Featured

ಸಫಾಯಿ ಕರ್ಮಚಾರಿಗಳಿಗೆ ಸೌಲಭ್ಯ ಒದಗಿಸಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ – Vishwanews24

ಸಫಾಯಿ ಕರ್ಮಚಾರಿಗಳಿಗೆ ಸೌಲಭ್ಯ ಒದಗಿಸಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ – Vishwanews24

ಉಡುಪಿ: ಸಫಾಯಿ ಕರ್ಮಚಾರಿಗಳ ಶ್ರೇಯೋಭಿವೃದ್ದಿಗೆ ಸರ್ಕಾರ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.

ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ ನಡೆದ, ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸರ್ಕಾರ ಮ್ಯಾನ್ಯವಲ್ ಸ್ಕಾö್ಯವೆಂಜರ್ ಪದ್ದತಿಯನ್ನು ಸಂಪೂರ್ಣವಾಗಿ ನಿಷೇಧಿಸಿ, ಕಾಯಿದೆ ಹಾಗೂ ನಿಯಮಗಳನ್ನು ಜಾರಿಗೆ ತರುವುದರೊಂದಿಗೆ , ಈ ವೃತ್ತಿಯಲ್ಲಿ ತೊಲಗಿಸಬೇಕು, ಒಂದೊಮ್ಮೆ ಕಾಯಿದೆಯನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ದ ಕಾನೂನಿಡಿ ಕ್ರಮ ಕೈಗೊಳ್ಳÀಲಾಗುವುದು ಎಂದರು.

ಮ್ಯಾನ್ಯುವಲ್ ಸ್ಕಾö್ಯವೆಂಜರ್ ವೃತ್ತಿಯಿಂದ ಹೊರ ಬಂದಿರುವವರಿಗೆ ಸೂಕ್ತ ಪುರ್ನವಸತಿ ಒದಗಿಸಬೇಕು , ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮ ಪಂಚಾಯತಿಯ ವ್ಯಾಪ್ತಿಯ ಸಫಾಯಿ ಕರ್ಮಚಾರಿ ಅವರಿಗೆ ನಿವೇಶನ ಮಂಜೂರಾತಿಯನ್ನು ಪ್ರಥಮಾದ್ಯತೆಯ ಮೇಲೆ ನೀಡಬೇಕು ಎಂದು ಸೂಚಿಸಿದರು.

ಮ್ಯಾನ್ಯುವಲ್ ಸ್ಕಾö್ಯವೆಂಜರ್‌ನಿ0ದ ಮೃತಪಟ್ಟ ಕಾರ್ಮಿಕರ ಕುಟುಂಬದ ಅವಲಂಬಿತ ಸದಸ್ಯರುಗಳಿಗೆ ಗುರುತಿನ ಚೀಟಿ ಹಾಗೂ ಪುರ್ನವಸತಿ ಕಲ್ಪಿಸುವ ಕಾರ್ಯವಾಗಬೇಕು ಎಂದರು.

ಸಕ್ಕಿಂಗ್ ಹಾಗೂ ಜಟ್ಟಿಂಗ್ ಯಂತ್ರ, ವೈಯಕ್ತಿಕವಾಗಿ , ಸಫಾಯಿ ಕರ್ಮಚಾರಿಗಳ ಸ್ವ ಸಹಾಯ ಗುಂಪುಗಳಿAದ , ಖಾಸಗಿ ಏಜೆನ್ಸಿ ಗುತ್ತಿಗೆದಾರರಿಂದ ಹೊಸ ಯಂತ್ರಗಳನ್ನು ಖರೀದಿ ಮಾಡಲು ಅತಿ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ನೀಡಲಾಗುವುದು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಪೌರಕಾರ್ಮಿಕರ ಆರೋಗ್ಯದ ಹಿತದೃಷ್ಠಿಯಿಂದÀ ಪ್ರತಿ 3 ತಿಂಗಳಿಗೊಮ್ಮೆ ಸಾಮಾನ್ಯ ಅರೋಗ್ಯ ತಪಾಸಣೆ ಹಾಗೂ ವಾರ್ಷಿಕವಾಗಿ ಎರಡು ಬಾರಿ ಸಂಪೂರ್ಣ ದೇಹ ಪರೀಕ್ಷೆಯನ್ನು ಸ್ಥಳೀಯ ಸಂಸ್ಥೆಗಳು ಕಡ್ಡಾಯವಾಗಿ ಮಾಡಿಸಿ, ವರದಿಯನ್ನು ಜಿಲ್ಲಾ ಜಾಗೃತಿ ಸಮಿತಿಗೆ ನೀಡಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಲೋರ‍್ಸ್ ಹಾಗೂ ಕ್ಲೀನರ್ ಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಅರ್ಹ ವ್ಯಕ್ತಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದರು.

ಸಭೆಯಲ್ಲಿ ಅಪರ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು , ಜಾಗೃತ ಸಮಿತಿ ಸದಸ್ಯರುಗಳಾದ ವೈ.ಲಕ್ಷö್ಮಣ್ , ಗಣೇಶ್, ಅನಿತಾ, ಹಾಗೂ ಎಲ್ಲಾ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

 

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

8 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

8 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

9 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

9 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

9 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

9 hours ago