ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಸಿಎಂ ನಾಯಕತ್ವ ಬದಲಾಗದಿದ್ದರೂ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ರಚನೆ ಆಗುವುದು ಬಹುತೇಕ ಖಚಿತ ಎಂಬುದು ಆ ಪಕ್ಷದ ಪ್ರಮುಖ ನಾಯಕರ ಮಾತುಗಳಿಂದಲೇ ಖಚಿತವಾಗುತ್ತಿದೆ.
ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರು ಸಂಪುಟ ಸರ್ಜರಿ ಮಾಡಿಯೇ ದೆಹಲಿಗೆ ತೆರಳುತ್ತಾರೆ ಅಥವಾ ದೆಹಲಿಗೆ ಹೋದ ಕೂಡಲೇ ತೆಗೆದುಕೊಳ್ಳುತ್ತಾರೆ ಎಂದು ಹೇಳಲಾಗುತ್ತಿದೆ.
ಅದಕ್ಕೆ ಪುಷ್ಟಿ ನೀಡುವಂತೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಕೂಡ ಹೇಳಿದ್ದಾರೆ.
ಅಮಿತ್ ಶಾ ಅವರನ್ನು ನಾನು ಇನ್ನೂ ಭೇಟಿ ಮಾಡಿಲ್ಲ, ಸಚಿವ ಸಂಪುಟ ವಿಸ್ತರಣೆ ಇನ್ನೆರಡು-ಮೂರು ದಿನಗಳಲ್ಲಿ ಆಗಬುಹುದು ಎಂಬ ವಿಶ್ವಾಸ ನನಗಿದೆ. ಆ ಬಗ್ಗೆ ಅಂತಿಮ ತೀರ್ಮಾನವನ್ನು ಅಮಿತ್ ಶಾ ತೆಗೆದುಕೊಂಡೇ ಇಲ್ಲಿಗೆ ಬಂದಿದ್ದಾರೆ ಎಂದು ನಾನು ಭಾವಿಸಿದ್ದೇನೆ ಎಂದು ಯಡಿಯೂರಪ್ಪ ಬೆಂಗಳೂರಿನಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡುತ್ತಾ ಹೇಳಿದರು.
ಸಿಎಂ ಬದಲಾವಣೆ ಇಲ್ಲ: ಸಚಿವ ಸಂಪುಟ ವಿಸ್ತರಣೆ ಆಗುತ್ತದೆಯೇ ಹೊರತು ಸಿಎಂ ಬದಲಾವಣೆ ಇಲ್ಲ, ಅವುಗಳೆಲ್ಲ ಊಹಾಪೋಹಗಳಷ್ಟೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…