ಧಾರವಾಡ: ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮೇಲೆ ಎಫ್‍ಐಆರ್ ದಾಖಲು ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಗ್ರಾಮೀಣ ಠಾಣೆಯ ಇನ್ಸ್‌ಪೆಕ್ಟರ್ ಶ್ರೀಧರ ಸತಾರೆಯನ್ನು ಅಮಾನತು ಮಾಡಲಾಗಿದೆ.
ಏನಿದು ಪ್ರಕರಣ:
ಸರ್ವೋದಯ ಶಿಕ್ಷಣ ಸಂಸ್ಥೆ ಹಾಗೂ ವಾಲ್ಮೀಕಿ ಮಹಾಸಭಾ ನಡುವೆ ಇರುವ ವಿವಾದಕ್ಕೆ ಸಂಬಂಧಿಸಿದಂತೆ ಮುಗದ ಗ್ರಾಮದಲ್ಲಿ ಗಲಾಟೆಯೊಂದು ನಡೆದಿತ್ತು. ಈ ಸಂಬಂಧ ಮೋಹನ್ ಗುಡಸಲಮನಿ ಎನ್ನುವವರು ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸರ್ವೋದಯ ಶಿಕ್ಷಣ ಸಂಸ್ಥೆಯ ಶಿಕ್ಷಕರ ಜೊತೆ ಹೊರಟ್ಟಿಯವರನ್ನು 5ನೇ ಆರೋಪಿಯನ್ನಾಗಿ ಮಾಡಿ ಜನವರಿ 25 ರಂದು ಸತಾರೆ ಪ್ರಕರಣ ದಾಖಲಿಸಿಕೊಂಡಿದ್ದರು.
ಹೊರಟ್ಟಿ ಗಲಾಟೆಗೆ ಕುಮ್ಮಕ್ಕು ನೀಡಿದ್ದಾರೆ ಎಂದು ಅವರ ಮೇಲೆ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು. ಆ ಬಳಿಕ ಕಳೆದ ಎರಡು ದಿನಗಳ ಹಿಂದೆ ಮೇಲ್ಮನೆಯಲ್ಲಿ ಈ ಬಗ್ಗೆ ಚರ್ಚೆ ಕೂಡಾ ನಡೆದಿತ್ತು. ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಸಭಾಪತಿ ವಿರುದ್ಧ ಕೇಸ್ ದಾಖಲಿಸಿದ ಬಗ್ಗೆ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಆ ಬಳಿಕ ಎಚ್ಚೆತ್ತುಕೊಂಡ ಪೊಲೀಸ್ ಇಲಾಖೆ ಇದೀಗ ಹೊರಟ್ಟಿ ವಿರುದ್ಧ ಪ್ರಕರಣ ದಾಖಲು ಮಾಡಿದ ಇನ್ಸ್‌ಪೆಕ್ಟರ್ ಶ್ರೀಧರ ಸತಾರೆಯನ್ನು ಅಮಾನತುಗೊಳಿಸಿ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.
ಸಭಾಪತಿ ವಿರುದ್ಧ ಕೇಸ್ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ಮನೆಯಲ್ಲಿ ಸರ್ಕಾರದ ವಿರುದ್ಧ ತೀವ್ರ ಟೀಕೆ ಕೇಳಿಬಂದಿತ್ತು. ಈ ವೇಳೆ ಎಸ್‍ಪಿ ಹಾಗೂ ಇನ್ಸ್‌ಪೆಕ್ಟರ್ ಮೇಲೆ ಕ್ರಮಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಆಗ್ರಹಿಸಿದ್ದರು. ಅಲ್ಲದೆ ಗೃಹ ಸಚಿವ ಆರಗ ಜ್ಞಾನೇಂದ್ರ ಎರಡು ಮೂರು ದಿನದಲ್ಲಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಈ ಹಿನ್ನೆಲೆ ಇಂದು ಗ್ರಾಮೀಣ ಠಾಣೆಯ ಇನ್ಸ್‌ಪೆಕ್ಟರ್ ಶ್ರೀಧರ ಸತಾರೆಯನ್ನು ಅಮಾನತು ಮಾಡಲಾಗಿದೆ.
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…
ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…