Featured

ಸದಾನಂದ ಗೌಡರು ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಸ್ವಾಗತ  : ಡಿಕೆ ಶಿ – Vishwanews24

ಸದಾನಂದ ಗೌಡರು ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಸ್ವಾಗತ  : ಡಿಕೆ ಶಿ

ಬೆಂಗಳೂರು: ಮಾಜಿ ಸಿಎಂ ಡಿವಿ ಸದಾನಂದ ಗೌಡ ಅವರಿಗೆ ಒಂದೆಡೆ ಬಿಜೆಪಿಯಿಂದ ಲೋಕಸಭೆ ಚುನಾವಣೆಗೆ ಟಿಕೆಟ್ ದೊರೆಯುತ್ತದೆಯೇ ಎಂಬ ಅನುಮಾನ ಸೃಷ್ಟಿಯಾಗಿದೆ. ಈ ಮಧ್ಯೆ, ಅವರು ಕಾಂಗ್ರೆಸ್  ಸೇರುವ ಸಾಧ್ಯತೆಗಳೂ ಇವೆ ಎಂಬ ವದಂತಿಯೂ ಇದೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಸದಾನಂದ ಗೌಡ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್  ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಸೇರುವ ವಿಚಾರವಾಗಿ ಬಹಳಷ್ಟು ಜನ ನಮ್ಮನ್ನು ಬೇಟಿಯಾಗಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಅನೇಕ ಜನ ಪಕ್ಷ ಸೇರ್ಪಡೆ ವಿಚಾರವಾಗಿ ನಮ್ಮನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ನಿನ್ನೆ ಜಯಪ್ರಕಾಶ್ ಹೆಗ್ಡೆ, ಎಂಪಿಕೆ ನಮ್ಮ ಪಕ್ಷ ಸೇರಿದ್ದಾರೆ. ಇನ್ನೂ ಬಹಳ ಜನ ಪಕ್ಷಕ್ಕೆ ಬರುವವರಿದ್ದಾರೆ. ಅದರಲ್ಲಿ ಹಾಲಿ ಬಿಜೆಪಿ ಎಂಪಿಗಳು ಕೂಡ ಇದ್ದಾರೆ. ಈಗ ಅವರ ಹೆಸರು ಬಹಿರಂಗ ಪಡಿಸುವುದಿಲ್ಲ ಎಂದು ಹೇಳಿದ್ದಾರೆ.

ಸದಾನಂದ ಗೌಡರನ್ನು ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನಿಸಿದ್ದೀರಾ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್, ಅವರು ಪಕ್ಷಕ್ಕೆ ಬಂದರೆ ಸ್ವಾಗತ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆ ವೇಳೆ ಬಿಜೆಪಿ ಟಿಕೆಟ್ ಸಿಗದಿದ್ದರೆ ಸದಾನಂದ ಗೌಡ ಕಾಂಗ್ರೆಸ್​ ಪಕ್ಷ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಕಳೆದ ವರ್ಷದ ವಿಧಾನಸಭೆ ಚುನಾವಣೆ ಸಂದರ್ಭದಲ್ಲೇ ಊಹೋಪೋಹಗಳು ಹರಿದಾಡಿದ್ದವು. ವಿಧಾನಸಭೆ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕ್ಷೇತ್ರಕ್ಕೆ ಅಭ್ಯರ್ಥಿ ಹಾಕುವಲ್ಲಿ ಡಿಕೆ ಶಿವಕುಮಾರ್ ಮೇಲೆ ಸದಾನಂದ ಗೌಡ ಪ್ರಭಾವ ಬೀರಿದ್ದರು ಎಂಬ ಆರೋಪವೂ ಇತ್ತು. ಇದೇ ಕಾರಣಕ್ಕೆ ಅಲ್ಲಿ ಬಿಜೆಪಿಯಿಂದ ದುರ್ಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗಿದೆ ಎಂಬ ಟೀಕೆಗಳು ಕೇಳಿಬಂದಿದ್ದವು.

 

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

20 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

21 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

22 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

22 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

23 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

23 hours ago