Featured

ಸದ್ಯಕ್ಕೆ ನೈಟ್ ಕರ್ಫ್ಯೂ ಹಾಗೂ ಕಠಿಣ ನಿರ್ಬಂಧಗಳು ಜಾರಿಗೊಳಿಸುವುದಿಲ್ಲ ; ಒಂದು ವಾರದ ಬೆಳವಣಿಗೆ ಗಮನಿಸಿ ಬಳಿಕ ನಿರ್ಧಾರ : ಸಿಎಂ ಬೊಮ್ಮಾಯಿ – Vishwanews24

ಸದ್ಯಕ್ಕೆ ನೈಟ್ ಕರ್ಫ್ಯೂ ಹಾಗೂ ಕಠಿಣ ನಿರ್ಬಂಧಗಳು ಜಾರಿಗೊಳಿಸುವುದಿಲ್ಲ ; ಒಂದು ವಾರದ ಬೆಳವಣಿಗೆ ಗಮನಿಸಿ ಬಳಿಕ ನಿರ್ಧಾರ : ಸಿಎಂ ಬೊಮ್ಮಾಯಿ

ಒಂದು ವಾರದ ನಂತರ ಕ್ರಿಸ್ಮಸ್, ಹೊಸ ವರ್ಷಕ್ಕೆ ನಿಯಮಾವಳಿ ರೂಪಿಸುವ ಬಗ್ಗೆ ನಿರ್ಧಾರ..

ಬೆಂಗಳೂರು: ಸದ್ಯಕ್ಕೆ ನೈಟ್ ಕರ್ಫ್ಯೂ ಹಾಗೂ ಕಠಿಣ ನಿರ್ಬಂಧಗಳು ಜಾರಿಗೊಳಿಸುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು,ಸದ್ಯಕ್ಕೆ ನೈಟ್ ಕರ್ಫ್ಯೂ ಕೂಡ ಇಲ್ಲ ಬದಲಾಗಿ ಒಂದು ವಾರದ ಬೆಳವಣಿಗೆ ಗಮನಿಸಿ ಬಳಿಕ ನಿರ್ಧಾರ ಮಾಡ್ತೇವೆ ಎಂದರು. ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮುಖ್ಯಸ್ಥ ಡಾ. ಸುದರ್ಶನ್ ಅವರ ಜೊತೆ ಚರ್ಚೆ ಮಾಡಿದ್ದೇವೆ. ಓಮಿಕ್ರಾನ್ ಬಗ್ಗೆ ಈಗಿರೋ ಪರಿಸ್ಥಿತಿ ನೋಡಿದಾಗ ಗಾಬರಿ ಅವಶ್ಯಕತೆಯಿಲ್ಲ. ಆದರೂ‌ ಮುನ್ನೆಚ್ಷರಿಕೆ ಕ್ರಮ ಕೈಗೊಳ್ಳಬೇಕು ಎಂದರು.

ವಸತಿ ನಿಲಯಗಳಲ್ಲಿ ಸೋಂಕು ಪತ್ತೆ ವಿಚಾರವಾಗಿ ಮಾತನಾಡಿ, ಹಾಸ್ಟೆಲ್ ಗಳಿಗೆ ವಿಶೇಷ ಮಾರ್ಗಸೂಚಿ ಕೈಗೊಳ್ಳಲಾಗಿದೆ. ಒಂದೇ ಬಾರಿ ಎಲ್ಲರೂ ಊಟಕ್ಕೆ ಕೂರದಂತೆ ಸೂಚನೆ ನೀಡಲಾಗಿದೆ ಹಾಗೂ ವಾರ್ಡನ್, ಅಡುಗೆಯವರಿಗೆ ೨ ಡೋಸ್ ಲಸಿಕೆ ಆಗಬೇಕು. ಐಸೋಲೇಶನ್ ರೂಂ ಮಾಡಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

೩ ಜನರಿಗೆ ಬಂದ್ರೂ ಕ್ಲಸ್ಟರ್ ಅಂತ ನಿರ್ಧಾರ ಮಾಡಿದ್ದೇವೆ. ಕ್ಲಸ್ಟರ್ ಮ್ಯಾನೇಜ್‌ಮೆಂಟ್‌ಗೆ ಸೂಚನೆ ಕೊಟ್ಟಿದ್ದೇವೆ. ವ್ಯಾಕ್ಸಿನ್ ಡ್ರೈವ್ ಮಾಡಲು ಸಚಿವರ ಸಲಹೆ. ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳಲು ನಿರ್ಧಾರ ಮಾಡಲಾಗಿದೆ ಎಂದರು. ಇನ್ನು ಗಡಿ ಭಾಗದಲ್ಲಿರುವ ಕಟ್ಟೆಚ್ಚರ ಮುಂದುವರೆಯಲಿದೆ. ಕೇರಳ ವಿದ್ಯಾರ್ಥಿಗಳಿಗೆ ನಿರ್ಬಂಧ ಮುಂದುವರಿಯಲಿದೆ. ಆರ್ ಟಿಪಿಸಿಆರ್ ಟೆಸ್ಟ್ ಸೇರಿ ಇತರ ನಿರ್ಬಂಧಗಳು ಮುಂದುವರಿಯುತ್ತದೆ ಎಂದ ಅವರು ಒಂದು ವಾರದ ನಂತರ ಕ್ರಿಸ್ಮಸ್, ಹೊಸ ವರ್ಷಕ್ಕೆ ನಿಯಮಾವಳಿ ರೂಪಿಸುವ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago