ಸಮುದ್ರ ಮಂಥನದ ಕಾಲದಲ್ಲಿ ಕ್ಷೀರ ಸಾಗರದಲ್ಲಿ ಹುಟ್ಟಿ ಬಂದ ೫ ವೃಕ್ಷಗಳ ಪೈಕಿ ಪಾರಿಜಾತವೂ ಒಂದು : ಇದರಲ್ಲಿರುವ ಔಷಧೀಯ ಗುಣಗಳ ಬಗ್ಗೆ ತಿಳಿಯೋಣ..-Vishwanews24

ಸಮುದ್ರ ಮಂಥನದ ಕಾಲದಲ್ಲಿ ಕ್ಷೀರ ಸಾಗರದಲ್ಲಿ ಹುಟ್ಟಿ ಬಂದ ೫ ವೃಕ್ಷಗಳ ಪೈಕಿ ಪಾರಿಜಾತವೂ ಒಂದು ..

ಇದರಲ್ಲಿರುವ ಔಷಧೀಯ ಗುಣಗಳ ಬಗ್ಗೆ ತಿಳಿಯೋಣ..

ಪಾರಿಜಾತದ ಹೂವು ದೇವರ ಪೂಜೆಗೆ  ಬಹಳ ಶ್ರೇಷ್ಠವಾದ ಹೂವು. ದೇವಾಸುರರ ‘ಸಮುದ್ರ ಮಂಥನ’ದ ಕಾಲದಲ್ಲಿ ಕ್ಷೀರ ಸಮುದ್ರದಿಂದ ಉದಿಸಿದ ಹದಿನಾಲ್ಕು ರತ್ನಗಳಲ್ಲಿ ಐದು ಕಲ್ಪವೃಕ್ಷಗಳು ಹುಟ್ಟಿದವೆಂದು ಪ್ರತೀತಿ ಇದೆ. ಅವುಗಳೆಂದರೆ ಪಾರಿಜಾತ,  ಮಂದಾರ, ಸಂತಾನ, ಕಲ್ಪವೃಕ್ಷ, ಹರಿಚಂದನಗಳಾಗಿವೆ. ಪಾರಿಜಾತ ಹೂವನ್ನು ತಿಳುವಳಿಕೆ ಹಾಗೂ ಜ್ಞಾನದ ಸಂಕೇತ ಎನ್ನುತ್ತಾರೆ. ಈ ಹೂವಿನ ಕಂಪು ಮೂಗಿಗೆ ತುಂಬಾ ಹಿತ, ಈ ಹೂ ಸೂರ್ಯ ಮುಳುಗಿದ ನಂತರ ಅರಳುವುದರಿಂದ ಇದನ್ನು ನೈಟ್ ಜಾಸ್ಮಿನ್‌ ಎಂದು ಕೂಡ ಕರೆಯಲಾಗುವುದು. ಇದನ್ನು ದೇವ ಪುಷ್ಮ ಎಂದು ಕರೆಯಲಾಗುವುದು.

ಸುರಭಿ ಮತ್ತು ವಾರುಣಿಯ ನಂತರ ಜನಿಸಿದ ಪಾರಿಜಾತವನ್ನು ದೇವತೆಗಳು ದೇವೇಂದ್ರನಿಗೆ ಕೊಟ್ಟರು. ಕೃಷ್ಣಾವತಾರದ ಕಾಲದಲ್ಲಿ ಕೃಷ್ಣನು ದೇವಲೋಕದಿಂದ ಪಾರಿಜಾತ ಗಿಡವನ್ನು ತಂದು ಸತ್ಯಭಾಮೆಯ ಅಂಗಳದಲ್ಲಿ ನೆಡುತ್ತಾನೆ. ಅದರ ಹೂವುಗಳು ರುಕ್ಮಿಣಿಯ ಅಂಗಳಕ್ಕೆ ಬೀಳುತ್ತಿದ್ದು, ಈ ಪ್ರಸಂಗದಲ್ಲಿ ಸತ್ಯಭಾಮೆಯಲ್ಲಿನ ಅಹಂಕಾರ ನಿರ್ಮೂಲವಾಯಿತು ಎನ್ನವುದು ಪುರಾಣದ ಸ್ವಾರಸ್ಯಕರ ಕಥೆ.

ಇನ್ನೊಂದು ಕಥೆಯ ಪ್ರಕಾರ ಪಾರಿಜಾತಕ ಎಂಬ ರಾಜಕುಮಾರಿ ಸೂರ್ಯನನ್ನು ಪ್ರೀತಿಸುತ್ತಿದ್ದಳು. ಸೂರ್ಯ ಅವಳನ್ನು ತೊರೆದಾಗ ವಿರಹದಿಂದ ಅಗ್ನಿಗೆ ಆತ್ಮಾರ್ಪಣೆ ಮಾಡಿಕೊಂಡ ಪಾರಿಜಾತಕಳ ಬೂದಿಯಿಂದ ಪಾರಿಜಾತ ಗಿಡವು ಹುಟ್ಟಿತು. ಅವಳು ಬತ್ತದ ತನ್ನ ಪ್ರೀತಿಯ ಧಾರೆಯ ಅಮೃತ ಸಿಂಚನವನ್ನು ಬೆಳಗಿನ ಸೂರ್ಯನಿಗೆ ಸಮರ್ಪಿಸುತ್ತಾಳೆ. ಸೂರ್ಯನು ಅಸ್ತಮಿಸಿದ ನಂತರ ಅರಳಿ ಸೂರ್ಯ ಬರುವ ಮೊದಲೇ ಉದುರುವ ಇದು ಸೂರ್ಯನನ್ನು ಇನ್ನೆಂದಿಗೂ ನೋಡ ಲಾರೆನೆಂಬ ಪ್ರತಿಜ್ಞೆಯನ್ನು ಇಂದಿಗೂ ಪಾಲಿಸುತ್ತಿದೆ ಎನ್ನುತ್ತಾರೆ. ಸೂರ್ಯನ ಪ್ರಖರ ಕಿರಣ ತಾಳಲಾರದೇ ಉದುರುವ ಈ ಕೋಮಲ ಹೂವಿನ ನೋವಿನ ಕಥೆಯ ಈ ಮರಕ್ಕೆ ಸೊರಗಿದ ಮರವೆಂತಲೂ ಹೆಸರಿದೆ.

ಪಾರಿಜಾತದಲ್ಲಿ ಸಾಮಾನ್ಯವಾಗಿ ಎರಡು ಬಗೆ ಕಂಡು ಬರುತ್ತದೆ. ಆರು ದಳಗಳು ಬಿಡಿಬಿಡಿ ಇದ್ದು ಹಿಂದಕ್ಕೆ ಮುದುರಿದಂತಿರುವುದು ಒಂದು ಬಗೆಯಾದರೆ, ಇನ್ನೊಂದು ದಳ ಅಗಲವಿದ್ದು ಒಂದಕ್ಕೊಂದು ಸೇರಿದಂತಿರುತ್ತದೆ. ಎಲೆಗಳ ಆಕಾರದಲ್ಲೂ ವ್ಯತ್ಯಾಸವಿದೆ ಸುವಾಸನೆ ಸೂಸುವ ಈ ಸುಂದರ ಹೂವು ಕೆಂಪು ತೊಟ್ಟು, ಬಿಳಿಯ ಮೃದುವಾದ ಎಸಳುಗಳನ್ನು ಹೊಂದಿ ಮುಟ್ಟಿದರೆ ಬಾಡುವುದೇನೋ ಎಂಬಷ್ಟು ಕೋಮಲತೆ ಹೊಂದಿದೆ.

ಬೀಜದಿಂದಲೂ ಸಸ್ಯಾಭಿವೃದ್ಧಿಯಾಗುವ ಇದನ್ನು ಮಳೆಗಾಲದಲ್ಲಿ ಗೆಲ್ಲುಗಳನ್ನು ನೆಟ್ಟು ಸಸ್ಯಾಭಿವೃದ್ಧಿ ಮಾಡಬಹುದು. ಹತ್ತರಿಂದ ಹದಿನೈದು ಅಡಿವರೆಗೆ ಬೆಳೆಯಬಲ್ಲ ಇದು ದೊಡ್ಡ ಗಿಡವಾದಷ್ಟೂ ಹೆಚ್ಚು ಹೂವು ಸುರಿಸುತ್ತದೆ. ನಿಕಾಂಥಿಸ್ ಅರ್ಬಸ್ಟ್ರಿಸ್ಟಿಸ್ ಎಂಬ ಇದರ ವೈಜ್ಞಾನಿಕ ಹೆಸರು, ‘ರಾತ್ರಿ ವೇಳೆ ಹೂವರಳಿಸುವ ದುಃಖತಪ್ತ ಮರ’ ಎಂಬ ಅರ್ಥವನ್ನು ಸೂಚಿಸುತ್ತದೆ. ಸಂಸ್ಕೃತದಲ್ಲಿ ಶೆಫಾಲಿಕಾ, ಬೆಂಗಾಲಿಯಲ್ಲಿ ಹರ್‌­ಸಿಂಗಾರ್, ಮಲಯಾಳದಲ್ಲಿ ಪವಿಳ ಮಲ್ಲಿಗೆ, ತಮಿಳಿನಲ್ಲಿ ಮಂಜು ಹೂವು ಎನ್ನುವರು.

ಇದರಲ್ಲಿರುವ ಔಷಧೀಯ ಗುಣಗಳ ಬಗ್ಗೆ ತಿಳಿಯೋಣ

ಸುಶ್ರುತ ಸಂಹಿತೆಯಲ್ಲಿ ಇದರ ಔಷಧಿಯ ಗುಣದ ಬಗ್ಗೆ ಹೇಳಲಾಗಿದ್ದು, ತೊಗಟೆಯ ಕಷಾಯದಿಂದ ಗಾಯಗಳನ್ನು ತೊಳೆದರೆ ಪರಿಣಾಮಕಾರಿ,

ಪಾರಿಜಾತ ಹಾಗೂ ತುಳಸಿಯ ಎಲೆಯ ಕಷಾಯ ಕೆಮ್ಮು ನೆಗಡಿಗೆ ಉಪಕಾರಿ.

ಹೂವನ್ನು ಅರೆದು ಮುಖಕ್ಕೆ ಪ್ಯಾಕ್ ಹಾಕಿ ಅರ್ಧ ಗಂಟೆಯ ನಂತರ ತೊಳೆದರೆ ಮುಖ ಕೋಮಲ ಹಾಗೂ ಕಾಂತಿಯುತವಾಗುತ್ತದೆ.

ತಲೆಯಲ್ಲಾಗುವ ಗಾಯಗಳಿಗೆ ಪಾರಿಜಾತದ ಎಲೆ ದಾಸವಾಳದ ಎಲೆಯನ್ನು ಅರೆದು ಪ್ಯಾಕ್ ಹಾಕಿ ಒಂದೆರಡು ಗಂಟೆ ಬಿಟ್ಟು ತೊಳೆಯಬೇಕು.

ಸಂಧಿವಾತ ನಿವಾರಣೆ ಮಾಡುವ ಪಾರಿಜಾತ ವಿಪರೀತ ಕಾಡುವ ಕೀಲುನೋವು ಶಮನ ಮಾಡುವ ಗುಣ ಪಾರಿಜಾತ ಗಿಡಕ್ಕಿದೆ, ಇದರ ಎಲೆಗಳಿಂದ ಮಾಡುವ ಕಷಾಯ ಸಂಧಿವಾತ ನೋವು ಕಡಿಮೆಯಾಗುವುದು. ಪ್ರತಿದಿನ ಮುಂಜಾನೆ ಪಾರಿಜಾತದ ಎಲೆಗಳ ಕಷಾಯ ಕುಡಿಯುತ್ತಿದ್ದರೆ ಸಂಧಿವಾತ ನಿಯಂತ್ರಣಕ್ಕೆ ಬರುತ್ತದೆ. ಪಾರಿಜಾತ ಎಲೆಯನ್ನು ಜಜ್ಜಿ ಅದನ್ನು ತೆಂಗಿನೆಣ್ಣೆಯಲ್ಲಿ ಕುದಿಸಿ ಅದನ್ನು ಹಚ್ಚುವುದರಿಂದಲೂ ನೋವು ಕಡಿಮೆಯಾಗುವುದು.

ಕೆಮ್ಮು, ಜಂತು ಹುಳ ನಿವಾರಣೆ ಪಾರಿಜಾತ ಗಿಡದ ಎಲೆಯಿಂದ ಮಾಡಿದ ಕಷಾಯ ಕೆಮ್ಮು ಹಾಗೂ ಜಂತುಹುಳ ನಿವಾರಣೆಗೆ ಬಳಸುತ್ತಾರೆ. ಮಕ್ಕಳಿಗೆ ಇದರ ಎಲೆಯ ಔಷಧ ಮಾಡಿ ನೀಡಲಾಗುವುದು. ಮಲಬದ್ಧತೆ ಸಮಸ್ಯೆ ನಿವಾರಣೆ ಮಾಡುವಲ್ಲಿಯೂ ಪಾರಿಜಾತ ಎಲೆಯ ಕಷಾಯ ಪರಿಣಾಮಕಾರಿಯಾಗಿದೆ.

ಹತ್ತು ಪಾರಿಜಾತ ಎಲೆಯನ್ನು ಒಂದು ಕಪ್ ನೀರಿಗೆ ಹಾಕಿ ಅದು ಅರ್ಧ ಕಪ್ ಆಗುವಷ್ಟು ಹೊತ್ತು ಕುದಿಸಿ, ಅದಕ್ಕೆ ಶುಂಠಿ ರಸ ಹಾಗೂ ಜೇನು ಸೇರಿಸಿ ಕುಡಿಯಿರಿ. ಇದನ್ನು ಮೂರು ಹೊತ್ತು ಕುಡಿಯುತ್ತಿದ್ದರೆ ಬೇಗನೆ ಕೆಮ್ಮು ಕಡಿಮೆಯಾಗುವುದು.

ಅಲ್ಲದೆ ಇದರ ಎಲೆಗಳನ್ನು ಕುದಿಸಿ ಕುಡಿಯುವುದರಿಮದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುವುದು.

ಪಾರಿಜಾತ ಬೀಜ ಪಾರಿಜಾತ ಬೀಜವನನ್ನು ಸಂಗ್ರಹಿಸಿ ಪುಡಿ ಮಾಡಿ ಇದನ್ನು ಔಷಧಿಯಾಗಿ ಕಾಮಲೆ ರೋಗ ನಿವಾರಣೆಗೆ ಕೂಡ ಬಳಸಲಾಗುವುದು.

ಸೌಂದರ್ಯ ಉತ್ಪನ್ನ ಪಾರಿಜಾತ ಬೀಜದ ಪುಡಿಯನ್ನು ಪೌಡರ್ ಮಾಡಿ ಇದನ್ನು ಮುಖದ ಸೌಂದರ್ಯ ವೃದ್ದಿಸಲು ಬಳಸಬಹುದು.

ಹೂವು ಸುಗಂಧ ದ್ರವ್ಯ ತಯಾರಿಕೆಯಲ್ಲಿ ಉಪಯೋಗವಾಗುತ್ತದೆ. ಹಿತವಾದ ಇದರ ಕಂಪು ತೀಕ್ಷ್ಣತೆ ಇಲ್ಲದ ಇದರ ಸುಗಂಧ ತಲೆನೋವನ್ನು ಹೋಗಲಾಡಿಸುತ್ತದೆ. ಹೂವು ಮನೆಯೊಳಗಿದ್ದರೆ ಜೇನಿನಂಥ ಪರಿಮಳದ ಅನುಭವವಾಗುತ್ತದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago