Featured

ಸಮಾಜ ವಿರೋಧಿ ಶಕ್ತಿಗಳೊಂದಿಗೆ ಗುರುತಿಸಿಕೊಂಡು ಅಪರಾಧ ಕೃತ್ಯಗಳಲ್ಲಿ ಭಾಗವಹಿಸುವ ಯಾವುದೇ ಪೊಲೀಸ್ ಸಿಬ್ಬಂದಿ ವಿರುದ್ದ ನಿರ್ದಾಕ್ಷಿಣ ಕ್ರಮ : ಆರಗ ಜ್ಞಾನೇಂದ್ರ ಎಚ್ಚರಿಕೆ – Vishwanews24

ಸಮಾಜ ವಿರೋಧಿ ಶಕ್ತಿಗಳೊಂದಿಗೆ ಗುರುತಿಸಿಕೊಂಡು ಅಪರಾಧ ಕೃತ್ಯಗಳಲ್ಲಿ ಭಾಗವಹಿಸುವ ಯಾವುದೇ ಪೊಲೀಸ್ ಸಿಬ್ಬಂದಿ ವಿರುದ್ದ ನಿರ್ದಾಕ್ಷಿಣ ಕ್ರಮ : ಆರಗ ಜ್ಞಾನೇಂದ್ರ ಎಚ್ಚರಿಕೆ – Vishwanews24

ಬೆಂಗಳೂರು: ಸಮಾಜ ವಿರೋಧಿ ಶಕ್ತಿಗಳೊಂದಿಗೆ ಗುರುತಿಸಿಕೊಂಡು ಅಪರಾಧ ಕೃತ್ಯಗಳಲ್ಲಿ ಭಾಗವಹಿಸುವ ಯಾವುದೇ ಪೊಲೀಸ್ ಸಿಬ್ಬಂದಿ ವಿರುದ್ದ ನಿರ್ದಾಕ್ಷಿಣ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.

ಸಚಿವರು ಗುರುವಾರ ನಗರದಲ್ಲಿ ಮಾತನಾಡಿ, ಚಾಮರಾಜಪೇಟೆ ವ್ಯಾಪ್ತಿಯಲ್ಲಿ, 6.40 ಕೋಟಿ ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುವ ಟ್ರಾಫಿಕ್ ಪೊಲೀಸ್ ಠಾಣೆಯ ಶಂಕುಸ್ಥಾಪನೆ ಕಾರ್ಯ ನೆರವೇರಿಸಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.

ಮುಖ್ಯಮಂತ್ರಿಗಳ ನಿವಾಸದ ಬಳಿ, ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿತವಾಗಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಗಳು, ನಿಷೇಧಿತ ಗಾಂಜಾ ಮಾರಾಟ ಜಾಲದೊಂದಿಗೆ ಸಂಪರ್ಕ ಹೊಂದಿದ್ದರು ಎನ್ನಲಾದ ವಿಷಯಕ್ಕೆ ಸಂಬಂಧಿಸಿದಂತೆ, ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದರು.

ಇಂತಹ ಹೀನ ಕೃತ್ಯಗಳನ್ನು ಸಹಿಸಲಾಗುವುದಿಲ್ಲ, ಕೇವಲ ಬೆರಳಣಿಕೆ ಯಷ್ಟು ಮಂದಿ ಸಿಬ್ಬಂದಿಯಿಂದ, ಸುಮಾರು ಒಂದು ಲಕ್ಷಕ್ಕೂ ಮೀರಿ ಇರುವ ಇಲಾಖೆ ಸಿಬ್ಬಂದಿಗಳಿಗೆ ಕೆಟ್ಟ ಹೆಸರು ಬರುತ್ತದೆ” ಎಂದರು.

ಅಪರಾಧ ಜಗತ್ತನ್ನು ಬಗ್ಗು ಬಡಿಯಲು ನೇಮಕವಾದ, ಸಿಬ್ಬಂದಿಗಳು, ಅವರೊಂದಿಗೆ ಶಾಮೀಲಾಗುವುದು ಅಕ್ಷಮ್ಯ ಅಪರಾಧ ಎಂದು ಅಭಿಪ್ರಾಯಪಟ್ಟ ಸಚಿವರು “ಅಂಥವರನ್ನು ಕೇವಲ ಸೇವೆಯಿಂದ ಅಮಾನತು ಮಾಡಿದರೆ ಸಾಲದು,ಅಂಥವರು ಇಲಾಖೆಯಲ್ಲಿ ಇರಬಾರದು, ಈ ವಿಷಯಕ್ಕೆ ಸಂಬಂಧಿಸಿದಂತೆ ಸಂಪೂರ್ಣ ವರದಿ ಪಡೆದುಕೊಂಡು ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಕೆಲವು ಯುವ ಕಾಂಗ್ರೆಸ್ ನಾಯಕರು ಕಳೆದ ರಾತ್ರಿ ಹೊಡೆದಾಡಿಕೊಂಡಿದ್ದಾರೆ, ಎನ್ನಲಾದ ವಿಷಯಕ್ಕೆ ಸಂಬಂಧಿಸಿದಂತೆ, ಉತ್ತರಿಸಿ, ನಗರದ ಪೊಲೀಸರು, ಈವರೆಗೆ ಯಾವುದೇ ದೂರನ್ನು ಯಾರಿಂದಲೂ ಪಡೆದುಕೊಂಡಿಲ್ಲ, ದೂರು ದಾಖಲಾದರೆ, ನಮ್ಮ ಪೊಲೀಸರು ವಿಚಾರಣೆ ನಡೆಸುತ್ತಾರೆ ಎಂದರು.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

6 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

11 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

12 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

13 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

13 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

13 hours ago