Featured

ಸನಾತನ ಧರ್ಮ ಶಾಂತಿಯ ಸಂದೇಶ ಸಾರುತ್ತದೆ ಹೊರತು , ಡೆಂಗ್ಯೂ, ಮಲೇರಿಯಾದಂತೆ ರೋಗ ಹರಡುವ ಸೊಳ್ಳೆಯಲ್ಲ : ಉದಯನಿಧಿ ಹೇಳಿಕೆಗೆ ಪ್ರಮೋದ್‌ ಮುತಾಲಿಕ್‌ ತಿರುಗೇಟು  – Vishwanews24

ಸನಾತನ ಧರ್ಮ ಶಾಂತಿಯ ಸಂದೇಶ ಸಾರುತ್ತದೆ ಹೊರತು , ಡೆಂಗ್ಯೂ, ಮಲೇರಿಯಾದಂತೆ ರೋಗ ಹರಡುವ ಸೊಳ್ಳೆಯಲ್ಲ : ಉದಯನಿಧಿ ಹೇಳಿಕೆಗೆ ಪ್ರಮೋದ್‌ ಮುತಾಲಿಕ್‌ ತಿರುಗೇಟು

ಧಾರವಾಡ: ಸನಾತನ ಧರ್ಮ ಶಾಂತಿಯ ಸಂದೇಶ ಸಾರುತ್ತದೆ ಹೊರತು, ಅದು ಡೆಂಗ್ಯೂ, ಮಲೇರಿಯಾದಂತೆ ರೋಗ ಹರಡುವ ಸೊಳ್ಳೆಯಲ್ಲ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌  ತಿಳಿಸಿದ್ದಾರೆ.

ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುತಾಲಿಕ್‌, ಸನಾತನ ಧರ್ಮ  ಡೆಂಗ್ಯೂ, ಮಲೇರಿಯಾ ಇದ್ದಂತೆ ಎಂಬ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಹೇಳಿಕೆಗೆ ತಿರುಗೇಟು ಕೊಟ್ಟಿದ್ದಾರೆ.

ಉದಯನಿಧಿ ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಸನಾತನ ಧರ್ಮವನ್ನ ಡೆಂಗ್ಯೂ, ಮಲೇರಿಯಾದಂತೆ ನಾಶ ಮಾಡಬೇಕು ಎಂದು ಹೇಳುವುದು ಜಾತಿಗಳ ಮಧ್ಯೆ ವೈಷಮ್ಯ ಮೂಡಿಸುತ್ತದೆ. ಇದನ್ನು ನಾವು ಖಂಡಿಸುತ್ತೇವೆ. ಉದಯನಿಧಿ ಇನ್ನೂ ಬಚ್ಚ, ಇನ್ನೂ ಕಣ್ಣೇ ಬಿಟ್ಟಿಲ್ಲ, ಆದ್ರೆ ಅತ್ಯಂತ ಕೀಳುಮಟ್ಟದ ಹೇಳಿಕೆ ನೀಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸನಾತನ ಧರ್ಮ ಶಾಂತಿಯ ಸಂದೇಶ ಸಾರುತ್ತದೆಯೇ ಹೊರತು, ಅದು ಡೆಂಗ್ಯೂ, ಮಲೇರಿಯಾದಂತೆ ರೋಗ ಹರಡುವ ಸೊಳ್ಳೆಯಲ್ಲ. ಸನಾತನ ಧರ್ಮ ಗಂಧದ ಮರ ಇದ್ದಂತೆ. ಅದನ್ನು ನಾಶ ಮಾಡಲು ಹೋದಷ್ಟೂ ಸುಗಂಧ ಹರಡುತ್ತದೆ ಎಂದು ಹೇಳಿದ್ದಾರೆ.

ಪೆರಿಯಾರ್‌ನಿಂದ ಹಿಡಿದು ಇಲ್ಲಿಯವರೆಗೂ ನಾಸ್ತಿಕವಾದ ಮಾಡುತ್ತಾ ಬಂದಿದ್ದಾರೆ. ಇವರ ಈ ಹೇಳಿಕೆಯಿಂದ ದೊಡ್ಡ ಅನಾಹುತ ಆಗುತ್ತದೆ. ನಿಮ್ಮ ರಾಜಕೀಯ ವ್ಯವಸ್ಥೆ ನಾಶವಾಗುತ್ತದೆ. ಅವರು ತಮ್ಮ ಹೇಳಿಕೆಯನ್ನ ವಾಪಸ್ ಪಡೆಯಬೇಕು. ಈ ಸಂಬಂಧ ಅವರ ವಿರುದ್ಧ ಧಾರವಾಡ, ಬೆಂಗಳೂರು ಹಾಗೂ ಕಲಬುರ್ಗಿ ಕೋರ್ಟ್‌ಗಳಲ್ಲಿ ಕೇಸ್ ದಾಖಲಿಸಲಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಉದಯನಿಧಿ ಸ್ಟಾಲಿನ್ ಹೇಳಿದ್ದೇನು?
ಲೇಖಕರ ಸಮಾವೇಶವೊಂದರಲ್ಲಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್, ಸನಾತನನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು. ಈ ಪರಿಕಲ್ಪನೆಯು ಅಂತರ್ಗತವಾಗಿ ಹಿಂದುಳಿದಿದೆ. ಇದು ಜಾತಿ ಮತ್ತು ಆಧಾರದ ಮೇಲೆ ಜನರನ್ನು ವಿಭಜಿಸುತ್ತದೆ. ಮೂಲಭೂತವಾಗಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತದೆ ಎಂದು ಹೇಳಿದ್ದರು.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

2 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

3 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

3 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

6 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

6 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

7 hours ago