Featured

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ

ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ ಇದೀಗ ದೆಹಲಿಯಲ್ಲಿ ಸಿಎನ್‌ಜಿ ದರವನ್ನು ಪ್ರತಿ ಕೆಜಿಗೆ 2 ರೂ.ಗಳಷ್ಟು ಏರಿಕೆ ಮಾಡಲಾಗಿದೆ.

ದೆಹಲಿಯಲ್ಲಿ ಇಂದು ಬೆಳಗ್ಗೆ 6 ಗಂಟೆಯಿಂದ ಜಾರಿಗೆ ಬರುವಂತೆ ಸಂಕುಚಿತ ನೈಸರ್ಗಿಕ ಅನಿಲ ಬೆಲೆಯನ್ನು 2 ರೂ. ಗಳಷ್ಟು ಹೆಚ್ಚಿಸಲಾಗಿದೆ.

ಹೊಸ ಬೆಲೆಯ ಅನ್ವಯ ದೆಹಲಿಯಲ್ಲಿ ಪ್ರತಿ ಕೆಜಿ ಸಿಎನ್‌ಜಿ ಬೆಲೆ 8.09 ರೂ.ಗಳಿಗೆ ತಲುಪಿದೆ. ಜಾಗತಿಕ ಮತ್ತು ತೈಲ ಬಿಕ್ಕಟ್ಟಿನಿಂದ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ನಡುವೆಯೇ ಸಿಎನ್‌ಜಿ ಬೆಲೆ ಹೆಚ್ಚಳ ಕಂಡುಬಂದಿದೆ.

ಇದನ್ನೂ ಓದಿ:

ಇತ್ತೀಚಿನ ದಿನಗಳಲ್ಲಿ ಸಿಎನ್‌ಜಿ ಬೆಲೆಗಳನ್ನು ಎರಡು ಬಾರಿ ಹೆಚ್ಚಿಸಲಾಗಿದೆ. ಒಟ್ಟಾರೆಯಾಗಿ, ಕಳೆದ 12 ದಿನಗಳಲ್ಲಿ ಪ್ರತಿ ಕೆಜಿಗೆ 6 ರೂ.ಗಳಷ್ಟು ಹೆಚ್ಚಳ ಮಾಡಲಾಗಿದೆ. ಒಟ್ಟಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬಳಿಕ ಸಿಎನ್‌ಜಿ ಈಗ ಸಾಮಾನ್ಯ ಜನರ ಜೇಬಿನ ಕತ್ತರಿ ಹಾಕುತ್ತಿದೆ.

ಯಾರಿಗೆ ಹೊರೆ?
ಸಿಎನ್‌ಜಿ ಬೆಲೆ ಹೆಚ್ಚಳವು ದೆಹಲಿಯಲ್ಲಿ ವಾಣಿಜ್ಯ ವಾಹನ ಚಾಲಕರಿಗೆ ಹೆಚ್ಚು ಹೊರೆಯಾಗಲಿದೆ. ದೆಹಲಿ-ಎನ್‌ಸಿಆರ್‌ನಲ್ಲಿ ಆಟೋಗಳು, ಟ್ಯಾಕ್ಸಿಗಳು, ಶಾಲಾ ವ್ಯಾನ್‌ಗಳು ಮತ್ತು ಖಾಸಗಿ ಕಾರುಗಳು ಸಿಎನ್‌ಜಿಯ ಸಾಮಾನ್ಯ ಬಳಕೆದಾರರಾಗಿದ್ದಾರೆ. ಈ ಬೆಲೆ ಏರಿಕೆಯೂ ಈ ವರ್ಗದ ಚಾಲಕರಿಗೆ ಹೆಚ್ಚು ಆರ್ಥಿಕ ಹೊರೆ ನೀಡಲಿದೆ. ಅಲ್ಲದೇ ಸಿಎನ್‌ಜಿ ಬೆಲೆ ಏರಿಕೆಯು ಮುಂಬರುವ ದಿನಗಳಲ್ಲಿ ಪ್ರಯಾಣ ಮತ್ತು ಸರಕು ಸಾಗಣೆ ದರಗಳನ್ನ ಹೆಚ್ಚಿಸಲು ಕಾರಣವಾಗಬಹುದು ಎಂದು ಆಟೋ ಮತ್ತು ಟ್ಯಾಕ್ಸಿ ಚಾಲಕರ ಒಕ್ಕೂಟಗಳು ಹೇಳುತ್ತಿವೆ.

ಇದನ್ನೂ ಓದಿ:

Vishwa News 24

Recent Posts

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

2 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

3 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

4 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

4 hours ago

ಬೆಳ್ತಂಗಡಿ : ಜೂನ್ 1 ರಿಂದ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು – vishwanews24

ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…

4 hours ago

50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ ಘೋಷಿಸಿದ ವಿಜಯ್‌ – vishwanews24

50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ ಘೋಷಿಸಿದ ವಿಜಯ್‌ ಚೆನ್ನೈ: ರೈತರಿಗೆ ಭಾರಿ ನೆರವು ಘೋಷಿಸಿರುವ ತಮಿಳುನಾಡು…

4 hours ago