ಕಾಪು, ಜು. 22 : ಸಮಾಜ ಸೇವಾ ವೇದಿಕೆ ಕಳತ್ತೂರು ಮತ್ತು ಸಫಿಯ ಉಮರಬ್ಬ ಫ್ಯಾಮಿಲಿ ಟ್ರಸ್ಟ್ ಚಂದ್ರನಗರ ಇವರ ನೇತೃತ್ವದಲ್ಲಿ ಚಂದ್ರನಗರ ಯು.ಎಸ್.ಎಫ್ ಕಾಂಪ್ಲೆಕ್ಸ್ ನಲ್ಲಿ ಸೌಹಾರ್ದ ಕೂಟ ಈದ್ ಆಚರಣೆ ನಡೆಯಿತು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಮಾಜ ಸೇವಾ ವೇದಿಕೆಯ ಅಧ್ಯಕ್ಷ ಮಹಮ್ಮದ್ ಫಾರೂಕ್ ಚಂದ್ರನಗರ ಮಾತನಾಡಿ, ಸಮುದಾಯದ ಸೇವೆಯಲ್ಲಿ ಸಂತೃಪ್ತಿಯನ್ನು ಕಾಣುವ ಸಮಾನ ಮನಸ್ಕ ಸದಸ್ಯರನ್ನು ಸೇರಿಸಿಕೊಂಡು ಪ್ರಾರಂಭಿಸಿರುವ ವೇದಿಕೆಯ ಮೂಲಕ ಇನ್ನಷ್ಟು ಸೇವಾ ಕಾರ್ಯಗಳನ್ನು ನಡೆಸಲು ಉದ್ದೇಶಿಸಲಾಗಿದೆ. ಎರಡು ವರ್ಷಗಳ ಅವಧಿಯಲ್ಲಿ ತೊಂದರೆಗೊಳಗಾದ ಜನರಿಗೆ ಪಡಿತರ ಕಿಟ್, ಆರೋಗ್ಯ ಕಿಟ್, ವೈದ್ಯರು, ಆಶಾ ಕಾರ್ಯಕರ್ತೆಯರು ಸಹಿತ ಕೊರೊನಾ ವಾರಿಯರ್ಸ್ ಗೆ ಗೌರವಾರ್ಪಣೆ ಸಹಿತ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಈದ್ ಸೌಹಾರ್ದ ಕೂಟದ ಮೂಲಕ ಜನರಿಗೆ ಇನ್ನಷ್ಟು ಹತ್ತಿರವಾಗುವ ಪ್ರಯತ್ನ ನಡೆಯುತ್ತಿದೆ ಎಂದರು.
ಸೌಹಾರ್ದಕೂಟ ಈದ್ ಆಚರಣೆಯ ಅಂಗವಾಗಿ ಸುಮಾರು150 ಕ್ಕೂ ಅಧಿಕ ಮಂದಿಗೆ ಫುಡ್ ಕಿಟ್ / ಆಹಾರ ಪೊಟ್ಟಣ ಗಳನ್ನು ವಿತರಿಸಲಾಯಿತು.
ಕಾಪು – ಕಳತ್ತೂರು ಸಮಾಜ ಸೇವಾ ವೇದಿಕೆಯ ಅಧ್ಯಕ್ಷ ಮಹಮ್ಮದ್ ಫಾರೂಕ್ ಚಂದ್ರನಗರ, ಸಫಿಯಾ ಉಮ್ಮರಬ್ಬ ಫ್ಯಾಮಿಲಿ ಟ್ರಸ್ಟ್ ನ ಸ್ಥಾಪಕ ಅಧ್ಯಕ್ಷ ಕೆ. ಉಮರಬ್ಬ, ವೇದಿಕೆಯ ಪದಾಧಿಕಾರಿಗಳಾದ ದಿವಾಕರ್ ಡಿ. ಶೆಟ್ಟಿ,ದಿವಾಕರ್ ಬಿ. ಶೆಟ್ಟಿ, ರಾಜೇಶ್ ಕುಲಾಲ್, ದಯಾನಂದ ಶೆಟ್ಟಿ ದೆಂದೂರುಕಟ್ಟೆ , ಪತ್ರಕರ್ತ ರಾಕೇಶ್ ಕುಂಜೂರು, ಉದ್ಯಮಿ ದಿನೇಶ್ ಆಚಾರ್ಯ ಶಿರ್ವ, ಫಕ್ರುದ್ದೀನ್ ಆಲಿ ಮೊದಲಾದವರು ಉಪಸ್ಥಿತರಿದ್ದರು.
ಕಾಪು – ಕಳತ್ತೂರು ಸಮಾಜ ಸೇವಾ ವೇದಿಕೆಯ ಸಂಚಾಲಕ ದಿವಾಕರ ಡಿ. ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…