ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ : ಪರಿಶೀಲಿಸಲು ಗೃಹ ಸಚಿವ ಜಿ.ಪರಮೇಶ್ವರ್ ಸೂಚನೆ – vishwanews24
ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ : ಪರಿಶೀಲಿಸಲು ಗೃಹ ಸಚಿವ ಜಿ.ಪರಮೇಶ್ವರ್ ಸೂಚನೆ
ಬೆಂಗಳೂರು : ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬಂದಿರುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಹೇಳಿದರು.
ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತಮಾಡಿದ ಅವರು, ಯಾರು ಬೆದರಿಕೆ ಕರೆ ಮಾಡಿದ್ದಾರೆ, ಎಲ್ಲಿಂದ ಬಂದಿದೆ ಎಂಬುದನ್ನು ತನಿಖೆ ಮಾಡುತ್ತೇವೆ. ಆರೆಸ್ಸೆಸ್ ವಿಚಾರದಲ್ಲಿ ಸಚಿವರು ತಮ್ಮ ಅಭಿಪ್ರಾಯ ಹೇಳಿರಬಹುದು. ಆ ಬಗ್ಗೆ ಸರಕಾರ ತೀರ್ಮಾನ ಮಾಡುತ್ತದೆ. ಅದಕ್ಕೆ ಅವರಿಗೆ ಬೆದರಿಕೆ ಹಾಕುವುದು ಸರಿಯಲ್ಲ. ಎಲ್ಲವನ್ನೂ ಪರಿಶೀಲನೆ ಮಾಡುವುದಕ್ಕೆ ಸೂಚಿಸಿದ್ದೇನೆ ಎಂದು ಹೇಳಿದರು.
ಸರಕಾರ ಬಂದು ಎರಡೂವರೆ ವರ್ಷ ಕಳೆದಿದೆ. ಎಲ್ಲರು ಚೆನ್ನಾಗಿ ಕೆಲಸ ಮಾಡಬೇಕು ಎಂದು ಮಾತಾಡಿದ್ದೇವೆ. ರಾಜಕೀಯ ವಿಚಾರಗಳನ್ನು ಚರ್ಚೆ ಮಾಡಿಲ್ಲ ಎಂದರು.
ಬಿಹಾರ ಚುನಾವಣೆ: 57 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಜೆಡಿಯು – vishwanews24
