ಪಾಟ್ನಾ: ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಸತತ 10ನೇ ಬಾರಿಗೆ ಬಿಹಾರ ಸಿಎಂ ಆಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಪಾಟ್ನಾದ ಗಾಂಧಿ ಮೈದಾನದಲ್ಲಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಹಲವಾರು ಉನ್ನತ ಎನ್‌ಡಿಎ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ.
ಮುಖ್ಯ ವೇದಿಕೆಯ ಹೊರತಾಗಿ, ವಿಐಪಿಗಳಿಗೆ ಸ್ಥಳಾವಕಾಶ ಕಲ್ಪಿಸಲು ಹಲವಾರು ಪೆಂಡಾಲ್‌ಗಳನ್ನು ಸಹ ನಿರ್ಮಿಸಲಾಗಿದೆ. ಹೆಚ್ಚುವರಿ ಭದ್ರತಾ ವ್ಯವಸ್ಥೆಗಳನ್ನು ಸಹ ಮಾಡಲಾಗಿದ್ದು, ಕಾರ್ಯಕ್ರಮದಲ್ಲಿ 3 ಲಕ್ಷಕ್ಕೂ ಅಧಿಕ ಮಂದಿ ಸೇರುವ ನಿರೀಕ್ಷೆಯಿದೆ ಎಂದು ಬಿಜೆಪಿ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.
ನಿತೀಶ್ ಜೊತೆಗೆ ಸುಮಾರು 20-22 ಜನ ಸಚಿವರು ಕೂಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಿಜೆಪಿ ತನ್ನ ಶಾಸಕಾಂಗ ಪಕ್ಷದ ನಾಯಕರಾಗಿ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಅವರನ್ನು ಆಯ್ಕೆ ಮಾಡಿದ್ದು, ಈ ಇಬ್ಬರು ನಿತೀಶ್ ಕುಮಾರ್ ನೇತೃತ್ವದ ನೂತನ ಎನ್‌ಡಿಎ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಗಳಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…