ಮೈಸೂರು : ನಮ್ಮ ಪ್ರಧಾನಿ ನರೇಂದ್ರ ಮೋದಿ ಒಳ್ಖೆಯ ಕೆಲಸ ಮಾಡಿದ್ದಾರೆ, ಅದನ್ನು ಮೆಚ್ಚಲೇಬೇಕು. ವಾಜಪೇಯಿ ಮಾಡದಂತಹ ಕೆಲಸವನ್ನು ಮೋದಿ ಮಾಡಿದ್ದಾರೆ. ಇದಕ್ಕೆ ನಾನು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದೇನೆ ಎಂದು ಪ್ರೊ.ಕೆ ಎಸ್ ಭಗವಾನ್ ಹೇಳಿದ್ದಾರೆ.
ಜಮ್ಮು ಕಾಶ್ಮೀರ ವಿಚಾರದಲ್ಲಿ ಕೇಂದ್ರ ಸರ್ಕಾರದ ನಿರ್ಧಾರದ ಕುರಿತು ಪ್ರತಿಕ್ರಿಯಿಸಿದ ಅವರು, ಒಳ್ಳೆ ಕೆಲಸ ಮಾಡಿದರೆ ಅದನ್ನು ಮೆಚ್ಚಬೇಕು. ನಮ್ಮ ಪ್ರಧಾನಿ ಮೋದಿ ಒಳ್ಳೆಯ ಕೆಲಸ ಮಾಡಿದ್ದಾರೆ. ವಾಜಪೇಯಿ ಮಾಡದಂತ ಕೆಲಸವನ್ನು ಮೋದಿ ಮಾಡಿದ್ದಾರೆ. ಇದಕ್ಕೆ ನಾನು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದೇನೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
‘ಆರ್ಟಿಕಲ್ 370ನ್ನು ರದ್ದತಿ ಮೂಲಕ, ರಾಷ್ಟ್ರವನ್ನು ಹಾಗೂ 72 ವರ್ಷಗಳಿಂದ ಸಂಕಟದಲ್ಲಿ ನರಳುತ್ತಿದ್ದ ಕಾಶ್ಮೀರದ ಜನತೆಯನ್ನು ನಮ್ಮ ನೆಚ್ಚಿನ ಪ್ರಧಾನಿ ಸಂತಸಪಡಿಸಿದ್ದಾರೆ. ಅಲ್ಲಿ, ಕೋಟಿಗಟ್ಟಲೆ ಖರ್ಚು ಮಾಡುತ್ತಿದ್ದ ಹಣವನ್ನು ಇನ್ನುಮುಂದೆ ಜನತೆಯ ಕಲ್ಯಾಣಕ್ಕಾಗಿ, ಅಭಿವೃದ್ಧಿಗಾಗಿ ಬಳಸಲು ಅನುಕೂಲ’ ಎಂದು ಹೇಳಿದ್ದಾರೆ.
ಇಡೀ ದೇಶವನ್ನು ಒಂದೇ ಸಂವಿಧಾನದ ಅಡಿ ತಂದಿರುವುದು ಬಹಳ ಶ್ಲಾಘನೀಯ ಕಾರ್ಯ. ಇದಕ್ಕಾಗಿ ಇಡೀ ರಾಷ್ಟ್ರ ತಹ ತಹಿಸುತ್ತಿತ್ತು. ಸನ್ಮಾನ್ಯ ಮೋದಿ ಇತಿಹಾಸದಲ್ಲಿ ಅಜರಾಮರವಾಗಿ ಉಳಿಯುತ್ತಾರೆ ಎನ್ನಲು ಸಂತೋಷ ಮತ್ತು ಹೆಮ್ಮೆ ಆಗುತ್ತದೆ. ಜೈ ನರೇಂದ್ರ ಮೋದಿ!’ ಎಂದು ಭಗವಾನ್ ಹೊಗಳಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಅವರು, ‘ಈ ಪತ್ರವನ್ನು ಕುಹಕದಿಂದಾಗಲೀ, ವ್ಯಂಗ್ಯದಿಂದಾಗಲೀ ಬರೆದಿಲ್ಲ. ಕಾಶ್ಮೀರ ವಿಷಯದಲ್ಲಿ ಕೇಂದ್ರ ಸರ್ಕಾರದ ನಿರ್ಧಾರ ಸರಿಯಾಗಿದೆ. ಹಾಗಾಗಿ, ಮುಕ್ತ ಮನಸ್ಸಿನಿಂದ ಶ್ಲಾಘಿಸಿದ್ದೇನೆ’ ಎಂದರು
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…