Featured

ಸತತ 10ನೇ ಬಾರಿಗೆ ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್ ಇಂದು  ಪ್ರಮಾಣವಚನ – vishwanews24

ಸತತ 10ನೇ ಬಾರಿಗೆ ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್ ಇಂದು  ಪ್ರಮಾಣವಚನ

ಪಾಟ್ನಾ: ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್  ಸತತ 10ನೇ ಬಾರಿಗೆ ಬಿಹಾರ ಸಿಎಂ  ಆಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಪಾಟ್ನಾದ ಗಾಂಧಿ ಮೈದಾನದಲ್ಲಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಹಲವಾರು ಉನ್ನತ ಎನ್‌ಡಿಎ  ನಾಯಕರು ಭಾಗವಹಿಸುವ ನಿರೀಕ್ಷೆಯಿದೆ.

ಮುಖ್ಯ ವೇದಿಕೆಯ ಹೊರತಾಗಿ, ವಿಐಪಿಗಳಿಗೆ ಸ್ಥಳಾವಕಾಶ ಕಲ್ಪಿಸಲು ಹಲವಾರು ಪೆಂಡಾಲ್‌ಗಳನ್ನು ಸಹ ನಿರ್ಮಿಸಲಾಗಿದೆ. ಹೆಚ್ಚುವರಿ ಭದ್ರತಾ ವ್ಯವಸ್ಥೆಗಳನ್ನು ಸಹ ಮಾಡಲಾಗಿದ್ದು, ಕಾರ್ಯಕ್ರಮದಲ್ಲಿ 3 ಲಕ್ಷಕ್ಕೂ ಅಧಿಕ ಮಂದಿ ಸೇರುವ ನಿರೀಕ್ಷೆಯಿದೆ ಎಂದು ಬಿಜೆಪಿ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ನಿತೀಶ್ ಜೊತೆಗೆ ಸುಮಾರು 20-22 ಜನ ಸಚಿವರು ಕೂಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಿಜೆಪಿ ತನ್ನ ಶಾಸಕಾಂಗ ಪಕ್ಷದ ನಾಯಕರಾಗಿ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಅವರನ್ನು ಆಯ್ಕೆ ಮಾಡಿದ್ದು, ಈ ಇಬ್ಬರು ನಿತೀಶ್ ಕುಮಾರ್ ನೇತೃತ್ವದ ನೂತನ ಎನ್‌ಡಿಎ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಗಳಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago