Featured

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ , ಬಿಜೆಪಿಗೆ ಬೆಂಬಲ ಘೋಷಿಸಿದ ಎಚ್ .ನಾಗೇಶ್ -Vishwanews24

ಬೆಂಗಳೂರು, ಜುಲೈ 8: ಕಳೆದ ತಿಂಗಳಷ್ಟೇ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಮುಳಬಾಗಿಲು ಪಕ್ಷೇತರ ಶಾಸಕ ಎಚ್ ನಾಗೇಶ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಬಿಜೆಪಿಗೆ ಬೆಂಬಲ ಘೋಷಿಸಿದ್ದಾರೆ.

ಸರ್ಕಾರದ ಬುಡ ಅಲುಗಾಡಲು ಆರಂಭಿಸಿರುವುದರಿಂದ ಮತ್ತು ಅತೃಪ್ತ ಶಾಸಕರ ಗುಂಪಿನಲ್ಲಿ ತಮಗೆ ಸಚಿವ ಸ್ಥಾನ ದೊರೆತಿರುವುದಕ್ಕೆ ಅಸಮಾಧಾನ ಹೆಚ್ಚಾಗಿದೆ ಎಂಬ ಕಾರಣಗಳಿಂದ ಅವರು ರಾಜೀನಾಮೆ ನೀಡಿ ಸಮ್ಮಿಶ್ರ ಸರ್ಕಾರದಿಂದ ಹೊರಬರಲು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ.

ಸಮ್ಮಿಶ್ರ ಸರಕಾರದಲ್ಲಿ ಸಣ್ಣ ಕೈಗಾರಿಕೆ ಸಚಿವರಾಗಿ 20 ದಿನಗಳ ಹಿಂದೆ ಅಧಿಕಾರ ಸ್ವೀಕರಿಸಿದ್ದ ನಾಗೇಶ್ ಇಂದು ಬೆಳಗ್ಗೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಆಯೋಜಿಸಿದ್ದ ಉಪಾಹಾರ ಸಭೆಯಲ್ಲಿ ಭಾಗವಹಿಸಿರಲಿಲ್ಲ. ಅವರು ಇಂದು ಬೆಳಗ್ಗೆ ನೇರವಾಗಿ ರಾಜಭವನಕ್ಕೆ ತೆರಳಿ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಜೊತೆಗೆ ತಾನು ಬಿಜೆಪಿಯನ್ನು ಬೆಂಬಲಿಸುವುದಾಗಿ ಪತ್ರವೊಂದನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ.

ನಾಗೇಶ್ ಅವರಿಗೆ ಸಣ್ಣ ಕೈಗಾರಿಕೆಗಳ ಸಚಿವ ಸ್ಥಾನವನ್ನು ನೀಡಲಾಗಿತ್ತು. ಆದರೆ, ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಸಮ್ಮಿಶ್ರ ಸರ್ಕಾರಕ್ಕೆ ಮತ್ತೊಂದು ಆಘಾತ ನೀಡಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago