ರಾಮನಗರ : ಸಾಮಾಜಿಕ ಜಾಲತಾಣದಲ್ಲಿ ತಮ್ಮ ಪ್ರವಚನಗಳ ಮೂಲಕ ಸದಾ ಸುದ್ದಿಯಲ್ಲಿರುತ್ತಿದ್ದ ನಿತ್ಯಾನಂದ ಸ್ವಾಮಿಜಿ ಇದೀಗ ತಾವು ಸಮಾಧಿ ಸ್ಥಿತಿಯಲ್ಲಿರುವುದಾಗಿ ಘೋಷಿಸಿ ಮತ್ತೆ ಸುದ್ದಿಗೆ ಬಂದಿದ್ದಾರೆ.
ಇತ್ತೀಚೆಗೆ ನಿತ್ಯಾನಂದ ಸ್ವಾಮಿಜಿ ಅವರ ಯಾವುದೇ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಕಾಣದ ಹಿನ್ನಲೆ ನಿತ್ಯಾನಂದ ಸ್ವಾಮಿಜಿ ಸಾವನಪ್ಪಿದ್ದಾರೆ ಎಂದು ಸುದ್ದಿ ಹರಡಿಸಿದ್ದಾರೆ. ಆದರೆ ಈ ಬಗ್ಗೆ ಸ್ಪಷ್ಟನೆಯನ್ನು ನೀಡಿರುವ ನಿತ್ಯಾನಂದ ಸ್ವಾಮಿಜಿ ಕೈಲಾಸ ಪೀಠ ಹೆಸರಿನ ಫೇಸ್‌ಬುಕ್ ಪೇಜ್‌ನಲ್ಲಿ ಈ ಸಂಬಂಧ ಪೋಸ್ಟ್ ಹಾಕಲಾಗಿದ್ದು, ಅಲ್ಲಿ ನಿತ್ಯಾನಂದರ ಸಂದೇಶಗಳನ್ನು ಬರೆಯಲಾಗಿದೆ. ನಿತ್ಯಾನಂದ ಕೈ ಬರಹ ಇರುವ ಫೋಟೊ ಸಹ ಇದೆ. ‘ನಾನು ಸದ್ಯ ಸಮಾಧಿ ಸ್ಥಿತಿ ತಲುಪಿದ್ದು, ಮತ್ತೆ 2026ರ ವೇಳೆಗೆ ಲೌಕಿಕ ಜಗತ್ತಿನ ಚಟುವಟಿಕೆಗಳಿಗೆ ಹಿಂತಿರುಗುತ್ತೇನೆ’ ಎಂದು ಅದರಲ್ಲಿ ಬರೆಯಲಾಗಿದೆ.
ನಾನು ಈಗಾಗಲೇ ಸತ್ತು ಹೋಗಿದ್ದೇನೆ ಎಂದು ಕೆಲವರು ಸುದ್ದಿ ಹಬ್ಬಿಸಿದ್ದಾರೆ. ಅದೆಲ್ಲ ಸುಳ್ಳು. ಈಗಲೂ 27 ವೈದ್ಯರ ತಂಡ ನನ್ನನ್ನು ನೋಡಿಕೊಳ್ಳುತ್ತಿದೆ. ಸಮಾಧಿ ಸ್ಥಿತಿಯಲ್ಲಿದ್ದರೂ ನಿತ್ಯ ಶಿವ ಪೂಜೆ ಮಾಡುವುದನ್ನು ಬಿಟ್ಟಿಲ್ಲ. ಆದರೆ ನೀರು–ಆಹಾರ ಸ್ವೀಕರಿಸುತ್ತಿಲ್ಲ ಎಂದೂ ನಿತ್ಯಾನಂದ ಸ್ಪಷ್ಟನೆ ನೀಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…