Featured

ಸಭಾಪತಿ ಹೊರಟ್ಟಿ ವಿರುದ್ಧ FIR ದಾಖಲಿಸಿದ್ದ ಇನ್ಸ್‌ಪೆಕ್ಟರ್‌ ಅಮಾನತು – Vishwanews24

ಸಭಾಪತಿ ಹೊರಟ್ಟಿ ವಿರುದ್ಧ FIR ದಾಖಲಿಸಿದ್ದ ಇನ್ಸ್‌ಪೆಕ್ಟರ್‌ ಅಮಾನತು – Vishwanews24

ಧಾರವಾಡ: ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮೇಲೆ ಎಫ್‍ಐಆರ್ ದಾಖಲು ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಗ್ರಾಮೀಣ ಠಾಣೆಯ ಇನ್ಸ್‌ಪೆಕ್ಟರ್‌ ಶ್ರೀಧರ ಸತಾರೆಯನ್ನು ಅಮಾನತು ಮಾಡಲಾಗಿದೆ.

ಏನಿದು ಪ್ರಕರಣ:
ಸರ್ವೋದಯ ಶಿಕ್ಷಣ ಸಂಸ್ಥೆ ಹಾಗೂ ವಾಲ್ಮೀಕಿ ಮಹಾಸಭಾ ನಡುವೆ ಇರುವ ವಿವಾದಕ್ಕೆ ಸಂಬಂಧಿಸಿದಂತೆ ಮುಗದ ಗ್ರಾಮದಲ್ಲಿ ಗಲಾಟೆಯೊಂದು ನಡೆದಿತ್ತು. ಈ ಸಂಬಂಧ ಮೋಹನ್ ಗುಡಸಲಮನಿ ಎನ್ನುವವರು ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸರ್ವೋದಯ ಶಿಕ್ಷಣ ಸಂಸ್ಥೆಯ ಶಿಕ್ಷಕರ ಜೊತೆ ಹೊರಟ್ಟಿಯವರನ್ನು 5ನೇ ಆರೋಪಿಯನ್ನಾಗಿ ಮಾಡಿ ಜನವರಿ 25 ರಂದು ಸತಾರೆ ಪ್ರಕರಣ ದಾಖಲಿಸಿಕೊಂಡಿದ್ದರು.

ಹೊರಟ್ಟಿ ಗಲಾಟೆಗೆ ಕುಮ್ಮಕ್ಕು ನೀಡಿದ್ದಾರೆ ಎಂದು ಅವರ ಮೇಲೆ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು. ಆ ಬಳಿಕ ಕಳೆದ ಎರಡು ದಿನಗಳ ಹಿಂದೆ ಮೇಲ್ಮನೆಯಲ್ಲಿ ಈ ಬಗ್ಗೆ ಚರ್ಚೆ ಕೂಡಾ ನಡೆದಿತ್ತು. ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಸಭಾಪತಿ ವಿರುದ್ಧ ಕೇಸ್ ದಾಖಲಿಸಿದ ಬಗ್ಗೆ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಆ ಬಳಿಕ ಎಚ್ಚೆತ್ತುಕೊಂಡ ಪೊಲೀಸ್ ಇಲಾಖೆ ಇದೀಗ ಹೊರಟ್ಟಿ ವಿರುದ್ಧ ಪ್ರಕರಣ ದಾಖಲು ಮಾಡಿದ ಇನ್ಸ್‌ಪೆಕ್ಟರ್‌ ಶ್ರೀಧರ ಸತಾರೆಯನ್ನು ಅಮಾನತುಗೊಳಿಸಿ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.

ಸಭಾಪತಿ ವಿರುದ್ಧ ಕೇಸ್ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ಮನೆಯಲ್ಲಿ ಸರ್ಕಾರದ ವಿರುದ್ಧ ತೀವ್ರ ಟೀಕೆ ಕೇಳಿಬಂದಿತ್ತು. ಈ ವೇಳೆ ಎಸ್‍ಪಿ ಹಾಗೂ ಇನ್ಸ್‌ಪೆಕ್ಟರ್‌ ಮೇಲೆ ಕ್ರಮಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಆಗ್ರಹಿಸಿದ್ದರು. ಅಲ್ಲದೆ ಗೃಹ ಸಚಿವ ಆರಗ ಜ್ಞಾನೇಂದ್ರ ಎರಡು ಮೂರು ದಿನದಲ್ಲಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಈ ಹಿನ್ನೆಲೆ ಇಂದು ಗ್ರಾಮೀಣ ಠಾಣೆಯ ಇನ್ಸ್‌ಪೆಕ್ಟರ್‌ ಶ್ರೀಧರ ಸತಾರೆಯನ್ನು ಅಮಾನತು ಮಾಡಲಾಗಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago