Featured

ಸಮರ್ಥ ಆಡಳಿತ ನೀಡಿರುವ ಕಾಂಗ್ರೆಸ್‌ನ ಎಲ್ಲಾ ಜನಪರ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ಮಂದಿಗೂ ತಲುಪಿಸಬೇಕು : ಡಿ.ಕೆ. ಶಿ – Vishwanews24

ತುಮಕೂರಿನಲ್ಲಿ ಜಯ ಗಳಿಸಿದರೆ ರಾಜ್ಯದಲ್ಲೇ ಕಾಂಗ್ರೆಸ್ ಗೆಲುವು ಸಾಧಿಸುತ್ತದೆ..

ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಶ್ರಮಿಸಬೇಕು..

ಸಿದ್ದರಾಮಯ್ಯ ನೀಡಿರುವ ಜನಪರ ಆಡಳಿತವನ್ನು ಈಗಿನ ಡಬಲ್ ಎಂಜಿನ್ ಸರ್ಕಾರ ನೀಡುತ್ತಿಲ್ಲ..

ತುಮಕೂರು: ತುಮಕೂರಿನಲ್ಲಿ ಜಯ ಗಳಿಸಿದರೆ ರಾಜ್ಯದಲ್ಲೇ ಕಾಂಗ್ರೆಸ್ ಗೆಲುವು ಸಾಧಿಸುತ್ತದೆ. ಇಲ್ಲಿ ಕಾಂಗ್ರೆಸ್‌ನ ಗೆಲುವು ಎರಡಂಕಿ ದಾಟಿದರೆ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಹೇಳಿದ್ದಾರೆ.

ನಗರದ ಹೊರವಲಯದ ಡಾ. ಎಚ್​.ಎಂ. ಗಂಗಾಧರಯ್ಯ ಮೆಮೋರಿಯಲ್​ ಹಾಲ್​ನಲ್ಲಿ ಭಾನುವಾರ ಜಿಲ್ಲಾ ಕಾಂಗ್ರೆಸ್​ ಸಮಿತಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ನವ ಸಂಕಲ್ಪ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿಷ ಕಡೆದು ಅಮೃತವನ್ನು ಸಮುದ್ರ ಮಂಥನದಲ್ಲಿ ತೆಗೆದಂತೆ ಕೆಲಸ ಆಗಬೇಕು. ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಶ್ರಮಿಸಬೇಕು. ಮುಖಂಡರು, ಕಾರ್ಯಕರ್ತರ ಪ್ರಯತ್ನದಿಂದ ಇಲ್ಲಿ ಗೆಲುವು ಸಾಧ್ಯ ಎಂದರು.

ಸ್ವಪ್ರತಿಷ್ಠೆ ಬಿಟ್ಟು ಪಕ್ಷ ಕಟ್ಟುವಲ್ಲಿ ಪ್ರತಿಯೊಬ್ಬರೂ ತೊಡಗಿಸಿಕೊಳ್ಳಬೇಕು. ಮನೆಗೆ ಬಂದ ಲಕ್ಷ್ಮಿಯನ್ನು ಒಳ ಕರೆದುಕೊಳ್ಳಿ. ಸೇವೆ, ತ್ಯಾಗದಿಂದ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂಬುದನ್ನು ಸದಾ ನೆನಪಿನಲ್ಲಿಟ್ಟುಕೊಳ್ಳಬೇಕು. ಬಿಜೆಪಿ, ಜೆಡಿಎಸ್‌ನ ದುರಾಡಳಿತವನ್ನು ಜನ ನೋಡಿದ್ದಾರೆ. ಸಿದ್ದರಾಮಯ್ಯ ನೀಡಿರುವ ಜನಪರ ಆಡಳಿತವನ್ನು ಈಗಿನ ಡಬಲ್ ಎಂಜಿನ್ ಸರ್ಕಾರ ನೀಡುತ್ತಿಲ್ಲ ಎಂಬುದನ್ನು ಜನರಿಗೆ ಅರ್ಥ ಮಾಡಿಸಬೇಕು. ಸಮರ್ಥ ಆಡಳಿತ ನೀಡಿರುವ ಕಾಂಗ್ರೆಸ್‌ನ ಎಲ್ಲಾ ಜನಪರ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ಮಂದಿಗೂ ತಲುಪಿಸಬೇಕು ಎಂದವರು ತಿಳಿಸಿದರು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

1 day ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

1 day ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

1 day ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

1 day ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

1 day ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago