ಧಾರವಾಡ: ಕಾಳಿ ಸ್ವಾಮೀಜಿ ಕನ್ನಡ ವಿರೋಧಿಯಾಗಿ ಮಾತನಾಡಿಲ್ಲ. ನಾನು ಅವರ ಜೊತೆ ಮಾತನಾಡಿದ್ದೇನೆ, ಕಾಳಿ ಸ್ವಾಮೀಜಿ ಕೆಂಪೇಗೌಡರಿಗೆ ಹಾಗೂ ಕುವೆಂಪು ಅವರಿಗೆ ಬೈದಿದ್ದಾರೆ ಎನ್ನಲಾಗಿದೆ, ಆದರೆ ಅವರು ಯಾವ ಸಂದರ್ಭದಲ್ಲೂ ಬೈದಿಲ್ಲ, ಈ ಸಂಬಂಧ ಏನಾದರೂ ದಾಖಲೆಗಳಿದ್ದರೆ ಬಿಡುಗಡೆ ಮಾಡಬೇಕಿತ್ತು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಧಾರವಾಡದಲ್ಲಿ ಮಾತನಾಡಿದ ಅವರು, ಕಾಳಿ ಸ್ವಾಮೀಜಿಗೆ ಮಸಿ ಬಳೆದು ಅವರ ಮೇಲೆ ದಾಳಿ ಮಾಡಿದವರ ದಾಖಲೆಗಳಿದ್ದರೆ ಬಿಡುಗಡೆ ಮಾಡಬೇಕಿತ್ತು. ಅದನ್ನು ಬಿಟ್ಟು ಈ ರೀತಿ ಸನ್ಯಾಸಿಗಳ ಮೇಲೆ ಹಲ್ಲೆ ಮಾಡುವುದು ಅಕ್ಷಮ್ಯ ಅಪರಾಧ ಎಂದಿದ್ದಾರೆ.
ಕಾಳಿ ಸ್ವಾಮೀಜಿ ಏನಾದರೂ ತಪ್ಪು ಮಾಡಿದ್ದರೆ ಕೇಸ್ ಹಾಕಬೇಕಿತ್ತು. ಅದನ್ನು ಬಿಟ್ಟು ಈ ರೀತಿ ಖಾವಿಧಾರಿಗಳಿಗೆ ಮಸಿ ಬಳೆಯುವುದು ಸರಿಯಲ್ಲ. ಇದನ್ನು ಶ್ರೀರಾಮ ಸೇನೆ ಖಂಡಿಸುತ್ತದೆ. ಸ್ವಾಮೀಜಿ ಮೇಲೆ ದಾಳಿ ಮಾಡಿದವರು ಕೂಡಲೇ ಕ್ಷಮೆ ಕೇಳಬೇಕು. ಸರ್ಕಾರ ಅವರ ಮೇಲೆ ಕ್ರಮ ಕೈಗೊಳ್ಳಬೇಕು. ಇವತ್ತು ಕಾಳಿ ಸ್ವಾಮೀಜಿ ಮೇಲೆ ಈ ರೀತಿ ಹಲ್ಲೆ ನಡೆಯುತ್ತದೆ. ನಾಳೆ ಮತ್ತೊಬ್ಬರ ಮೇಲೆ ನಡೆಯುತ್ತದೆ. ಇದನ್ನು ಸರ್ಕಾರ ಹದ್ದು ಬಸ್ತಿನಲ್ಲಿಡಬೇಕು ಎಂದು ಕಿಡಿಕಾರಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…