Featured

ಸಣ್ಣ ಗಲಾಟೆ ನಡೆದಿದ್ದು ನಿಜ, ಆದ್ರೆ ದರ್ಶನ್ ಯಾರಿಗೂ ಹೊಡೆದಿಲ್ಲ: ಹೋಟೆಲ್ ಮಾಲೀಕ  ಸಂದೇಶ್ ನಾಗರಾಜ್ ಪುತ್ರ ಸ್ಪಷ್ಟನೆ -Vishwanews24

ಸಣ್ಣ ಗಲಾಟೆ ನಡೆದಿದ್ದು ನಿಜ, ಆದ್ರೆ ದರ್ಶನ್ ಯಾರಿಗೂ ಹೊಡೆದಿಲ್ಲ: ಹೋಟೆಲ್ ಮಾಲೀಕ  ಸಂದೇಶ್ ನಾಗರಾಜ್ ಪುತ್ರ ಸ್ಪಷ್ಟನೆ -Vishwanews24

ಮೈಸೂರು: ಸಣ್ಣದಾಗಿ ಗಲಾಟೆ ನಡೆದಿದ್ದು ನಿಜ, ಆದರೆ ದರ್ಶನ್ ಯಾರಿಗೂ ಹೊಡೆದಿಲ್ಲ. ನಮ್ಮ ಕಾರ್ಮಿಕರಿಗೆ ಬೈದಿದ್ದಾರೆ ಅಷ್ಟೇ ಎಂದು ಸಂದೇಶ್ ದಿ ಪ್ರಿನ್ಸ್ ಮಾಲೀಕ ಸಂದೇಶ್ ನಾಗರಾಜ್ ಅವರ ಪುತ್ರ ಸ್ಪಷ್ಟಪಡಿಸಿದ್ದಾರೆ.

ಹೋಟೇಲಿನಲ್ಲಿ ವೇಟರ್ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪ ಸಂಬಂಧ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಸಣ್ಣ ಜಗಳ ಆಗಿದ್ದು ನಿಜ, ಆದರೆ ಹೊಡೆದಿಲ್ಲ ಬೈದಿದ್ದಾರೆ ಅಷ್ಟೆ. ಅಂದು ನಾನು ಕೂಡ ಇದ್ದೆ. ಬೈಬೇಡಪ್ಪ ನಮ್ಮ ಕಾರ್ಮಿಕರಿಗೆ. ನಮಗೆ ಕೆಲಸಗಾರರು ಸಿಗುವುದಿಲ್ಲ. ನೀನು ಯಾವುದೋ ಟೆನ್ಶನ್ ನಲ್ಲಿ ನಮ್ಮವರಿಗೆ ಯಾಕೆ ಬೈತೀಯಾ ಎಂದಿದ್ದೆ. ಅದಕ್ಕೆ ಅವನು ಕೋಪ ಕೂಡ ಮಾಡಿಕೊಂಡಿದ್ದ ಎಂದರು.

ನಾವು ಶೂಟಿಂಗ್ ನಲ್ಲೂ ಜಗಳ ಆಡುತ್ತೇವೆ. ನಾನು ತಪ್ಪು ಮಾಡಿದಾಗ ಅವನು ಹೇಳುತ್ತಾನೆ, ಅವನು ತಪ್ಪು ಮಾಡಿದಾಗ ನಾನು ಹೇಳ್ತೇನೆ. ಫ್ರೆಂಡ್ ಶಿಪ್ ನಲ್ಲಿ ಇದೆಲ್ಲ ಮಾಮೂಲಿ. ಆದರೆ ಗಲಾಟೆ ಸಂಬಂಧ ತೋಟದಲ್ಲಿ ಏನೇನು ಆಗಿದೆ ಎಂದು ಗೊತ್ತಿಲ್ಲ. ನನ್ನ ಕಾರ್ಮಿಕರಿಗೆ ಏನಾದರೂ ಆದರೆ ನಾನು ಬಿಡ್ತೀನಾ ಎಂದು ಪ್ರಶ್ನಿಸಿದರು.

ಸಣ್ಣ ಮಟ್ಟಿನ ಜಗಳ ನಡೆದಿದೆ. ಈ ಘಟನೆ ನಡೆದು ಒಂದು ತಿಂಗಳು ಕಳೆದಿದೆ. ಈ ಬಗ್ಗೆ ನಮ್ಮ ತಂದೆಯವರಿಗೆ ಏನೂ ಗೊತ್ತಿಲ್ಲ. ಹೋಟೆಲ್ ನಡೆಸುತ್ತಿರುವುದು ನಾನು, ಹೀಗಾಗಿ ಅವರಿಗೂ ಈ ಘಟನೆಗೂ ಸಂಬಂಧವಿಲ್ಲ ಎಂದರು.

ಮೊದಲ ಬಾರಿಗೆ ಮೀಡಿಯಾ ಮುಂದೆ ಬಂದಿದ್ದೇನೆ. ಯಾಕಂದ್ರೆ ಇದನ್ನು ಹೀಗೆ ಬಿಟ್ಟರೆ ನಮ್ಮ ಹೋಟೆಲ್ ಹಾಗೂ ಹೀರೋಗೆ ಕೆಟ್ಟ ಹೆಸರು ಬರುತ್ತೆ. ಅಲ್ಲದೆ ನಮ್ಮ ಕಾರ್ಮಿಕರಿಗೂ ಕೆಟ್ಟ ಹೆಸರು ಬರುತ್ತದೆ. ಈ ಹಿನ್ನೆಲೆಯಲ್ಲಿ ದಯವಿಟ್ಟು ಇದನ್ನು ಇಲ್ಲಿಗೆ ಬಿಟ್ಟುಬಿಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

16 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

16 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

17 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

19 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

19 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

20 hours ago