Featured

ಸತತ 4ನೇ ಬಾರಿ ಬಜೆಟ್ ಮಂಡಿಸುತ್ತಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ – Vishwanews24

ಸತತ 4ನೇ ಬಾರಿ ಬಜೆಟ್ ಮಂಡಿಸುತ್ತಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ – Vishwanews24

ನವದೆಹಲಿ: 2022-2023ನೇ ಸಾಲಿನ ಕೇಂದ್ರ ಬಜೆಟ್ ಮಂಗಳವಾರ ಮಂಡನೆಯಾಗುತ್ತಿದೆ. ಕೊರೋನಾ ಸಾಂಕ್ರಾಮಿ ರೋಗ ಹಿನ್ನೆಲೆ ತೀವ್ರ ಆರ್ಥಿಕ ಸಂಕಷ್ಟ, ನಿರುದ್ಯೋಗ ಹೆಚ್ಚಳ, ಕೃಷಿ ಉದ್ಯಮ, ರಫ್ತು, ವಾಹನೋದ್ಯಮ ಸೇರಿದಂತೆ ಪ್ರತಿಯೊಂದು ವಲಯವೂ ಋಣಾತ್ಮಕ ಬೆಳವಣಿಗೆ ದಾಖಲಿಸಿದ್ದು, ಸಾಲು ಸಾಲು ಸವಾಲುಗಳ ನಡುವಲ್ಲೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಮಾಡುತ್ತಿದ್ದಾರೆ.

ಬಜೆಟ್ ಮಂಡನೆಗೂ ಮುನ್ನ ಇಂದು ಬೆಳಿಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ತಮ್ಮ ತಂಡದೊಂದಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿದರು. ಬಳಿಕ ನಿರ್ಮಲಾ ಸೀತಾರಾಮನ್ ಹಾಗೂ ಹಣಕಾಸು ಇಲಾಖೆ ರಾಜ್ಯ ಸಚಿವರಾದ ಪಂಕಜ್ ಚೌಧರಿ ಮತ್ತು ಭಾಗವತ್ ಕರದ್ ಅವರು ಅಲ್ಲಿಂದ ಸಂಪುಟ ಸಭೆಗೆ ತೆರಳಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಬಜೆಟ್’ಗೆ ಅನುಮೋದನೆ ಪಡೆದುಕೊಳ್ಳಲಾಯಿತು.

ಹಣಕಾಸು ಸಚಿವೆಯಾದ ಬಳಿಕ ನಿರ್ಮಲಾ ಸೀತಾರಾಮನ್ ಅವರು ಮಂಡನೆ ಮಾಡುತ್ತಿರುವ ನಾಲ್ಕನೇ ಬಜೆಟ್ ಇದಾಗಿದೆ.

Vishwa News 24

Recent Posts

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ – vishwanews24

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…

21 minutes ago

ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು – ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ – vishwanews24

ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು-ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ…

43 minutes ago

ಡಿವೈಡರ್‌ಗೆ ಕಾರು ಡಿಕ್ಕಿ : ಖ್ಯಾತ ನಟಿ  ಮಾಡೆಲ್ ಹರ್ಷಿಲ್ ಕಾಲಿಯಾ ಸಾವು – vishwanews24

ಡಿವೈಡರ್‌ಗೆ ಕಾರು ಡಿಕ್ಕಿ :  ಭೀಕರ ಅಪಘಾತದಲ್ಲಿ ಖ್ಯಾತ ನಟಿ  ಮಾಡೆಲ್ ಹರ್ಷಿಲ್ ಕಾಲಿಯಾ ಸಾವು ಜೈಪುರ: ಜೈಪುರದಲ್ಲಿ ಕಾರು…

1 hour ago

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago