ಧಾರವಾಡ: ಸನಾತನ ಧರ್ಮ ಶಾಂತಿಯ ಸಂದೇಶ ಸಾರುತ್ತದೆ ಹೊರತು, ಅದು ಡೆಂಗ್ಯೂ, ಮಲೇರಿಯಾದಂತೆ ರೋಗ ಹರಡುವ ಸೊಳ್ಳೆಯಲ್ಲ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.
ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುತಾಲಿಕ್, ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ ಎಂಬ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಹೇಳಿಕೆಗೆ ತಿರುಗೇಟು ಕೊಟ್ಟಿದ್ದಾರೆ.
ಉದಯನಿಧಿ ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಸನಾತನ ಧರ್ಮವನ್ನ ಡೆಂಗ್ಯೂ, ಮಲೇರಿಯಾದಂತೆ ನಾಶ ಮಾಡಬೇಕು ಎಂದು ಹೇಳುವುದು ಜಾತಿಗಳ ಮಧ್ಯೆ ವೈಷಮ್ಯ ಮೂಡಿಸುತ್ತದೆ. ಇದನ್ನು ನಾವು ಖಂಡಿಸುತ್ತೇವೆ. ಉದಯನಿಧಿ ಇನ್ನೂ ಬಚ್ಚ, ಇನ್ನೂ ಕಣ್ಣೇ ಬಿಟ್ಟಿಲ್ಲ, ಆದ್ರೆ ಅತ್ಯಂತ ಕೀಳುಮಟ್ಟದ ಹೇಳಿಕೆ ನೀಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸನಾತನ ಧರ್ಮ ಶಾಂತಿಯ ಸಂದೇಶ ಸಾರುತ್ತದೆಯೇ ಹೊರತು, ಅದು ಡೆಂಗ್ಯೂ, ಮಲೇರಿಯಾದಂತೆ ರೋಗ ಹರಡುವ ಸೊಳ್ಳೆಯಲ್ಲ. ಸನಾತನ ಧರ್ಮ ಗಂಧದ ಮರ ಇದ್ದಂತೆ. ಅದನ್ನು ನಾಶ ಮಾಡಲು ಹೋದಷ್ಟೂ ಸುಗಂಧ ಹರಡುತ್ತದೆ ಎಂದು ಹೇಳಿದ್ದಾರೆ.
ಪೆರಿಯಾರ್‌ನಿಂದ ಹಿಡಿದು ಇಲ್ಲಿಯವರೆಗೂ ನಾಸ್ತಿಕವಾದ ಮಾಡುತ್ತಾ ಬಂದಿದ್ದಾರೆ. ಇವರ ಈ ಹೇಳಿಕೆಯಿಂದ ದೊಡ್ಡ ಅನಾಹುತ ಆಗುತ್ತದೆ. ನಿಮ್ಮ ರಾಜಕೀಯ ವ್ಯವಸ್ಥೆ ನಾಶವಾಗುತ್ತದೆ. ಅವರು ತಮ್ಮ ಹೇಳಿಕೆಯನ್ನ ವಾಪಸ್ ಪಡೆಯಬೇಕು. ಈ ಸಂಬಂಧ ಅವರ ವಿರುದ್ಧ ಧಾರವಾಡ, ಬೆಂಗಳೂರು ಹಾಗೂ ಕಲಬುರ್ಗಿ ಕೋರ್ಟ್‌ಗಳಲ್ಲಿ ಕೇಸ್ ದಾಖಲಿಸಲಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಉದಯನಿಧಿ ಸ್ಟಾಲಿನ್ ಹೇಳಿದ್ದೇನು?
ಲೇಖಕರ ಸಮಾವೇಶವೊಂದರಲ್ಲಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್, ಸನಾತನನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು. ಈ ಪರಿಕಲ್ಪನೆಯು ಅಂತರ್ಗತವಾಗಿ ಹಿಂದುಳಿದಿದೆ. ಇದು ಜಾತಿ ಮತ್ತು ಆಧಾರದ ಮೇಲೆ ಜನರನ್ನು ವಿಭಜಿಸುತ್ತದೆ. ಮೂಲಭೂತವಾಗಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತದೆ ಎಂದು ಹೇಳಿದ್ದರು.
ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…
ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್‌ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…
ಉಡುಪಿ: ಏ.1ರಂದು ಪಿಂಕ್ ಸೂಪರ್ ಮೂನ್ ವೀಕ್ಷಣೆಗೆ ಅವಕಾಶ ಉಡುಪಿ: ಆಕಾಶಕಾಯದಲ್ಲಿ ದಿನವೂ ಬೆಳ್ಳಗೆ ಗೋಚರಿಸುವ ಚಂದ್ರ ಏ.1ರಂದು ಸಂಜೆ…
ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ…
ಮಂಗಳೂರು : 2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಮಂಗಳೂರು : ಕರ್ನಾಟಕ…
ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ 12ನೇ ಮಹಡಿಯಿಂದ…