ಹೊಸದಿಲ್ಲಿ: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈ ವರ್ಷದ ಮಾರ್ಚ್‌ಗೆ ಅಧಿಕಾರ ಪಡೆದುಕೊಂಡು ನಾಲ್ಕು ವರ್ಷ ಪೂರ್ಣಗೊಳಿಸಲಿದ್ದಾರೆ. ಈ ಮಧ್ಯೆ ನಡೆದಿರುವ ಸಮೀಕ್ಷೆಯೊಂದು ಹೊರಬಿದ್ದಿದ್ದು,, ದೇಶದ ಅತ್ಯುತ್ತಮ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಹೊರಹೊಮ್ಮಿದ್ದಾರೆ. ಸತತ ನಾಲ್ಕು ಬಾರಿಯ ಅತ್ಯುತ್ತಮ ಮುಖ್ಯಮಂತ್ರಿ ಎನ್ನುವ ಪಟ್ಟವನ್ನು ಯೋಗಿ ಆದಿತ್ಯನಾಥ್ ಅಲಂಕರಿಸಿಕೊಂಡಿದ್ದಾರೆ.
ಇಂಡಿಯಾ ಟುಡೆ ಗ್ರೂಪ್-ಕಾರ್ವಿ ಇನ್ಸೈಟ್ಸ್ ಮೂಡ್ ಆಫ್ ದಿ ನೇಷನ್ (ಎಂಒಟಿಎನ್) ನಡೆಸಿದ 2021ರ ಸಾಲಿನ ಸಮೀಕ್ಷೆಯಲ್ಲಿ ಶೇ.25ರಷ್ಟು ಮತಗಳನ್ನು ಯೋಗಿ ಆದಿತ್ಯನಾಥ್ ಪಾಲಾಗಿದೆ. ಅತ್ಯುತ್ತಮ ಹಾಗೂ ಉತ್ತಮ ಸಾಧನೆ ತೋರಿದ ಮುಖ್ಯಮತ್ರಿ ಯಾರು ಎನ್ನುವ ಪ್ರಶ್ನೆಗೆ ಅನೇಕರು ಯೋಗಿ ಆದಿತ್ಯನಾಥ್ ಎಂದಿದ್ದಾರೆ. ಇನ್ನು ಸಮೀಕ್ಷೆಯ ಪ್ರಕಾರ, ಶೇಕಡಾ 54 ರಷ್ಟು ಜನರು ಆದಿತ್ಯನಾಥ್ ಅವರ ಮತಾಂತರ ವಿರೋಧಿ ಕಾನೂನನ್ನು ಬೆಂಬಲಿಸಿದರೆ, 58 ಪ್ರತಿಶತದಷ್ಟು ಜನರು ಅಂತರ್ ಧರ್ಮದ ವಿರುದ್ಧದ ಕಾನೂನುಗಳ ವಿರುದ್ಧ ಮತ ಚಲಾಯಿಸಿದ್ದಾರೆ.
ಇದನ್ನೂ ಓದಿ :ಕೋಸ್ಟಲ್‌ವುಡ್ : ಬಿಡುಗಡೆಯ ತಯಾರಿಯಲ್ಲಿ ಮೂರು ತುಳು ಸಿನಿಮಾಗಳು ..Vishwanews24
ಇನ್ನು ಸಮೀಕ್ಷೆಯ ಪ್ರಕಾರ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶೇ 14 ರಷ್ಟು ಮತಗಳನ್ನು ಗಳಿಸುವ ಮೂಲಕ ಎರಡನೇ ಅತ್ಯುತ್ತಮ ಮುಖ್ಯಮಂತ್ರಿಯಾಗಿ ಹೊರಹೊಮ್ಮಿದ್ದಾರೆ. ಇನ್ನು ಅವರ ನಂತರ ಪಶ್ಚಿಮ ಬಂಗಾಳ ಮಮತಾ ಬ್ಯಾನರ್ಜಿ ಮೂರನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷದ ಜೆಡಿಯು ಕಳಪೆ ಸಾಧನೆ ತೋರಿದ್ದರೂ ಸತತ ನಾಲ್ಕನೇ ಅವಧಿಗೆ ಬಿಹಾರ ಮುಖ್ಯಮಂತ್ರಿಯಾದ ನಿತೀಶ್ ಕುಮಾರ್ 6 ಶೇಕಡಾ ಮತಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ, ನಂತರ ಜಗನ್ ಮೋಹನ್ ರೆಡ್ಡಿ ಐದನೇ ಸ್ಥಾನ ಪಡೆದಿದ್ದಾರೆ.
ಇದನ್ನೂ ಓದಿ :ನಟಿ ಅಮೂಲ್ಯ ದಂಪತಿಯಿಂದ ರಾಮ ಮಂದಿರ ನಿರ್ಮಾಣಕ್ಕೆ 2.50 ಲಕ್ಷ ರೂಪಾಯಿ ದೇಣಿಗೆ -Vishwanews24
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…