವರ ಕರ್ತವ್ಯ. ಅದನ್ನು ಸ್ವೀಕರಿಸಿದ್ದಾರೆ. ಅದನ್ನು ಸ್ವೀಕರಿಸಬಾರದು ಎಂದು ಹೇಳುವುದು ಸೂಕ್ತವಲ್ಲ ಎಂದು ತಿಳಿಸಿದ್ದಾರೆ.

ಸಮಾಜ ಒಡೆಯುತ್ತಿದ್ದಾರೆ ಎಂಬ ಗೊಂದಲದ ಹೇಳಿಕೆ ನೀಡಿ ಅಪಪ್ರಚಾರ ಮಾಡುವುದು ಸರಿಯಲ್ಲ. ಹಿಂದುಳಿದ ವರ್ಗಗಳ ಸಚಿವರಾಗಿ ಹಿಂದುಳಿದ ಸಮಾಜದ ಮುಖಂಡರು, ಸ್ವಾಮೀಜಿಗಳು ಯಾರೇ ಬಂದರೂ ಅವರನ್ನು ಗೌರವಭಾವದಿಂದ ನೋಡಿ ಮನವಿ ಸ್ವೀಕರಿಸಿ ಕ್ರಮ ತೆಗೆದುಕೊಳ್ಳುವುದು ಅವರ ಜವಾಬ್ದಾರಿ. ಆ ಹೊಣೆಯನ್ನು ಅವರು ನಿರ್ವಹಿಸಿದ್ದಾರೆ ಎಂದು ತಿಳಿಸಿದ್ದಾರೆ.

ನಂಜುಂಡಿಯವರು, ಬಾಬು ಪತ್ತಾರ ಸೇರಿದಂತೆ ಸಮಾಜದ ಎಲ್ಲರೂ ಒಗ್ಗಟ್ಟಾಗಿ ಸಮಾಜದ ಕುರಿತು ಚಿಂತಿಸುವುದು ಒಳಿತನ್ನು ತರುತ್ತದೆ. ಒಗ್ಗಟ್ಟಿನಲ್ಲಿ ಬಲವಿದೆಯೇ ಹೊರತು ಈ ರೀತಿಯಾಗಿ ಕ್ಷುಲ್ಲಕವಾಗಿ ಮಾತನಾಡುವುದು ಮತ್ತು ಆರೋಪಿಸುವುದು ಸೂಕ್ತವಲ್ಲ ಎಂದು ನೆ.ಲ.ನರೇಂದ್ರಬಾಬು ಮಾಧ್ಯಮ ಹೇಳಿಕೆ ಮೂಲಕ ತಿಳಿಸಿದ್ದಾರೆ.

ನಿನ್ನೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ಅಖಿಲ ಕರ್ನಾಟಕ ವಿಶ್ವಕರ್ಮ‌ ಸಮುದಾಯದ ಯುವ ಘಟಕದಿಂದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಅವರಿಗೆ ದೂರು ಸಲ್ಲಿಸಲ್ಪಟ್ಟಿತ್ತು.

 

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago