Featured

ಸತೀಶ್​​ ಜಾರಕಿಹೊಳಿಗೆ ಇಡಿ ದಾಳಿ ರಾಜಕೀಯ ಪ್ರೇರಿತ ; ಅವರು ಯಾವುದೇ ತಪ್ಪು ಮಾಡಿಲ್ಲ : ಸಿಎಂ ಡಿಕೆಶಿ – vishwanews24

ಸತೀಶ್​​ ಜಾರಕಿಹೊಳಿ ಅವರ ಬೆಳವಣಿಗೆ ಬಿಜೆಪಿಯವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ..

ನಮ್ಮ ಕುಟುಂಬಸ್ಥರು ವಿದೇಶದಲ್ಲಿ ಬಿಸಿನೆಸ್ ಮಾಡುವುದು ತಪ್ಪಾ?..

ಅವರ ಜೊತೆ ಪಕ್ಷ ಮತ್ತು ಸರ್ಕಾರ ಶೇಕಡಾ ನೂರರಷ್ಟು ಗಟ್ಟಿಯಾಗಿ ನಿಲ್ಲಲಿದೆ :  ಸಿಎಂ ಡಿಕೆ ಶಿ

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿರುವ ದಾಳಿ ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸತೀಶ್ ಜಾರಕಿಹೊಳಿ ಪ್ರಭಾವಿ ದಲಿತ ನಾಯಕ. ಅವರ ಬೆಳವಣಿಗೆಯನ್ನು ಬಿಜೆಪಿಯವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಈ ಹಿಂದೆ ನನ್ನ ಮೇಲೂ ದಾಳಿ ನಡೆಸಿ ಜೈಲಿಗೆ ಹಾಕಿದ್ದರು. ಈಗ ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿಸಿಕೊಂಡು ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: 

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಯಾವುದೇ ತಪ್ಪು ಮಾಡಿಲ್ಲ. ಅವರ ಜೊತೆ ಪಕ್ಷ ಮತ್ತು ಸರ್ಕಾರ ಶೇಕಡಾ ನೂರರಷ್ಟು ಗಟ್ಟಿಯಾಗಿ ನಿಲ್ಲಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಬೇರೆ ದೇಶದಲ್ಲಿ ವ್ಯಾಪಾರ-ವಹಿವಾಟು ಮಾಡಬಾರದಾ? ಅದಕ್ಕೆ ಕಾನೂನಿನಲ್ಲಿ ಅವಕಾಶ ಇಲ್ವಾ? ನಮ್ಮ ಕುಟುಂಬಸ್ಥರು ವಿದೇಶದಲ್ಲಿ ಬಿಸಿನೆಸ್ ಮಾಡುವುದು ತಪ್ಪಾ? ಸತೀಶ್ ಜಾರಕಿಹೊಳಿ ಒಬ್ಬ ಹಿರಿಯ ಮಂತ್ರಿ ಹಾಗೂ ಉದ್ಯಮಿ. ಯಾವುದೇ ಮುಚ್ಚುಮರೆ ಇಲ್ಲದೆ ಸಮಾಜಸೇವೆ ಮಾಡುತ್ತಿದ್ದಾರೆ. ಯಾವುದೇ ತನಿಖೆ ಎದುರಿಸಲು ಸಿದ್ಧರಿದ್ದಾರೆ, ಯಾರೂ ಗಾಬರಿಯಾಗಬೇಕಿಲ್ಲ ಎಂದರು.

ಇದನ್ನೂ ಓದಿ: 

Vishwa News 24

Recent Posts

ಬೆಂಗಳೂರು: ರೀಲ್ಸ್ ವಿಚಾರಕ್ಕೆ ಗಲಾಟೆ; ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ – vishwanews24

ಬೆಂಗಳೂರು: ರೀಲ್ಸ್ ವಿಚಾರಕ್ಕೆ ಗಲಾಟೆ; ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಬೆಂಗಳೂರು: ರೀಲ್ಸ್‌ ನೋಡುತ್ತಿದ್ದ ವಿಚಾರಕ್ಕೆ ಪತ್ನಿಯನ್ನು ಕೊಂದು ಪತಿ…

14 minutes ago

ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ಯುವತಿಯರು 8 ತಿಂಗಳ ಬಳಿಕ ಪತ್ತೆ – vishwanews24

ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ಯುವತಿಯರು 8 ತಿಂಗಳ ಬಳಿಕ ಪತ್ತೆ ;  ಪ್ರಕರಣಕ್ಕೆ ಮಹತ್ವದ ತಿರುವು ಬೆಂಗಳೂರು: ಬೆಂಗಳೂರಿನ…

23 minutes ago

ಉಡುಪಿ: ಪಡಿತರ ಚೀಟಿದಾರರಿಗೆ ಇ-ಕೆವೈಸಿ ಕಡ್ಡಾಯ ; ಸೆಪ್ಟೆಂಬರ್ 30 ಕೊನೆಯ ದಿನ – vishwanews24

ಉಡುಪಿ: ಪಡಿತರ ಚೀಟಿದಾರರಿಗೆ ಇ-ಕೆವೈಸಿ ಕಡ್ಡಾಯ ; ಸೆಪ್ಟೆಂಬರ್ 30 ಕೊನೆಯ ದಿನ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ನ್ಯಾಯಬೆಲೆ…

1 hour ago

ಮೈಸೂರು ಕಂಬಳದ ಕುರಿತು ಇದುವರೆಗೆ ಯಾವುದೇ ಅಧಿಕೃತ ಸಂವಹನ ನಡೆದಿಲ್ಲ : ದೇವಿಪ್ರಸಾದ್ ಶೆಟ್ಟಿ ಬೆಳಪು – vishwanews24

ಮೈಸೂರು ಕಂಬಳಕ್ಕೆ ಅಧಿಕೃತ ಆಹ್ವಾನ ಬಂದ ಬಳಿಕವಷ್ಟೇ ಅಂತಿಮ ನಿರ್ಧಾರ: ದೇವಿಪ್ರಸಾದ್ ಶೆಟ್ಟಿ ಬೆಳಪು ಮೂಡುಬಿದಿರೆ: ಮೈಸೂರಿನಲ್ಲಿ ಕಂಬಳ ಆಯೋಜಿಸುವ…

1 hour ago

ಬೆಂಗಳೂರು: ಆಹಾರ ಮತ್ತು ದಿನಬಳಕೆ ವಸ್ತುಗಳ ಮಾರಾಟ ಅಂಗಡಿಗಳ ಮೇಲೆ ಆರೋಗ್ಯ ಅಧಿಕಾರಿಗಳ ದಾಳಿ – vishwanews24

ಬೆಂಗಳೂರು: ಆಹಾರ ಮತ್ತು ದಿನಬಳಕೆ ವಸ್ತುಗಳ ಮಾರಾಟ ಅಂಗಡಿಗಳ ಮೇಲೆ ಆರೋಗ್ಯ ಅಧಿಕಾರಿಗಳ ದಾಳಿ ಬೆಂಗಳೂರು: ನಗರದ ವಿವಿಧೆಡೆ ಆಹಾರ…

1 hour ago

ಮುಖ್ಯಮಂತ್ರಿಯಾಗಿ ಡಿಕೆಶಿ ಸರ್ಕಾರಕ್ಕೆ 100 ದಿನದ ಸಂಭ್ರಮ: ನಾಳೆ ವಿಧಾನಸೌಧದಲ್ಲಿ ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಂವಾದ – vishwanews24

ಸಿಎಂ ಡಿ.ಕೆ. ಶಿವಕುಮಾರ್‌ ಸರ್ಕಾರಕ್ಕೆ 100 ದಿನದ ಸಂಭ್ರಮ.. ನಾಳೆ ವಿಧಾನಸೌಧದಲ್ಲಿ ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಂವಾದ ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ…

1 hour ago