ತುಮಕೂರು: ತುಮಕೂರಿನಲ್ಲಿ ಜಯ ಗಳಿಸಿದರೆ ರಾಜ್ಯದಲ್ಲೇ ಕಾಂಗ್ರೆಸ್ ಗೆಲುವು ಸಾಧಿಸುತ್ತದೆ. ಇಲ್ಲಿ ಕಾಂಗ್ರೆಸ್‌ನ ಗೆಲುವು ಎರಡಂಕಿ ದಾಟಿದರೆ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ನಗರದ ಹೊರವಲಯದ ಡಾ. ಎಚ್.ಎಂ. ಗಂಗಾಧರಯ್ಯ ಮೆಮೋರಿಯಲ್ ಹಾಲ್ನಲ್ಲಿ ಭಾನುವಾರ ಜಿಲ್ಲಾ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ನವ ಸಂಕಲ್ಪ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿಷ ಕಡೆದು ಅಮೃತವನ್ನು ಸಮುದ್ರ ಮಂಥನದಲ್ಲಿ ತೆಗೆದಂತೆ ಕೆಲಸ ಆಗಬೇಕು. ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಶ್ರಮಿಸಬೇಕು. ಮುಖಂಡರು, ಕಾರ್ಯಕರ್ತರ ಪ್ರಯತ್ನದಿಂದ ಇಲ್ಲಿ ಗೆಲುವು ಸಾಧ್ಯ ಎಂದರು.
ಸ್ವಪ್ರತಿಷ್ಠೆ ಬಿಟ್ಟು ಪಕ್ಷ ಕಟ್ಟುವಲ್ಲಿ ಪ್ರತಿಯೊಬ್ಬರೂ ತೊಡಗಿಸಿಕೊಳ್ಳಬೇಕು. ಮನೆಗೆ ಬಂದ ಲಕ್ಷ್ಮಿಯನ್ನು ಒಳ ಕರೆದುಕೊಳ್ಳಿ. ಸೇವೆ, ತ್ಯಾಗದಿಂದ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂಬುದನ್ನು ಸದಾ ನೆನಪಿನಲ್ಲಿಟ್ಟುಕೊಳ್ಳಬೇಕು. ಬಿಜೆಪಿ, ಜೆಡಿಎಸ್‌ನ ದುರಾಡಳಿತವನ್ನು ಜನ ನೋಡಿದ್ದಾರೆ. ಸಿದ್ದರಾಮಯ್ಯ ನೀಡಿರುವ ಜನಪರ ಆಡಳಿತವನ್ನು ಈಗಿನ ಡಬಲ್ ಎಂಜಿನ್ ಸರ್ಕಾರ ನೀಡುತ್ತಿಲ್ಲ ಎಂಬುದನ್ನು ಜನರಿಗೆ ಅರ್ಥ ಮಾಡಿಸಬೇಕು. ಸಮರ್ಥ ಆಡಳಿತ ನೀಡಿರುವ ಕಾಂಗ್ರೆಸ್‌ನ ಎಲ್ಲಾ ಜನಪರ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ಮಂದಿಗೂ ತಲುಪಿಸಬೇಕು ಎಂದವರು ತಿಳಿಸಿದರು.
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…
ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…
ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯಲ್ಲಿ ಸಿವಿಲ್ ಪೋಲಿಸ್ ಕಾನ್ಸ್ಟೇಬಲ್ 3395…
ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್ ಉಡುಪಿ : ಕಳೆದ…
ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ 'ಲೈಟ್' ದರದಲ್ಲಿ ಸಿಗಲಿದೆ ಭರ್ಜರಿ ಲಾಭ ನವದೆಹಲಿ: ಭಾರತದ ಪ್ರಮುಖ ವಿಮಾನಯಾನ…