Featured

ಸಚಿವ ಸ್ಥಾನ ಬಿಟ್ಟು ಪಕ್ಷದ ಸಂಘಟನೆಗಾಗಿ ದುಡಿಯಲು ಸಿದ್ಧ : ಈಶ್ವರಪ್ಪ – Vishwanews24

ಸಚಿವ ಸ್ಥಾನ ಬಿಟ್ಟು ಪಕ್ಷದ ಸಂಘಟನೆಗಾಗಿ ದುಡಿಯಲು ಸಿದ್ಧ : ಈಶ್ವರಪ್ಪ – Vishwanews24

ಹುಬ್ಬಳ್ಳಿ: ಸಚಿವ ಸ್ಥಾನ ಧಾರಾಳವಾಗಿ ಬಿಟ್ಟು, ಪಕ್ಷದ ಸಂಘಟನೆಗಾಗಿ ದುಡಿಯಲು ಸಿದ್ಧನಿದ್ದೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಹುಬ್ಬಳ್ಳಿಯಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಂತರ ಅವರು ಮಾತನಾಡಿದರು. ಸಂಪುಟದಲ್ಲಿ ಹಿರಿಯರನ್ನು ಕೈಬಿಡಬೇಕೆಂದು ರೇಣುಕಾಚಾರ್ಯ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಸಂಪುಟದಿಂದ ನನ್ನನ್ನು ಕೈ ಬಿಡುವುದಿದ್ದರೆ ನಾನು ಸಹ ತಯಾರಿದ್ದೇನೆ. ಪಕ್ಷ ಸಂಘಟನೆಗೆ ಶ್ರಮಿಸುತ್ತೇನೆ. ಅಧಿಕಾರ ಎಷ್ಟರ ಮಟ್ಟಿಗೆ ಒಳ್ಳೆಯದು ಹಾಗೂ ಕೆಟ್ಟದು ಎನ್ನುವುದು ನನಗೆ ಗೊತ್ತು ಎಂದರು.

ಕಾರ್ಯಕಾರಿಣಿಯಲ್ಲಿ ಹಲವಾರು ವಿಷಯಗಳ ಬಗ್ಗೆ ಚರ್ಚೆಯಾಗಿದೆ. ವಿಧಾನ ಪರಿಷತ್ ಚುನಾವಣೆಯಲ್ಲಿ ನಮಗೆ ಬಹಳ ದೊಡ್ಡ ಗೆಲುವಾಗಿದೆ. ಇದಕ್ಕಾಗಿ ರಾಜ್ಯದ ಜನರಿಗೆ ವಿಶೇಷ ಅಭಿನಂದನೆ ಸಲ್ಲಿಸಬೇಕು. ಸಿಂದಗಿ ಉಪಚುನಾವಣೆ ಅತಿ ಹೆಚ್ಚು ಮತಗಳನ್ನು ಕೊಟ್ಟಿದ್ದಕ್ಕೆ ಜನರಿಗೆ ಧನ್ಯವಾದಗಳನ್ನು ಸಲ್ಲಿಸಿದರು.

ಜ. 5ರಂದು ಶಿವಮೊಗ್ಗದಲ್ಲಿ ಹಿಂದುಳಿದ ವರ್ಗಗಳ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಅಲ್ಲಿ ನಾವು ಮುಂದಿನ ಚುನಾವಣೆ ಹಾಗೂ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಲಿದ್ದೇವೆ ಎಂದು ತಿಳಿಸಿದರು.

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

3 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

9 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

11 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

11 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

12 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

12 hours ago