ಬೆಂಗಳೂರು, :ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಹೈಕಮಾಂಡ್ ಶಾಕ್ ನೀಡಿದ್ದು, ಆಗಸ್ಟ8 ರ ಬಳಿಕ ಸಂಪುಟ ರಚನೆ ಮಾಡಬೇಕು ಎಂದು ತಿಳಿಸಿದ್ದಾರೆ.
ಮೈತ್ರಿ ಸರ್ಕಾರ ಪತನವಾದ ಬಳಕ, ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಇದೀಗ ಹಲವು ಶಾಸಕರಲ್ಲಿ ಸಚಿವ ಸ್ಥಾನದ ಆಸೆಯು ಚಿಗುರೊಡಿದೆ. ಇದರಿಂದಾಗಿ ಸಚಿವ ಸ್ಥಾನ ಅಲಂಕರಿಸಲು ಶಾಸಕರು ತುದಿಗಾಲಲ್ಲಿ ನಿಂತಿದ್ದು, ಸಿಎಂಗೆ ಯಾರನ್ನು ಆಯ್ಕೆ ಮಾಡುವುದು ಎಂಬ ತಲೆನೋವು ಆವರಿಸಿದೆ. ಇದರ ನಡುವೆ ತವಕಿಸುತ್ತಿದ್ದ ಆಕಾಂಕ್ಷಿಗಳಿಗೆ ಹೈಕಮಾಂಡ್ ಶಾಕ್ ನೀಡುವ ಮೂಲಕ ಬ್ರೇಕ್ ಹಾಕಿದ್ದಾರೆ.
ಸಚಿವ ಸ್ಥಾನದ ಆಕಾಂಕ್ಷಿಗಳು ಸಹ ಹೈಕಮಾಂಡ್ ಮಟ್ಟದಲ್ಲಿ ಒಳಗೊಳಗೆ ಲಾಬಿ ನಡೆಸಲು ದೆಹಲಿಗೆ ಹೊರಡುವ ತಯಾರು ನಡೆಸಿದ್ದರು. ಆದರೆ ಈ ವಿಷಯ ಅರಿತು ಆಗಸ್ಟ್ 7 ರವರೆಗೂ ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬೇರೆ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಹಾಗಾಗಿ ರಾಜ್ಯ ನಾಯಕರು ದೆಹಲಿಗೆ ಬರೋದ ಬೇಡ ಎಂಬ ಸಂದೇಶವನ್ನು ರವಾನಿಸಿದೆ. ಇದರಿಂದ ಸಿಎಂ ಸೇರಿದಂತೆ ಎಲ್ಲರಿಗೂ ಶಾಕಿಂಗ್ ನ್ಯೂಸ್‌ನ್ನು ನೀಡಿದೆ.
ಆಗಸ್ಟ್ 8 ರ ಬಳಿಕವೇ ಸಂಪುಟ ರಚನೆ ಮಾಡಬೇಕು ಎಂದು ಹೈಕಮಾಂಡ್ ತಿಳಿಸಿದ್ದು ಈ ಬಗ್ಗೆ ಬಿಜೆಪಿ ಮೂಲಗಳು ತಿಳಿಸಿವೆ. ತಮ್ಮದೇ ಸಮುದಾಯದ ಆಪ್ತರ ತಲೆನೋವಾಗಿದೆ. ಯಡಿಯೂರಪ್ಪ ಕ್ಯಾಬಿನೆಟ್ ಸೇರಲು ಲಿಂಗಾಯತ ಸಮುದಾಯದ ಹಲವಾರು ಆಂಕಾಕ್ಷಿಗಳು ಇದ್ದು, ಹೀಗಾಗಿ ಯಾರಿಗೆ ಸಚಿವ ಸ್ಥಾನ ಕೊಡುವುದು, ಯಾರಿಗೆ ಬಿಡುವುದು ಅನ್ನೋ ಧರ್ಮ ಸಂಕಟ ಬಿಎಸ್‌ವೈಗೆ ಎದುರಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…