Featured

ಸತ್ಯಕ್ಕಾಗಿ ಹೋರಾಡುತ್ತಿರುವ ಮಗಳ ಕುರಿತು ಹೆಮ್ಮೆಯಿದೆ ; ಬಿಜೆಪಿ ಸೇರ್ಪಡೆಯಾದ ಕಂಗನಾ ಕುಟುಂಬ -Vishwanews24

ಸತ್ಯಕ್ಕಾಗಿ ಹೋರಾಡುತ್ತಿರುವ ಮಗಳ ಕುರಿತು ಹೆಮ್ಮೆಯಿದೆ ; ಬಿಜೆಪಿ ಸೇರ್ಪಡೆಯಾದ ಕಂಗನಾ ಕುಟುಂಬ -Vishwanews24

ಮುಂಬೈ: ಜನರು ಕಂಗನಾ ರಣಾವತ್ ಅವರನ್ನು ಬೆಂಬಲಿಸುತ್ತಿರುವುದನ್ನು ಕಂಡು ತುಂಬಾ ಸಂತೋಷವಾಯಿತು. ಸತ್ಯಕ್ಕಾಗಿ ಸರ್ಕಾರವನ್ನೇ ಎದರು ಹಾಕಿಕೊಂಡು ಅವಳು ಮಾಡುತ್ತಿರುವ ಹೋರಾಟವನ್ನು ಕಂಡು ಹೆಮ್ಮೆಯಾಗುತ್ತಿದೆ ಎಂದು ಬಾಲಿವುಡ್ ನಟಿ ಕಂಗನಾ ರಣಾವತ್ ತಾಯಿ ಆಶಾ ರಣಾವತ್ ಹಾಗೂ ತಂದೆ ಅಮರ್‍ದೀಪ್ ರಣಾವತ್ ಭಾವುಕರಾದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇವಲ ಜನರು ಮಾತ್ರವಲ್ಲ ಕರ್ಣಿ ಸೇನೆ ಹಾಗೂ ಬಿಜೆಪಿ ಸೇರಿ ಹಲವು ರಾಜಕೀಯ ಪಕ್ಷಗಳು ಸಹ ಕಂಗನಾ ರಣಾವತ್ ಅವರಿಗೆ ಬೆಂಬಲ ನೀಡುತ್ತಿರುವುದನ್ನು ಕಂಡು ಸಂತೋಷವಾಗುತ್ತಿದೆ. ಸತ್ಯಕ್ಕಾಗಿ ಹೋರಾಡುತ್ತಿರುವ ಮಗಳ ಕುರಿತು ಹೆಮ್ಮೆಯಿದೆ ಎಂದು ತಿಳಿಸಿದರು.

ದಶಕಗಳಿಂದ ನಮ್ಮ ಕುಟುಂಬ ಕಾಂಗ್ರೆಸ್‍ಗೆ ಬೆಂಬಲ ನೀಡುತ್ತಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ನಮಗೆ ತುಂಬಾ ಸಹಾಯ ಮಾಡಿದ್ದಾರೆ. ಹೀಗಾಗಿ ಅವರಿಗೆ ಕೃತಜ್ಞರಾಗಿದ್ದೇವೆ. ಹೀಗಾಗಿ ನಾವು ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿದ್ದೇವೆ ಎಂದು ಆಶಾ ರಣಾವತ್ ಘೋಷಿಸಿದ್ದಾರೆ.

ವಿಡಿಯೋ ನೋಡಿದ ಕಂಗನಾ ರಣಾವತ್ ಅವರು ತುಂಬಾ ಭಾವಕರಾಗಿದ್ದು, ರೀಟ್ವೀಟ್ ಮಾಡಿ, ಅವರು ನನ್ನ ಕಚೇರಿ ಧ್ವಂಸಗೊಳಿಸಿದಾಗ ಅಮ್ಮನ ಎಚ್ಚರಿಕೆ ನೀಡುತ್ತಿದ್ದ ಸಂದರ್ಭ ನನ್ನ ಕಣ್ಣ ಮುಂದೆ ಬಂತು. ಅಂದಿನಿಂದ ಅವಳ ಕರೆಗಳನ್ನು ನಾನು ಸ್ವೀಕರಿಸಿರಲಿಲ್ಲ. ಇದು ನನಗೆ ಒಂದು ಕ್ಷಣ ಕಣ್ಣ ಮುಂದೆ ಬಂದು ಹೋಯಿತು. ಇಡೀ ವಿಷಯವನ್ನು ಅವರು ಕೊಂಡೊಯ್ದ ರೀತಿ ತುಂಬಾ ಆಶ್ಚರ್ಯವಾಯಿತು ಎಂದು ಟ್ವೀಟ್‍ನಲ್ಲಿ ಬರೆದುಕೊಂಡಿದ್ದಾರೆ.

ಕಂಗನಾ ರಣಾವತ್ ಅವರ ಕಚೇರಿಯನ್ನು ಧ್ವಂಸಗೊಳಿಸಿದ್ದಕ್ಕೆ ಬುಧವಾರವಷ್ಟೇ ಟ್ವೀಟ್ ಮಾಡಿದ್ದ ಆಶಾ ರಣಾವತ್, ಉದ್ಧವ್ ಠಾಕ್ರೆ ಇಂದು ನನ್ನ ಮಗಳು ಕಂಗನಾಳ ಕಚೇರಿಯನ್ನು ಮಾತ್ರ ನೀವು ಪುಡಿ ಮಾಡಿಲ್ಲ. ದಿವಂಗತ ಬಾಳಾ ಸಾಹೇಬ್ ಠಾಕ್ರೆಯವರ ಆತ್ಮವನ್ನು ಪುಡಿ ಮಾಡಿದ್ದೀರಿ ಎಂದು ಕಿಡಿ ಕಾರಿದ್ದರು.

 

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

19 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago