ಬೆಂಗಳೂರು: ಸದ್ಯಕ್ಕೆ ನೈಟ್ ಕರ್ಫ್ಯೂ ಹಾಗೂ ಕಠಿಣ ನಿರ್ಬಂಧಗಳು ಜಾರಿಗೊಳಿಸುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು,ಸದ್ಯಕ್ಕೆ ನೈಟ್ ಕರ್ಫ್ಯೂ ಕೂಡ ಇಲ್ಲ ಬದಲಾಗಿ ಒಂದು ವಾರದ ಬೆಳವಣಿಗೆ ಗಮನಿಸಿ ಬಳಿಕ ನಿರ್ಧಾರ ಮಾಡ್ತೇವೆ ಎಂದರು. ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮುಖ್ಯಸ್ಥ ಡಾ. ಸುದರ್ಶನ್ ಅವರ ಜೊತೆ ಚರ್ಚೆ ಮಾಡಿದ್ದೇವೆ. ಓಮಿಕ್ರಾನ್ ಬಗ್ಗೆ ಈಗಿರೋ ಪರಿಸ್ಥಿತಿ ನೋಡಿದಾಗ ಗಾಬರಿ ಅವಶ್ಯಕತೆಯಿಲ್ಲ. ಆದರೂ ಮುನ್ನೆಚ್ಷರಿಕೆ ಕ್ರಮ ಕೈಗೊಳ್ಳಬೇಕು ಎಂದರು.
ವಸತಿ ನಿಲಯಗಳಲ್ಲಿ ಸೋಂಕು ಪತ್ತೆ ವಿಚಾರವಾಗಿ ಮಾತನಾಡಿ, ಹಾಸ್ಟೆಲ್ ಗಳಿಗೆ ವಿಶೇಷ ಮಾರ್ಗಸೂಚಿ ಕೈಗೊಳ್ಳಲಾಗಿದೆ. ಒಂದೇ ಬಾರಿ ಎಲ್ಲರೂ ಊಟಕ್ಕೆ ಕೂರದಂತೆ ಸೂಚನೆ ನೀಡಲಾಗಿದೆ ಹಾಗೂ ವಾರ್ಡನ್, ಅಡುಗೆಯವರಿಗೆ ೨ ಡೋಸ್ ಲಸಿಕೆ ಆಗಬೇಕು. ಐಸೋಲೇಶನ್ ರೂಂ ಮಾಡಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
೩ ಜನರಿಗೆ ಬಂದ್ರೂ ಕ್ಲಸ್ಟರ್ ಅಂತ ನಿರ್ಧಾರ ಮಾಡಿದ್ದೇವೆ. ಕ್ಲಸ್ಟರ್ ಮ್ಯಾನೇಜ್‌ಮೆಂಟ್‌ಗೆ ಸೂಚನೆ ಕೊಟ್ಟಿದ್ದೇವೆ. ವ್ಯಾಕ್ಸಿನ್ ಡ್ರೈವ್ ಮಾಡಲು ಸಚಿವರ ಸಲಹೆ. ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳಲು ನಿರ್ಧಾರ ಮಾಡಲಾಗಿದೆ ಎಂದರು. ಇನ್ನು ಗಡಿ ಭಾಗದಲ್ಲಿರುವ ಕಟ್ಟೆಚ್ಚರ ಮುಂದುವರೆಯಲಿದೆ. ಕೇರಳ ವಿದ್ಯಾರ್ಥಿಗಳಿಗೆ ನಿರ್ಬಂಧ ಮುಂದುವರಿಯಲಿದೆ. ಆರ್ ಟಿಪಿಸಿಆರ್ ಟೆಸ್ಟ್ ಸೇರಿ ಇತರ ನಿರ್ಬಂಧಗಳು ಮುಂದುವರಿಯುತ್ತದೆ ಎಂದ ಅವರು ಒಂದು ವಾರದ ನಂತರ ಕ್ರಿಸ್ಮಸ್, ಹೊಸ ವರ್ಷಕ್ಕೆ ನಿಯಮಾವಳಿ ರೂಪಿಸುವ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…