ಪಕ್ಷ ವಿರೋಧಿ ಚಟುವಟಿಕೆ ಹಾಗೂ ಪಕ್ಷದ ಶಿಸ್ತು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಈ ಕುರಿತು ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷರಾದ ಲಿಂಗರಾಜ ಪಾಟೀಲ್ ಅವರು ಉಚ್ಚಾಟಿಸಿ ಆದೇಶ ಪ್ರಕಟಿಸಿದ್ದಾರೆ.
ಇದನ್ನೂ ಓದಿ:
ಉಚ್ಚಾಟಿಸಿದ್ದು ಯಾಕೆ?
ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಸೇರಿದಂತೆ ಸ್ಥಳೀಯ ಪ್ರಮುಖ ಬಿಜೆಪಿ ನಾಯಕರ ವಿರುದ್ಧ ಸತೀಶ್ ಕಡತನಮಲೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರು. ಪದೇಪದೇ ಸುದ್ದಿಗೋಷ್ಠಿಗಳನ್ನು ನಡೆಸುವ ಮೂಲಕ ಮಾಧ್ಯಮಗಳ ಮುಂದೆ ಪಕ್ಷ ಮತ್ತು ನಾಯಕರ ವಿರುದ್ಧ ಹೇಳಿಕೆ ನೀಡಿ ಮುಜುಗರ ಉಂಟುಮಾಡಿದ್ದರು.
ಸತೀಶ್ ಕಡತನಮಲೆ ಅವರು ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ಅವರಿಗೆ ಅತ್ಯಂತ ಆಪ್ತರಾಗಿದ್ದರೂ, ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್‌ನ ಪ್ರಭಾವಿ ನಾಯಕ, ಮಾಜಿ ಸಂಸದ ಡಿ.ಕೆ. ಸುರೇಶ್ ಅವರೊಂದಿಗೂ ಹೆಚ್ಚು ಗುರುತಿಸಿಕೊಳ್ಳುತ್ತಿದ್ದರು. ಇದು ಸ್ಥಳೀಯ ಬಿಜೆಪಿ ನಾಯಕರ ಕೆಣ್ಣಿಗೆ ಗುರಿಯಾಗಿತ್ತು.
ಇದನ್ನೂ ಓದಿ:
ಸತೀಶ್ ಅವರ ನಡವಳಿಕೆ ಕುರಿತು ಸ್ಥಳೀಯ ಮುಖಂಡರು ರಾಜ್ಯ ಶಿಸ್ತು ಸಮಿತಿಗೆ ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷವು ಅವರಿಗೆ ನೋಟಿಸ್ ನೀಡಿ ಸ್ಪಷ್ಟೀಕರಣ ಕೇಳಿತ್ತು. ಆದರೆ ಸತೀಶ್ ಕಡತನಮಲೆ ಅವರು ನೀಡಿದ ಸ್ಪಷ್ಟೀಕರಣವು ಸಮಂಜಸ ಹಾಗೂ ತೃಪ್ತಿಕರವಾಗಿಲ್ಲದ ಕಾರಣ, ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಬಿಜೆಪಿ ಆದೇಶದಲ್ಲಿ ತಿಳಿಸಿದೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್‌ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]