Featured

ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಅಸಮಾಧಾನವನ್ನು ವ್ಯಕ್ತಪಡಿಸಿದ ಸುಳ್ಯ ಶಾಸಕ ಎಸ್ ಅಂಗಾರ -Vishwanews24

ಸುಳ್ಯ: ಸುಳ್ಯ ಶಾಸಕ ಎಸ್ ಅಂಗಾರ ಅವರು ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ನಾನು ನಮ್ಮ ಕ್ಷೇತ್ರದಿಂದ ಸಚಿವನಾಗಬೇಕು ಎಂಬುವುದು ನಮ್ಮ ಜಿಲ್ಲೆ ಮತ್ತು ಕ್ಷೇತ್ರದ ಜನರ ಅಪೇಕ್ಷೆಯಾಗಿದೆ. ಆದರೆ ಕಳೆದ ಅನೇಕ ವರ್ಷಗಳಿಂದ ಸಂಘಟನೆಯಲ್ಲಿ ತತ್ವ ಮತ್ತು ಸಿದ್ಧಾಂತವನ್ನು ನಂಬಿ ನಾನು ಕೆಲಸ ಮಾಡಿಕೊಂಡು ಬರುತ್ತಿದ್ದೇನೆ. ಇಂದು ತತ್ವ ನಿಷ್ಠೆಗಳಿಗೆ ಮಹತ್ವ ಇಲ್ಲವೆಂದರೆ ನಾವು ಏನು ಮಾಡುವುದಕ್ಕೆ ಆಗಲ್ಲ ಎಂದು ಬೇಸರ ವ್ಯಕ್ತಪಡಿಸಿದರು..

ಪ್ರಮಾಣ ವಚನದಲ್ಲಿ ಪ್ರಥಮ ಹಂತದ 17 ಸಚಿವರ ಪಟ್ಟಿಯನ್ನು ಬಿಡುಗಡೆಗೊಳಿಸಿದ ಮುಖ್ಯಮಂತ್ರಿ, ಕೊನೆ ಕ್ಷಣದವರಗೂ ಸಚಿವ ಮಂತ್ರಿ ದೊರಕಬಹುದು ಎಂದು ಬಯಸಿದ್ದ ಶಾಸಕರಿಗೆ ನಿರಾಸೆಯುಂಟಾಗಿದೆ. ಸುಳ್ಯ ಕ್ಷೇತ್ರದಲ್ಲಿ ಆರು ಬಾರಿ ಗೆದ್ದಿರುವ ಎಸ್ ಅಂಗಾರರಿಗೆ ಸಚಿವ ಸ್ಥಾನ ದೊರಕಬಹುದು ಎಂದು ಸಾಕಷ್ಟು ನಿರೀಕ್ಷೆಗಳು ಕಾರ್ಯಕರ್ತರಲ್ಲಿತ್ತು. ಆದರೆ ಇಂದು ಬಿಡುಗಡೆಗೊಳಿಸಿದ ಸಚಿವರ ಅಂತಿಮ ಪಟ್ಟಿ ಮೌನ ಮುರಿಯುವಂತೆ ಮಾಡಿದೆ.

ನಾವು ತತ್ವ ನಿಷ್ಠೆಯನ್ನು ಬಿಡುವುದಕ್ಕೆ ಆಗಲ್ಲ. ಸಂಘಟನೆಯ ಪ್ರಮುಖ ಭಾಗ ಮತ್ತು ಸಂಘಟನೆ ಯಶಸ್ವಿಯಾಗಿ ನಡೆಯಬೇಕಾದರೆ ತತ್ವ ನಿಷ್ಠೆಯೇ ಅತ್ಯಂತ ಪ್ರಮುಖವಾಗಿದೆ. ಆದ ಕಾರಣ ಇಂದು ನಮಗೆ ಸಚಿವ ಸ್ಥಾನ ಸಿಗದೇ ಇರಬಹುದು. ಆದರೆ ಸಂಘಟನೆಯಲ್ಲಿ ಯಾವುದೇ ರೀತಿಯ ಮನಸ್ತಾಪ ಇಲ್ಲ. ಕೆಲವು ಘಟನೆಗಳು ಈ ರೀತಿ ಆಗುತ್ತವೆ. ಅದಕ್ಕೆ ನಾವು ಏನು ಮಾಡುವುದಕ್ಕೆ ಆಗಲ್ಲ. ಇಂದು ನಮ್ಮ ಕ್ಷೇತ್ರದ ಜನರು ನಮ್ಮ ಮೇಲಿನ ಅಭಿಮಾನ ಗೌರವದಿಂದ ಬಂದಿದ್ದರು. ಹೀಗಾಗಿ ಅವರಿಗೆಲ್ಲ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು.

 

 

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

16 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago