Featured

ಸಚಿವ ಡಿ.ಕೆ ಶಿವಕುಮಾರ್ ಗೆ ಮತ್ತಷ್ಟು ಟೆನ್ಶನ್ ; ಆಸ್ತಿ ದಾಖಲೆ ನೀಡದ ಡಿಕೆಶಿ

ಬೆಂಗಳೂರು: ಐಟಿ ದಾಳಿ ವೇಳೆ ಸಿಕ್ಕಿರುವ ಆಸ್ತಿ ಬಗ್ಗೆ ದಾಖಲಾತಿ ಒದಗಿಸುವಲ್ಲಿ ಜಲಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ವಿಫಲರಾಗಿದ್ದಾರೆ ಎಂದು ಐಟಿ ಇಲಾಖೆ ಮೂಲಗಳು ಮಾಹಿತಿ ನೀಡಿವೆ.

ದಾಳಿ ನಡೆದು 10 ತಿಂಗಳಾದರೂ ಐಟಿ ತನಿಖಾಧಿಕಾರಿಗಳು ಅಂತಿಮ ವರದಿ ಸಲ್ಲಿಸಿಲ್ಲ. ಗಂಭೀರ ಪ್ರಕರಣಗಳ ತನಿಖೆಗೆ ಐಟಿ ಅಧಿಕಾರಿಗಳು ಗರಿಷ್ಠ 4ರಿಂದ 5 ತಿಂಗಳು ತೆಗೆದುಕೊಳ್ಳುತ್ತಾರೆ. ಆದರೆ, ಈ ಪ್ರಕರಣದಲ್ಲಿ ದಾಳಿ ನಡೆದು 10 ತಿಂಗಳಾದರೂ ತನಿಖೆ ಪೂರ್ಣಗೊಳಿಸಿಲ್ಲ. ಸಚಿವರು ವಿಚಾರಣೆಗೆ ಹಾಜರಾದಾಗಲೆಲ್ಲ ದಾಖಲೆ ಸಲ್ಲಿಕೆಗೆ ಸಮಯಾವಕಾಶ ಕೇಳುತ್ತಿರುವುದರಿಂದ ವಿಳಂಬವಾಗುತ್ತಿದೆ ಎನ್ನಲಾಗುತ್ತಿದೆ.

402 ಕೋಟಿ ರೂ. ಆಸ್ತಿ ಹೊಂದಿರುವ ಬಗ್ಗೆ ಸಚಿವರು ವಿಚಾರಣೆ ವೇಳೆ ಒಪ್ಪಿಕೊಂಡಿದ್ದರು. ಲೆಕ್ಕಪರಿಶೋಧಕರ ಮೂಲಕ ಇದಕ್ಕೆ ಸೂಕ್ತ ದಾಖಲೆ ನೀಡುವುದಾಗಿ ತಿಳಿಸಿದ್ದರು. ಆದರೆ, ತನಿಖಾಧಿಕಾರಿಗಳು ವಶಪಡಿಸಿಕೊಂಡ ದಾಖಲೆಗಳನ್ನು ಪರಿಶೀಲಿಸಿದಾಗ, ಸಚಿವರು ವಿಚಾರಣೆ ವೇಳೆ ಒಪ್ಪಿಕೊಂಡಿರುವುದಕ್ಕಿಂತ ಅಧಿಕ ಪ್ರಮಾಣದ ಅಕ್ರಮ ಆಸ್ತಿ ಹೊಂದಿರುವುದು ತನಿಖೆಯಲ್ಲಿ ತಿಳಿದು ಬಂದಿದೆ. ಅಲ್ಲದೆ ಕೆಲ ವ್ಯವಹಾರ ಗಳ ಆದಾಯದ ಬಗ್ಗೆ ಸುಳ್ಳು ಮಾಹಿತಿ ನೀಡಿರುವುದು ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಐಟಿ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಿಯಲ್ ಎಸ್ಟೇಟ್​ನಲ್ಲಿ -ಠಿ;102 ಕೋಟಿ

ನಾನು ರೈತನಾಗಿದ್ದು, ಸ್ವಂತ ರಿಯಲ್ ಎಸ್ಟೇಟ್ ವ್ಯವಹಾರ ಇದೆ. ಬೆಂಗಳೂರಿನಲ್ಲೂ ಕೆಲ ಆಸ್ತಿಯಿದೆ. ಗ್ರಾನೈಟ್ ಕ್ವಾರಿಗಳು ಇವೆ. ಇದರಿಂದ ನನಗೆ ಆದಾಯ ಬರುತ್ತಿದೆ. ಈಗಿನ ದೊಡ್ಡ ಆದಾಯ ಅಂದರೆ ಜಂಟಿ ಪಾಲುದಾರಿಕೆ ಹೊಂದಿದ್ದೇನೆ. ಇದರ ಆದಾಯ ಕೈ ಸೇರಿಲ್ಲ ಎಂದು ವಿಚಾರಣೆ ವೇಳೆ ಸಚಿವರು ತಿಳಿಸಿದ್ದಾರೆ. ಧವನಂ ಕನ್ಸ್​ಟ್ರಕ್ಷನ್ಸ್ ಜತೆ ಪಾಲುದಾರಿಕೆ ಹೊಂದಿದ್ದೆ. 2005ರಲ್ಲಿ ಷೇರುಗಳ ಹಂಚಿಕೆ ಮಾಡಿಕೊಳ್ಳಲಾಗಿತ್ತು. ಮುಂಗಡ ಹಣದಲ್ಲಿ ಯಾವುದೇ ಲಾಭ ಪಡೆದುಕೊಳ್ಳಲಾಗಲಿಲ್ಲ. ಪ್ರಾಜೆಕ್ಟ್ ಮುಗಿದ ಬಳಿಕ ಲಾಭ ಬಂದರೆ ಆದಾಯ ತೆರಿಗೆ ಪಾವತಿ ಮಾಡಿಕೊಡುತ್ತೇನೆ. ನನಗೆ ಮತ್ತು ನನ್ನ ಪತ್ನಿಗೆ ಕೆಲ ರಿಯಲ್ ಎಸ್ಟೇಟ್ ಕಂಪನಿಗಳ ಒಪ್ಪಂದದಲ್ಲಿ 102.46 ಕೋಟಿ ರೂ. ಆದಾಯ ಬಂದಿದೆ. ಇದರ ಆದಾಯ ತೆರಿಗೆ ಪಾವತಿಸಬೇಕಾಗಿದೆ ಎಂದು ಸಚಿವರು ಐಟಿ ಅಧಿಕಾರಿಗಳಿಗೆ ತಿಳಿಸಿದ್ದರು ಎನ್ನಲಾಗಿದೆ.

ಆದಾಯ ತೆರಿಗೆ ಇಲಾಖೆಯ ಬಲೆಗೆ ಸಿಲುಕಿಕೊಂಡಿರುವ ನೀರಾವರಿ ಮತ್ತು ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಗೆ ಇದೀಗ ಮತ್ತಷ್ಟು ಟೆನ್ಶನ್ ಶುರುವಾಗಿದೆ.

ಐಟಿ ದಾಳಿಯಲ್ಲಿ ಸಿಕ್ಕ ಸಂಪತ್ತಿನ ದಾಖಲೆಗಳು ಮತ್ತು ಹಣದ ಬಗ್ಗೆ ಇನ್ನೂ ಸ್ಪಷ್ಟ ಉತ್ತರ ನೀಡಲಿಲ್ಲ. ಶೋಧದ ಬಳಿಕ ಡಿಕೆಶಿ ಕುಟುಂಬವನ್ನು ಕರೆಸಿಕೊಂಡಿದ್ದ ಅಧಿಕಾರಿಗಳು ನಾನಾ ಪ್ರಶ್ನೆಗಳನ್ನು ಕೇಳಿದ್ದರು. ಇಷ್ಟೊಂದು ಸಂಪತ್ತು ಎಲ್ಲಿಂದ ಬಂತು..? ಇಷ್ಟೊಂದು ಹಣ ಎಲ್ಲಿತ್ತು? ಅನ್ನೋದ್ರ ಬಗ್ಗೆ ಡಿಕೆಶಿ ಸಮರ್ಪಕ ಉತ್ತರ ನೀಡಿಲ್ಲ ಎಂದು ತಿಳಿದುಬಂದಿದೆ.

ಅಷ್ಟೇ ಅಲ್ಲದೇ ಕರ್ನಾಟಕ ವಿಧಾನಸಭಾ ಚುನವಾಣೆ ಸಂದರ್ಭದಲ್ಲಿ ಗುಜರಾತ್ ನ ಕಾಂಗ್ರೆಸ್ ಶಾಸಕರನ್ನು ಇರಿಸಲಾಗಿದ್ದ ಬಿಡದಿಯ ಈಗಲ್ ಟನ್ ರೆಸಾರ್ಟ್ ನಲ್ಲಿ ಡಿ.ಕೆ ಶಿವಕುಮಾರ್ ಚೀಟಿ ಹರಿಯುತ್ತಿದ್ದಾಗ ಐಟಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದರು. ಆ ಚೀಟಿಯಲ್ಲಿ ಏನಿತ್ತು..? ಅನ್ನೋದನ್ನ ಕೂಡ ಡಿಕೆಶಿ ಇದುವರೆಗೂ ಸ್ಪಷ್ಟಪಡಿಸಿಲ್ಲ. 

ರೆಸಾರ್ಟ್ ನಲ್ಲಿ ಸಿಕ್ಕ ಹಾಳೆಗಳಲ್ಲಿ ಹಲವು ಲೆಕ್ಕಗಳನ್ನು ಬರೆಯಲಾಗಿದೆ. ಅವೆಲ್ಲವೂ ಏನು ಅನ್ನೋದು ಪ್ರಶ್ನೆಯಾಗಿ ಉಳಿದಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 2ರಂದು ಮತ್ತೊಮ್ಮೆ ವಿಚಾರಣೆ ಹಾಜರಾಗಿ ಉತ್ತರ ಕೊಡಿ ಎಂದು ಐಟಿ ಇಲಾಖೆ ಡಿಕೆಶಿಗೆ ಸೂಚಿಸಿದೆ.

ಈ ಹಿಂದೆ ಐಟಿ ಕೇಳಿದ್ದ ಹಲವು ಪ್ರಶ್ನೆಗಳಿಗೆ ಉತ್ತರಿಸಲು ಡಿ.ಕೆ.ಶಿವಕುಮಾರ್ ಸಮಯ ಕೇಳಿದ್ದರು. ಆದರೆ ಕೊಟ್ಟ ಸಮಯ ಮುಗಿದಿರುವ ಹಿನ್ನೆಲೆಯಲ್ಲಿ ವಿಚಾರಣೆ ಗೆ ಹಾಜರಾಗುವಂತೆ ಐಟಿ ನೋಟಿಸ್ ನೀಡಿತ್ತು. ಈಗ ಐಟಿ ಕೇಳಿರುವ ಎಲ್ಲಾ ಪ್ರಶ್ನೆಗಳಿಗೆ ಡಿ.ಕೆ.ಶಿವಕುಮಾರ್ ಉತ್ತರಿಸಲೇಬೇಕಾದ ಅನಿವಾರ್ಯತೆ ಬಂದಿದೆ. ಒಂದು ವೇಳೆ ಉತ್ತರಿಸದೇ ಹೋದರೆ ಮತ್ತೆ ಕೇಸ್ ದಾಖಲಾಗುವ ಸಾಧ್ಯತೆ ಇದೆ.

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

14 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

14 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

14 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

16 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

17 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

17 hours ago